Advertisement
ನಗರದ ಜಿಲ್ಲಾ ಗ್ರಂಥಾಲಯದ ಸಭಾಂಗಣದಲ್ಲಿ ಗ್ರಂಥಾಲಯ ಇಲಾಖೆ ವತಿಯಿಂದ ಓದುಗ ವಿದ್ಯಾರ್ಥಿಗಳಿಗಾಗಿ ಯುಪಿಎಸ್‌ಸಿ ಸ್ಪರ್ಧಾತ್ಮಕ ಪರೀಕ್ಷೆ ಕುರಿತಂತೆ ಶುಕ್ರವಾರ ಏರ್ಪಡಿಸಿದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮಾಡಿಕೊಳ್ಳಬೇಕೆಂದು ಸಲಹೆ ನೀಡಿದರು.
Related Articles
Advertisement
ಯುಪಿಎಸ್‌ಸಿ ಪರೀಕ್ಷೆಯಲ್ಲಿ ಆಂಗ್ಲ ಭಾಷೆ ಕಡ್ಡಾಯವಲ್ಲ. ಮಾತೃ ಭಾಷೆಯಲ್ಲಿಯೇ ಪರೀಕ್ಷೆ ಬರೆದು ಯಶಸ್ಸು ಕಾಣಬಹುದು. ರಾಜ್ಯದಲ್ಲಿ ಹಲವರು ಆಕಾಂಕ್ಷಿಗಳು ಮಾತೃ ಭಾಷೆಯಲ್ಲಿಯೇ ಪರೀಕ್ಷೆ ಬರೆದು ಯಶಸ್ಸು ಕಂಡಿದ್ದಾರೆ ಎಂದು ತಿಳಿಸಿದರು.
ಯುಪಿಎಸ್‌ಸಿ ಪ್ರಾಥಮಿಕ ಪರೀಕ್ಷೆ ಪಾಸಾಗಲು 3 ತಿಂಗಳ ಸಿದ್ಧತೆ ಸಾಕಾಗುತ್ತದೆ. ಗುಂಪು ಚರ್ಚೆಗಳು, ಪ್ರತಿಭೆ, ವಿಷಯಗಳನ್ನು ಇತರರೊಂದಿಗೆ ಹಂಚಿಕೊಂಡಾಗ ಜ್ಞಾನ ವೃದ್ಧಿಯಾಗುತ್ತದೆ. ತಮ್ಮ ಸಂಪೂರ್ಣ ಸಾಮರ್ಥ್ಯವನ್ನು ಅಧ್ಯಯನದಲ್ಲಿ ವಿನಿಯೋಗಿಸಬೇಕು. ತಾವು ಐಎಎಸ್ ಪರೀಕ್ಷೆಯನ್ನು ಮೊದಲ ಪ್ರಯತ್ನದಲ್ಲೇ ಉತ್ತೀರ್ಣರಾದ ಬಗೆ ಹಾಗೂ ಸರಳ ಮಾರ್ಗಗಳನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು.
ಪ್ರೊಬೆಷನರಿ ಕೆಎಎಸ್ ಅಧಿಕಾರಿಗಳಾದ ಮಹೇಂದ್ರ ತಾಲ್, ಸುರೇಖಾ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳು ಯಾವ ರೀತಿ ಸಿದ್ಧತೆ ಮಾಡಿಕೊಳ್ಳಬೇಕು.ಅಧ್ಯಯನದ ಸ್ವರೂಪ ಹಾಗೂ ವಿಷಯಗಳ ಆಯ್ಕೆ ಕುರಿತಂತೆ ವಿದ್ಯಾರ್ಥಿಗಳೊಂದಿಗೆಸಂವಾದ ನಡೆಸಿದರು. ಮುಖ್ಯ ಗ್ರಂಥಾಲಯ ಅಧಿಕಾರಿ ತಿಪ್ಪೇಸ್ವಾಮಿ ಮಾತನಾಡಿ, ಜಿಲ್ಲಾ ಗ್ರಂಥಾಲಯಕ್ಕೆ ಬರುವ ಓದುಗ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಪಡೆಯುವ ಕುರಿತು ಸಾಕಷ್ಟು ಪುಸ್ತಕಗಳನ್ನು ಒದಗಿಸಲಾಗುತ್ತಿದೆ. ಅಲ್ಲದೇ ವಿದ್ಯಾರ್ಥಿಗಳ ಹಿತಾಸಕ್ತಿಗಾಗಿ ಐಎಎಸ್, ಕೆಎಎಸ್ ಉತ್ತೀರ್ಣರಾದ ಅಧಿಕಾರಿಗಳಿಂದ ಸ್ಪರ್ಧಾಕಾಂಕ್ಷಿಗಳೊಂದಿಗೆ ಸಂವಾದ ಕಾರ್ಯಕ್ರಮಗಳನ್ನು ಆಗಾಗ್ಗೆ ಏರ್ಪಡಿಸಲಾಗುತ್ತಿದೆ ಎಂದು ತಿಳಿಸಿದರು. ಸಂವಾದ ಕಾರ್ಯಕ್ರಮದಲ್ಲಿ ಐಎಎಸ್, ಕೆಎಎಸ್ ಪರೀಕ್ಷೆಯಲ್ಲಿ ಸ್ಪರ್ಧಾಕಾಂಕ್ಷಿಗಳು ಪಾಲ್ಗೊಂಡಿದ್ದರು. ಪುಸ್ತಕಗಳ ಅಧ್ಯಯನದಿಂದ ಮಾತ್ರ ಎಲ್ಲ ವಿಷಯ ಅರಿಯಲು ಸಾಧ್ಯವಿಲ್ಲ. ದಿನ ಪತ್ರಿಕೆಗಳಲ್ಲಿ ಪ್ರಕಟಗೊಳ್ಳುವ ಪ್ರಚಲಿತ ವಿದ್ಯಮಾನಗಳು, ಸಂಪಾದಕೀಯ, ದೇಶ-ವಿದೇಶಿ ಸುದ್ದಿಗಳು, ಆರ್ಥಿಕ ವಿಷಯಗಳು, ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದ ಆವಿಷ್ಕಾರಗಳು, ಪರಿಸರದಂಥ ವಿಷಯಗಳಿಗೆ ಹೆಚ್ಚಿನ ಆದ್ಯತೆ ನಿಡಬೇಕು.
ಡಾ| ನಂದಿನಿದೇವಿ, ಪ್ರೊಬೆಷನರಿ ಐಎಎಸ್ ಅಧಿಕಾರಿ