ಮುಂಬೈ: ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಗಡಿ ವಿವಾದದ ನಡುವೆ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಕರ್ನಾಟಕದ ಮರಾಠಿ ಭಾಷಿಕ ಭಾಗಗಳನ್ನು ತಮ್ಮ ರಾಜ್ಯಕ್ಕೆ ಸೇರಿಸಲಾಗುವುದು ಎಂದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರದ ಒಂದೇ ಒಂದು ಹಳ್ಳಿಯೂ ಕರ್ನಾಟಕಕ್ಕೆ ಹೋಗುವುದಿಲ್ಲ. ಬದಲಾಗಿ ಬೆಳಗಾವಿ-ಕಾರವಾರ-ನಿಪ್ಪಾಣಿ ಸೇರಿದಂತೆ ಮರಾಠಿ ಭಾಷಿಕ ಗ್ರಾಮಗಳನ್ನೂ ನಮ್ಮ ರಾಜ್ಯಕ್ಕೆ ತರಲು ರಾಜ್ಯ ಸರ್ಕಾರ ಹೋರಾಟ ನಡೆಸಲಿದೆ ಎಂದರು.
ಇದನ್ನೂ ಓದಿ:ಪಶ್ಚಿಮ ಬಂಗಾಳ ರಾಜ್ಯಪಾಲರಾಗಿ ಸಿ.ವಿ.ಆನಂದ ಬೋಸ್ ಪ್ರಮಾಣ ವಚನ ಸ್ವೀಕಾರ
ಕರ್ನಾಟಕದೊಂದಿಗಿನ ಗಡಿ ವಿವಾದದ ಬಗ್ಗೆ ಮುಂದುವರಿಯಲು ಸಿಎಂ ಏಕನಾಥ್ ಶಿಂಧೆ ಅವರು ಎರಡು ಸಚಿವರನ್ನು ನೇಮಿಸಿದ್ದರು. ಇದಕ್ಕೆ ಪ್ರತಿಯಾಗಿ ಕರ್ನಾಟಕವೂ ಮುಕುಲ್ ರೋಹ್ಟಗಿ ಸೇರಿದಂತೆ ವಕೀಲರ ತಂಡವನ್ನು ನೇಮಿಸಿದೆ.
Related Articles
ಈ ಮಧ್ಯೆ, ಮಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ, ಮಹಾರಾಷ್ಟ್ರ ಸಿಎಂ ರಾಜ್ಯಗಳ ನಡುವೆ ವ್ಯಾಜ್ಯ ಹೆಚ್ಚಿಸುವ ಕೆಲಸವನ್ನು ಮಾಡಬಾರದು ಎಂದು ಗುಡುಗಿದ್ದಾರೆ. ಎರಡು ರಾಜ್ಯಗಳ ನಡುವೆ ಸೌಹಾರ್ದತೆ ಇರುವಾಗ, ಎಲ್ಲಾ ಭಾಷಿಕರನ್ನು ಒಂದೇ ರೀತಿಯಲ್ಲಿ ನೋಡಿಕೊಳ್ಳುವಾಗ, ಮಹಾರಾಷ್ಟ್ರದಲ್ಲಿ ದೊಡ್ಡ ಪ್ರಮಾಣ ದಲ್ಲಿ ಕನ್ನಡಿಗರು ಇರುವ ಅವರ ಹಿತರಕ್ಷಣೆ ಮಾಡುವುದು ನಮ್ಮ ಕರ್ತವ್ಯ ಎಂದು ಹೇಳಿದ್ದಾರೆ.