Advertisement

ಚುನಾವಣೆಗೆ ಸ್ಪರ್ಧಿಸಲ್ಲ: ಡಿ.ಎಚ್‌.ಶಂಕರಮೂರ್ತಿ

06:50 AM Jan 07, 2018 | Team Udayavani |

ಗಂಗಾವತಿ: ನಾನು ಇನ್ನು ಮುಂದೆ ಚುನಾವಣಾ ರಾಜಕೀಯದಿಂದ ದೂರ ಉಳಿಯಲು ನಿರ್ಧರಿಸಿದ್ದೇನೆ. ಈ ಬಾರಿ ಪರಿಷತ್‌ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಪಕ್ಷ ರಾಜ್ಯಪಾಲರ ಹುದ್ದೆ ನೀಡಿದರೆ ಅದನ್ನು ಸಂತೋಷದಿಂದ ನಿಭಾಯಿಸುತ್ತೇನೆಂದು ವಿಧಾನ ಪರಿಷತ್‌ ಸಭಾಪತಿ ಡಿ.ಎಚ್‌. ಶಂಕರಮೂರ್ತಿ ಹೇಳಿದರು.

Advertisement

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಜನರ ಸಮಸ್ಯೆ ಸೇರಿ ರಾಜ್ಯದ ಪ್ರಗತಿಗಾಗಿ ವಿಧಾನ ಮಂಡಲದ ಅಧಿವೇಶನ ವರ್ಷದಲ್ಲಿ 60 ದಿನ ಕಡ್ಡಾಯವಾಗಿ ನಡೆಯುವಂತಾಗಬೇಕು. ಈ ಕುರಿತು ತಾವು ಮುಖ್ಯಮಂತ್ರಿಗಳನ್ನು ನಿರಂತರವಾಗಿ ಒತ್ತಾಯಿಸುತ್ತಿದ್ದು, ಸರ್ಕಾರ ಸ್ಪಂದಿಸಬೇಕು. ಮಹಾಜನ್‌ ವರದಿ ಹಿನ್ನೆಲೆಯಲ್ಲಿ ಕೇರಳದಲ್ಲಿರುವ ಕಾಸರಗೋಡು ಕರ್ನಾಟಕಕ್ಕೆ ಸೇರಬೇಕು. ಅಲ್ಲಿ ಕನ್ನಡಿಗರು ಬಹುಸಂಖ್ಯೆಯಲ್ಲಿದ್ದಾರೆ. ಭೌಗೋಳಿಕವಾಗಿ ಕಾಸರಗೋಡು ಕರ್ನಾಟಕದ ಅವಿಭಾಜ್ಯವಾಗಿದೆ. ಕೇಂದ್ರ ಸರ್ಕಾರ ಸೂಕ್ತ ನಿರ್ಣಯ ಕೈಗೊಳ್ಳಬೇಕು ಎಂದರು.

ಇತ್ತೀಚೆಗೆ ಕರಾವಳಿಯಲ್ಲಿ ಹತ್ಯೆಯಂತಹ ಘಟನೆ ನಡೆಯುತ್ತಿದ್ದು, ಸರ್ಕಾರ ಕೂಡಲೇ ಆರೋಪಿಗಳನ್ನು ಬಂ ಧಿಸಬೇಕು. ಘಟನೆಗೆ ಕಾರಣರಾದವರು ಯಾವ ಕೋಮಿಗೆ ಸೇರಿದ್ದರೂ ಕಠಿಣ ಶಿಕ್ಷೆಯಾಗಬೇಕು. ಕರಾವಳಿಯಲ್ಲಿ ಶಾಂತಿ ಸ್ಥಾಪನೆಗೆ ಕೂಡಲೇ ಮುಂದಾಗಬೇಕು. ಪರಸ್ಪರ ನಂಬಿಕೆ ಮೂಡಲು ಈ ಕಾರ್ಯ ಮಾಡಬೇಕಿದೆ ಎಂದರು.
– ಡಿ.ಎಚ್‌. ಶಂಕರಮೂರ್ತಿ.

Advertisement

Udayavani is now on Telegram. Click here to join our channel and stay updated with the latest news.

Next