Advertisement

ದೇಶ ಮೋದಿ ಅವರನ್ನು ಕ್ಷಮಿಸದು: ರಾಜ್‌ ಠಾಕ್ರೆ

04:24 PM May 07, 2019 | Team Udayavani |

ಮುಂಬಯಿ: ದೇಶದ ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ್‌ ಗಾಂಧಿ ವಿರುದ್ಧ‌ದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿರುವ ಮಹಾರಾಷ್ಟ್ರ ನವನಿರ್ಮಾಣ ಸೇನೆ ಮುಖ್ಯಸ್ಥ ರಾಜ್‌ ಠಾಕ್ರೆ ಅವರು, ರಾಜೀವ್‌ ಗಾಂಧಿ ವಿರುದ್ಧದ ಈ ಹೇಳಿಕೆಗಾಗಿ ದೇಶವು ಮೋದಿ ಅವರನ್ನು ಕ್ಷಮಿಸುವುದಿಲ್ಲ ಎಂದಿದ್ದಾರೆ.

Advertisement

ಉತ್ತರಪ್ರದೇಶದ ರ‍್ಯಾಲಿಯೊಂದರಲ್ಲಿ ಶನಿವಾರ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು,ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಭ್ರಷ್ಟಾಚಾರಿ ನಂ.1 ಆಗಿಯೇ ಮೃತಪಟ್ಟರು ಎಂದು ಹೇಳಿಕೆ ನೀಡಿದ್ದರು. ಇದಕ್ಕೆ ಟ್ವೀಟ್‌ ಮೂಲಕ ಆಕ್ಷೇಪ ವ್ಯಕ್ತಪಡಿಸಿರುವ ರಾಜ್‌ ಠಾಕ್ರೆ ಅವರು, ದ್ವೇಷ, ಅಂತ್ಯವಿಲ್ಲದ ಸುಳ್ಳು ಮತ್ತು ಹಿಂಜರಿಕೆಯಿಲ್ಲದೆ ಸಾರ್ವಜನಿಕವಾಗಿ ಅವಹೇಳನ ಮಾಡುವುದು ನರೇಂದ್ರ ಮೋದಿ ಅವರನ್ನು ಗುರುತಿಸುವ ಮೂರು ಲಕ್ಷಣಗಳಾಗಿವೆ ಎಂದು ತಿಳಿಸಿದ್ದಾರೆ.

ಇದಕ್ಕೂ ಮೊದಲು ಎಂಎನ್‌ಎಸ್‌ ಮುಖ್ಯಸ್ಥ ರಾಜ್‌ ಠಾಕ್ರೆ ಅವರು ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಹಲವು ರ‍್ಯಾಲಿಗಳನ್ನು ಉದ್ದೇಶಿಸಿ ಮಾತನಾಡುತ್ತಾ, ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರಕಾರದ ಮೇಲೆ ವಾಗ್ಧಾಳಿ ನಡೆಸಿದ್ದರು ಮತ್ತು ಕೇಸರಿ ಪಕ್ಷಕ್ಕೆ ಮತ ಚಲಾಯಿಸದಿರಲು ಜನರಲ್ಲಿ ಮನವಿ ಮಾಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next