Advertisement

ಶಿವಲಿಂಗ ಸ್ಥಳದಲ್ಲಿಅಸ್ವಚ್ಛತೆ ಖಂಡಿಸಿ ಪ್ರತಿಭಟನೆ

11:41 AM Nov 09, 2021 | Team Udayavani |

ಆಳಂದ: ಪಟ್ಟಣದ ಹಜರತ್‌ ಲಾಡ್ಲೆ ಮಶಾಕ್‌ ದರ್ಗಾ ಪ್ರದೇಶದಲ್ಲಿನ ಶಿವಲಿಂಗ ಸ್ಥಳದಲ್ಲಿ ಅಸ್ವತ್ಛತೆ ಮಾಡಿದ್ದನ್ನು ಖಂಡಿಸಿ ಹಿಂದುಪರ ಸಂಘಟನೆ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.

Advertisement

ಪಟ್ಟಣದ ಬಸ್‌ ನಿಲ್ದಾಣ, ಶ್ರೀರಾಮ ಮಾರುಕಟ್ಟೆ, ಮುಖ್ಯರಸ್ತೆ ಮೂಲಕ ತಹಶೀಲ್ದಾರ್‌ ಕಚೇರಿ ವರೆಗೆ ಪ್ರತಿಭಟನೆ ಕೈಗೊಂಡ ಕಾರ್ಯಕರ್ತರು, ಕೂಡಲೇ ತಪ್ಪಿತಸ್ಥ ಆರೋಪಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿ ತಹಶೀಲ್ದಾರ್‌ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಜಿಪಂ ಮಾಜಿ ಸದಸ್ಯ ಹರ್ಷಾನಂದ ಗುತ್ತೇದಾರ ಮಾತನಾಡಿ, ಮುಂದಿನ ದಿನಗಳಲ್ಲಿ ಇಂತಹ ಘಟನೆ ಮರುಕಳಿಸದಂತೆ ಎಚ್ಚರ ವಹಿಸಬೇಕು. ದೇವಸ್ಥಾನ ಕಟ್ಟಿ ಪೂಜೆಗೆ ಅವಕಾಶ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.

ಆನಂದ ಬಿರಾದಾರ ಕೊರಳ್ಳಿ, ಮಹೇಶ ಗೌಳಿ, ವಿಶ್ವ ಕರ್ಮ ಸಮಾಜದ ಅಧ್ಯಕ್ಷ ಸಂಪತಕುಮಾರ ವೇದಪಾಠಕ ಮಾತನಾಡಿದರು. ಪುರಸಭೆ ಉಪಾಧ್ಯಕ್ಷ ಈರಣ್ಣಾ ಹತ್ತರಕಿ, ಮರಾಠ ಸಮಾಜದ ಅಧ್ಯಕ್ಷ ನಾಗನಾಥ ಏಟೆ, ಶರಣು ಕುಮಸಿ, ಉಪಾಧ್ಯಕ್ಷ ಮಲ್ಲಿಕಾರ್ಜುನ ಕಂದಗುಳೆ, ಪುರಸಭೆ ಸದಸ್ಯ ಸಂತೋಷ ಹೂಗಾರ, ಪುರಸಭೆ ಮಾಜಿ ಸದಸ್ಯ ಲಿಂಗರಾಜ ಪಾಟೀಲ, ರಾಜು ಷಣ್ಮೂಖ ಸೇರಿದಂತೆ ಹಿಂದುಪರ ಕಾರ್ಯಕರ್ತರು ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next