Advertisement

ಕಿಮ್ ಜಾಂಗ್ ಉನ್ ನೇತೃತ್ವದಲ್ಲಿ ಉತ್ತರ ಕೊರಿಯಾ ಕೋವಿಡ್ ಸಭೆ ವಿಶೇಷ

02:12 AM Apr 13, 2020 | Hari Prasad |

ಉತ್ತರ ಕೊರಿಯಾದಲ್ಲಿ ಕೋವಿಡ್ ಸೋಂಕು ಹರಡುವಿಕೆ ತಡೆಗೆ ಸಾರ್ವಜನಿಕರು ಕಟ್ಟುನಿಟ್ಟಿನ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಲ್ಲಿನ ಸರ್ಕಾರ ಆದೇಶಿಸಿದೆ. ವಿಶೇಷವೆಂದರೆ, ದೇಶದಲ್ಲಿ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಶನಿವಾರ ನಡೆದ ರಾಜಕೀಯ ಜನಪ್ರತಿನಿಧಿಗಳ ಸಭೆಯಲ್ಲಿ ಅಧ್ಯಕ್ಷ ಕಿಮ್‌ ಸೇರಿದಂತೆ ಯಾರೂ ಕೂಡ ಮಾಸ್ಕ್ ಧರಿಸಿರಲಿಲ್ಲ.

Advertisement

ಎಂದಿನಂತೆಯೇ ಸಭೆ ನಡೆಸಲಾಯಿತು. ಸಾಮಾಜಿಕ ಅಂತರವನ್ನೂ ಕಾಯ್ದುಕೊಂಡಿರಲಿಲ್ಲ. ಸಭೆಯ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next