Advertisement
ವಿಧಾನಸೌಧದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಪರಿಹಾರ ನೀಡಲು ಮೂರು ತಿಂಗಳಿಗೊಮ್ಮೆ ತಂತ್ರಾಂಶದಲ್ಲಿ ನಮೂದಿಸಿ ವಿತರಿಸಲಾಗುತ್ತಿತ್ತು. ಈಗ ಈ ವ್ಯವಸ್ಥೆ ಬದಲಾವಣೆ ತಂದಿದ್ದು, ಎರಡು-ಮೂರು ದಿನಕ್ಕೊಮ್ಮೆ ತಂತ್ರಾಂಶದಲ್ಲಿ ನಮೂದಿಸಿ ಪರಿಹಾರ ಬಿಡುಗಡೆ ಮಾಡುವ ವ್ಯವಸ್ಥೆ ಜಾರಿಗೊಳಿಸಲಾಗಿದೆ. ಅಲ್ಲದೆ, ಕೇಂದ್ರಕ್ಕೆ ಹೆಚ್ಚಿನ ಪರಿಹಾರ ನೀಡುವಂತೆ ಪ್ರಸ್ತಾವನೆ ಸಲ್ಲಿಸುತ್ತಿದ್ದು, ಈ ಸಂಬಂಧ ವರದಿ ಸಿದ್ಧಪಡಿಸಲಾಗುತ್ತಿದೆ ಎಂದರು.
Related Articles
Advertisement
ಪರಿಹಾರ ನೀಡಲು ಯಾವುದೇ ರೀತಿಯ ಹಣದ ಕೊರತೆ ಇಲ್ಲ. ಮಧ್ಯವರ್ತಿಗಳಿಗೂ ಅವಕಾಶ ಇಲ್ಲ. ರೈತರಿಗೆ ಅನುಕೂಲ ಆಗಬೇಕು. ಸರ್ಕಾರ ರೈತರಿಗೆ ಇನ್ನಷ್ಟು ಅನುಕೂಲ ಮಾಡಿಕೊಡಲು ಬದ್ಧವಾಗಿದೆ ಎಂದರು.
ಕೋವಿಡ್ ಹಾವಳಿಗೆ ಸಂಬಂಧಿಸಿದಂತೆ ಮಾತಾನಾಡಿದ ಸಚಿವ ಆರ್. ಅಶೋಕ್, ರಾಜ್ಯದಲ್ಲಿ ಸದ್ಯಕ್ಕೆ ಲಾಕ್‌ಡೌನ್ ಮಾಡುವುದಿಲ್ಲ. ರಾಜ್ಯದ ಗಡಿ ಭಾಗಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಎಲ್ಲ ಜಿಲ್ಲಾಧಿಕಾರಿಗಳಿಗೆ ಆದೇಶಿಸಲಾಗಿದೆ. ಜಿಲ್ಲಾಧಿಕಾರಿಗಳು ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಹೊರ ರಾಜ್ಯಗಳಿಂದ ಬಂದ ವಿದ್ಯಾರ್ಥಿಗಳಿಗೆ ಎರಡು ಬಾರಿ ಪರೀಕ್ಷೆ ನಡೆಸಬೇಕು.
ನಿರಂತರವಾಗಿ ಸರ್ಕಾರ ಕೋವಿಡ್ ಪರಿಸ್ಥಿತಿಯ ಅವಲೋಕನ ಮಾಡುತ್ತಿದೆ. ಹೊರದೇಶದಿಂದ ಬರುವವರನ್ನು ತೀವ್ರ ತಪಾಸಣೆಗೆ ಒಳಪಡಿಸುತ್ತೇವೆ. ಕಂದಾಯ ಇಲಾಖೆಯ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಸಾಕಷ್ಟು ಹಣ ಬಿಡುಗಡೆ ಮಾಡಲಾಗುತ್ತಿದೆ. ಜನರು ಭಯ ಬಿಟ್ಟು ಜವಾಬ್ದಾರಿಯಿಂದ ಇರಬೇಕು ಎಂದು ಹೇಳಿದರು.