Advertisement

ಉತ್ತರ ಕರ್ನಾಟಕ‌ ಬರ ಘೋಷಣೆಗೆ ಎಂಬಿಪಿ ಆಗ್ರಹ

06:30 AM Aug 12, 2018 | Team Udayavani |

ಬೆಂಗಳೂರು:ಉತ್ತರ ಕರ್ನಾಟಕ ಭಾಗದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವುದರಿಂದ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ಬರ ತಾಲೂಕುಗಳ ಘೋಷಣೆ ಮಾಡಬೇಕು ಎಂದು ಮಾಜಿ ಸಚಿವ ಎಂ.ಬಿ. ಪಾಟೀಲ್‌ ಆಗ್ರಹಿಸಿದ್ದಾರೆ.

Advertisement

ಸುದ್ದಿಗಾರರ ಜತೆ ಮಾತನಾಡಿದ ಅವರು,  ಮಂಡ್ಯದಲ್ಲಿ ಮಳೆ ಆಗಿರುವುದರಿಂದ ಆ ಭಾಗದಲ್ಲಿ ಭತ್ತ ನಾಟಿ ಮಾಡುತ್ತಿದ್ದಾರೆ. ಉತ್ತರ ಕರ್ನಾಟಕ ಭಾಗದಲ್ಲಿ ಮಳೆ ಕಡಿಮೆಯಾಗಿರುವುದರಿಂದ  ಆ ಭಾಗದ ಪರಿಸ್ಥಿತಿ ಮುಖ್ಯಮಂತ್ರಿಗೆ ಗೊತ್ತಿದೆ. ಆಲಮಟ್ಟಿ ಜಲಾಶಯ ಭರ್ತಿಯಾಗಿದೆ. ಆದರೆ, ಕಾಲುವೆ ಇರುವ ಕಡೆಗೆ ಮಾತ್ರ ಬೆಳೆ ಬೆಳೆಯಲು ಅವಕಾಶವಿದ್ದು, ಉಳಿದ ಪ್ರದೇಶದಲ್ಲಿ ಬರ ಪರಿಸ್ಥಿತಿ ಇದೆ. ಉತ್ತರ ಕರ್ನಾಟಕ ಭಾಗದಲ್ಲಿ ಬೆಳೆ ಹಾನಿಯಾಗಿದ್ದು, ಮೇವಿನ ಕೊರತೆ ಉಂಟಾಗಲಿದೆ.ಅಲ್ಲದೇ ಜನರು ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಕುರಿತು ಮುಖ್ಯಮಂತ್ರಿ ಕುಮಾರಸ್ವಾಮಿಯನ್ನು ಭೇಟಿ ಮಾಡಿ ಮಾತುಕತೆ ನಡೆಸುತ್ತೇನೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next