ನವದೆಹಲಿ: ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಜಾರಿ ನಿರ್ದೇಶನಾಲಯ ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಜಾಗೊಳಿಸಿದೆ.
ಸೊರೇನ್ ಸಲ್ಲಿಸಿದ ಅರ್ಜಿಯನ್ನು ಆಲಿಸಲು ನಿರಾಕರಿಸಿದ ಸುಪ್ರೀಂ ಈ ವಿಚಾರದಲ್ಲಿ ‘ನಾವು ಮಧ್ಯಪ್ರವೇಶಿಸುವುದಿಲ್ಲ, ಹೈಕೋರ್ಟ್‌ಗೆ ಹೋಗಿ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಹೇಮಂತ್ ಸೋರೆನ್ ಅವರನ್ನು ಬುಧವಾರ ತಡರಾತ್ರಿ ಬಂಧಿಸಲಾಗಿದೆ. ಅವರನ್ನು ಒಂದು ದಿನದ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದ್ದು, 10 ದಿನಗಳ ಕಸ್ಟಡಿಗೆ ಕೇಂದ್ರೀಯ ಸಂಸ್ಥೆಯ ಕೋರಿಕೆಯ ಕುರಿತು ಇಂದು ನಿರ್ಣಾಯಕ ತೀರ್ಪು ನೀಡುವ ನಿರೀಕ್ಷೆಯಿದೆ.
ತನ್ನ ಅರ್ಜಿಯಲ್ಲಿ, ಹೇಮಂತ್ ಸೊರೆನ್ ಅವರು ಸುಪ್ರೀಂ ಕೋರ್ಟ್‌ನಲ್ಲಿ “ಜಾರಿ ನಿರ್ದೇಶನಾಲಯ ತನ್ನ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದೆ ಮತ್ತು ಪ್ರಜಾಸತ್ತಾತ್ಮಕವಾಗಿ ಚುನಾಯಿತ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಕೆಲಸಮಾಡುತ್ತಿದೆ ಇದರ ಜೊತೆಗೆ ತನ್ನನ್ನು ಬಂಧಿಸುವುದು ಕೂಡ “ಕಾನೂನುಬಾಹಿರ ಮತ್ತು ಎಂದು ಹೇಳಿದ್ದಾರೆ, “ಇಡಿ ಕೇಂದ್ರ ಸರ್ಕಾರದ ಅಡಿಯಲ್ಲಿ ನಿರ್ಲಜ್ಜವಾಗಿ ವರ್ತಿಸುತ್ತಿದೆ ಮತ್ತು ಅರ್ಜಿದಾರರ ನೇತೃತ್ವದ ಪ್ರಜಾಸತ್ತಾತ್ಮಕವಾಗಿ ಚುನಾಯಿತ ಸರ್ಕಾರವನ್ನು ಅಸ್ಥಿರಗೊಳಿಸಲು ನನ್ನ ವಿರುದ್ಧ ಪಿತೂರಿ ನಡೆಸುತ್ತಿದೆ ಎಂದು ಹೇಳಿದರು.
ಇದನ್ನೂ ಓದಿ: Gas Explosion: ಕೀನ್ಯಾದಲ್ಲಿ ಅನಿಲ ಸೋರಿಕೆಯಿಂದ ಬಾರಿ ಸ್ಫೋಟ, 2 ಮೃತ್ಯು, 165 ಮಂದಿಗೆ ಗಾಯ