Advertisement

ಪರಿಷತ್ ಚುನಾವಣೆಗೆ ಸ್ಪರ್ಧಿಸುವುದಿಲ್ಲ: ಡಾ. ಎಂ.ಎನ್.ರಾಜೇಂದ್ರ ಕುಮಾರ್

01:47 PM Nov 20, 2021 | Team Udayavani |

ಮಂಗಳೂರು : ವಿಧಾನ ಪರಿಷತ್ ಚುನಾವಣೆ ಸ್ಪರ್ಧಾಕಣದಿಂದ ಸಹಕಾರಿ ನೇತಾರ ಡಾ ಎಂ. ಎನ್. ರಾಜೇಂದ್ರ ಕುಮಾರ್ ಅವರು ಹಿಂದೆ ಸರಿದಿದ್ದಾರೆ.

Advertisement

ಶನಿವಾರ ಅಧಿಕೃತ ವಾಗಿ ಘೋಷಣೆ ಮಾಡಿದ ಅವರು, ಸಹಕಾರ ಕ್ಷೇತ್ರದಲ್ಲಿ ಪಕ್ಷಾತೀತನಾಗಿ ಉಳಿಯುವ ಬಯಕೆ ನನ್ನದು, ಹೀಗಾಗಿ ರಾಜಕೀಯ ದಿಂದ ದೂರವಿದ್ದು, ಸಹಕಾರಿ ಕ್ಷೇತ್ರದ ಉನ್ನತಿಗೆ ಶ್ರಮಿಸುತ್ತೇನೆ ಎಂದರು.

ಪಕ್ಷಾತೀತವಾಗಿ ಚುನಾವಣೆಗೆ ನಿಲ್ಲಿ ಎಂದು ಅಭಿಮಾನಿಗಳು ಎಂದಿದ್ದಾರೆ. ಒಮ್ಮೆ ಚುನಾವಣೆಗೆ ನಿಂತರೆ ಸಹಜವಾಗಿ ಒಂದು ಪಕ್ಷದ ಪರವಾಗಿ ಹೋಗಬೇಕಾಗುತ್ತದೆ. ಕಾಂಗ್ರೆಸ್ ಟಿಕೆಟ್ ಕೊಟ್ಟರೂ ನಿಲ್ಲುವುದಿಲ್ಲ ಎಂದರು.

ನಾನು ನಿಲ್ಲುವುದಿಲ್ಲ ಎಂದು ನಿರ್ಧಾರ ಮಾಡಿದ್ದೇನೆ ಎಂದರು.

ವಿಧಾನ ಪರಿಷತ್‌ನಲ್ಲಿ ಸಹಕಾರಿ ಕ್ಷೇತ್ರಕ್ಕೆ ಒಂದು ಅವಕಾಶವನ್ನು ನೀಡುವ ನಿಟ್ಟಿನಲ್ಲಿ ನನ್ನನ್ನು ಬೆಂಬಲಿಸಿ ಎಂದು ಮತದಾರರಲ್ಲಿ, ಎಲ್ಲ ರಾಜಕೀಯ ಪಕ್ಷಗಳಲ್ಲಿ ಮನವಿ ಮಾಡಿಕೊಳ್ಳುತ್ತಿದ್ದೇನೆ’ ಎಂದು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಡಾ| ಎಂ.ಎನ್‌. ರಾಜೇಂದ್ರ ಕುಮಾರ್‌ ಹೇಳಿದ್ದರು.

Advertisement

ಚುನಾವಣ ಪ್ರಚಾರ ಕಚೇರಿಯನ್ನೂ ಉದ್ಘಾಟನೆ ಮಾಡಿದ್ದ ಅವರು, ಸಹಕಾರಿ ಕ್ಷೇತ್ರದ ಮೂಲಕ ಗ್ರಾಮೀಣ ಜನರ ಅಭಿವೃದ್ಧಿಗಾಗಿ ಶ್ರಮಿಸಿದ್ದೇನೆ. ನವೋದಯ ಸ್ವಸಹಾಯ ಸಂಘಗಳ ಮೂಲಕ ಮಹಿಳೆಯರಿಗೆ ಸ್ವಾವಲಂಬಿ, ಸ್ವಾಭಿಮಾನಿ ಬದುಕು ಕಟ್ಟಿ ಕೊಡುವ ಕಾರ್ಯ ಆಗಿದೆ. ಮುಂದಿನ ವಿಧಾನ ಪರಿಷತ್‌ ಚುನಾವಣೆಯಲ್ಲೂ ಇದೇ ರೀತಿ ನನ್ನನ್ನು ಬೆಂಬಲಿಸಿ ಎಂದಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next