Advertisement
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಕೃತ್ಯದ ಹಿಂದೆ ಮಹಾನಗರ ಪಾಲಿಕೆಯ ಬಿಜೆಪಿ ಸದಸ್ಯರೊಬ್ಬರ ಕೈವಾಡವಿದೆ ಎಂದು ಆರೋಪಿಸಿರುವ ಹಿನ್ನೆಲೆಯಲ್ಲಿ ಮಾಧ್ಯಮದವರು ದೀಪಕ್ ಕುಟುಂಬದ ಅಭಿಪ್ರಾಯ ಬಯಸಿದಾಗ ಸರ್ತೋಜಿ ಈ ಹೇಳಿಕೆ ನೀಡಿದ್ದಾರೆ.
ಮಾಧ್ಯಮದಲ್ಲಿ ಪದೇ ಪದೇ ನಮ್ಮ ಕುಟುಂಬದ ಬಗ್ಗೆ ಚರ್ಚೆಯಾಗುತ್ತಿರುವುದರಿಂದ ನೆಮ್ಮದಿ ಹಾಳಾಗಿದೆ. ಈಗ ಟಿವಿ ನೋಡುವುದನ್ನೇ ಬಿಟ್ಟಿದ್ದೇವೆ. ಪ್ರಕರಣದ ಕುರಿತು ಸೂಕ್ತ ತನಿಖೆ ನಡೆಸಿ ಆರೋಪಿಗಳಿಗೆ ಕಠಿನ ಶಿಕ್ಷೆ ನೀಡಬೇಕು. ತನಿಖೆಯನ್ನು ಎನ್‌ಐಎಗೆ ವಹಿಸುವುದು ಸೂಕ್ತ ಎಂದರು. ಇನ್ನಾದರೂ ನಮ್ಮನ್ನು ನೆಮ್ಮದಿಯಿಂದ ಇರಲು ಬಿಡಿ ಎಂದು ವಿನಂತಿಸಿಕೊಂಡರು.