Advertisement
3.5 ಲಕ್ಷ ಜನಸಂಖ್ಯೆ ಇರುವ ತಾಲೂಕಿನಲ್ಲಿ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಮೊದಲು ನಗರದ ಹಳೆ ಬಸ್ ನಿಲ್ದಾಣದ ಬಳಿ ಕ್ಯಾರ್ಯ ನಿರ್ವಹಿಸುತ್ತಿತ್ತು. ಇದೀಗ ಆಸ್ಪತ್ರೆ ಪ್ರವಾಸಿ ಮಂದಿರದ ಬಳಿ ಇರುವ ಹೊಸ ಕಟ್ಟಡಕ್ಕೆ ಸ್ಥಳಾಂತರಗೊಂಡಿದೆ. ಆಸ್ಪತ್ರೆಗೆ ನಿತ್ಯ 1,500 ಕ್ಕೂ ಹೆಚ್ಚು ಹೊರ ರೋಗಿಗಳು ಭೇಟಿ ನೀಡುತ್ತಿದ್ದಾರೆ. ಇದರೊಂದಿಗೆ ಹೆರಿಗೆ ವಾರ್ಡ್, ಇತರೆ ತುರ್ತು ಚಿಕಿತ್ಸೆಗಳಿಗಾಗಿ ನಿತ್ಯ ನೂರಾರು ರೋಗಿಗಳು ದಾಖಲಾಗುತ್ತಿದ್ದಾರೆ.
Related Articles
Advertisement
ದೊಡ್ಡಬಳ್ಳಾಪುರ ತಾಲೂಕಿನ 250 ಹಾಸಿಗೆ ಗಳ ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಸ್ಪತ್ರೆ ಯನ್ನಾಗಿ ಒಟ್ಟು 89.10 ಕೋಟಿ ರೂ. ಅಂದಾಜು ಮೊತ್ತದಲ್ಲಿ ಆಡಳಿತಾತ್ಮಕ ಅನುಮೋದನೆ ನೀಡದೆ, ಸಚಿವ ಸಂಪುಟ ನಿರ್ಣಯವನ್ನು ಮುಂದೂಡಲಾಗಿದೆ. ಈ ಕುರಿತಂತೆ ಶಾಸಕ ಟಿ.ವೆಂಕಟರಮಣಯ್ಯ ಪದೇ ಪದೇ ಸದನದಲ್ಲಿ ಮನವಿ ಮಾಡಿದರೂ, ರಾಜ್ಯ ಸರ್ಕಾರದಿಂದ ಅನುಮೋದನೆ ಸಿಕ್ಕಿಲ್ಲ.
ಮಲತಾಯಿ ಧೋರಣೆ : ದೊಡ್ಡಬಳ್ಳಾಪುರ ತಾಲೂಕು ಆಸ್ಪತ್ರೆ ಯನ್ನು ಮೇಲ್ದರ್ಜೆಗೇರಿಸಲು ಆಡಳಿತಾತ್ಮಕ ಅನುಮೋದನೆ ನೀಡುವಂತೆ ಪದೇ ಪದೇ ಮನವಿಮಾಡಿದರು ರಾಜ್ಯ ಸರ್ಕಾರ ಸ್ಪಂದಿಸದೆ ಮಲತಾಯಿ ಧೋರಣೆ ಮಾಡುತ್ತಿದೆ. ಈ ಹಿಂದೆ ಪೂರ್ತಿ ಪ್ರಮಾಣದ ಸಂಪುಟ ವಿಸ್ತರಣೆ ನಂತರ ಅನುಮೋದನೆ ನೀಡಲಾಗುವುದು ಎಂದು ಉತ್ತರ ನೀಡಲಾಗಿತ್ತು. ಆದರೆ ಈ ವೇಳೆ ಯಾವುದೇ ಉತ್ತರ ನೀಡದೆ, ಸಚಿವ ಸಂಪುಟ ನಿರ್ಣಯ ಮುಂದೂಡುವ ಮೂಲಕ ಕೋವಿಡ್ ಕಷ್ಟದ ಸಂದರ್ಭದಲ್ಲಿ ಜನರಿಗೆ ಬಹು ಅಗತ್ಯವಾಗಿದ್ದ ಸೌಲಭ್ಯದಿಂದ ವಂಚಿತರನ್ನಾಗಿಸುತ್ತಿದೆ ಎನ್ನುತ್ತಾರೆ ಶಾಸಕ ಟಿ.ವೆಂಕಟರಮಣಯ್ಯ