ಕೌಶಂಬಿ(ಅಲಹಾಬಾದ್): ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಜಾರಿಗೆ ತಂದ ಶಾಸನದ ಆಧಾರದ ಮೇಲೆ ರಾಹುಲ್ ಗಾಂಧಿಯನ್ನು ಲೋಕಸಭೆಯ ಸದಸ್ಯತ್ವ ಸ್ಥಾನದಿಂದ ಅನರ್ಹಗೊಳಿಸಿದ ವಿಷಯದ ಬಗ್ಗೆ ವಿಪಕ್ಷಗಳು ಲೋಕಸಭೆಯ ಕಲಾಪಕ್ಕೆ ಅಡ್ಡಿಪಡಿಸಿರುವುದನ್ನು ದೇಶದ ಜನರು ಮರೆಯುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಾಗ್ದಾಳಿ ನಡೆಸಿದ್ದಾರೆ.
ಇದನ್ನೂ ಓದಿ:Karnataka poll;47 ವರ್ಷ ಒಂದೇ ಕುಟುಂಬಕ್ಕೆ ಅಧಿಕಾರ; ಗದಗ ಕ್ಷೇತ್ರದಲ್ಲಿ ಪಾಟೀಲರ ಕಾರುಬಾರು
ಶುಕ್ರವಾರ (ಎ.07) ಅಮಿತ್ ಶಾ ಅವರು ಕೌಶಂಬಿ ಮಹೋತ್ಸವವನ್ನು ಉದ್ಘಾಟಿಸಿದ ನಂತರ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತ, ಸಮಾಜದ ಎಲ್ಲಾ ಸ್ತರದ ಜನರ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ನರೇಂದ್ರ ಮೋದಿ ಅವರನ್ನು 2024ರ ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಪ್ರಧಾನಿಯನ್ನಾಗಿ ಆಯ್ಕೆ ಮಾಡಬೇಕೆಂದು ಜನರಲ್ಲಿ ಮನವಿ ಮಾಡಿಕೊಂಡರು.
ರಾಹುಲ್ ಗಾಂಧಿಯ ಸದಸ್ಯತ್ವವನ್ನು ಅನರ್ಹಗೊಳಿಸಿದ್ದಕ್ಕೆ ವಿಪಕ್ಷಗಳು ಹುಯಿಲೆಬ್ಬಿಸುತ್ತಿವೆ. ಆದರೆ ದೇಶದ ಪ್ರಜಾಪ್ರಭುತ್ವ ಅಪಾಯದಲ್ಲಿಲ್ಲ, ದೇಶದಲ್ಲಿನ ಜಾತಿಯತೆ ಮತ್ತು ವಂಶರಾಜಕಾರಣ ಅಪಾಯಕಾರಿಯಾಗಿದೆ ಎಂದು ಶಾ ಕಿಡಿಕಾರಿದ್ದಾರೆ.
ಸಮಾರಂಭದಲ್ಲಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ, ಬ್ರಿಜೇಶ್ ಪಾಠಕ್, ಉತ್ತರಪ್ರದೇಶ ಬಿಜೆಪಿ ರಾಜ್ಯಾಧ್ಯಕ್ಷ ಭೂಪೇಂದ್ರ ಚೌಧರಿ ಭಾಗವಹಿಸಿದ್ದರು.