Advertisement
“ದೇಶಪ್ರೇಮ, ರಾಷ್ಟ್ರೀಯತೆ ಮತ್ತು ಬಹುತ್ವದ ಕುರಿತು ತಮ್ಮ ಅಭಿಪ್ರಾಯ ವಿವರಿಸಿದ ಅವರು, ಆಧುನಿಕ ಭಾರತದ ತಮ್ಮ ಪರಿಕಲ್ಪನೆಯನ್ನು ಹರವಿಟ್ಟರು. ಭಾರತದ ಬಹುತ್ವವನ್ನು ಸಂಭ್ರಮಿಸಬೇಕು’ ಎಂದು ಹೇಳಿದರಲ್ಲದೆ, ರಾಷ್ಟ್ರೀಯತೆ ಎಲ್ಲವನ್ನೂ ಒಳಗೊಳ್ಳಬೇಕು. ವಿಶ್ವವೇ ಕುಟುಂಬ ಎಂಬ ಪರಿಕಲ್ಪನೆಯಂತೆ ರಾಷ್ಟ್ರೀಯತೆಯಲ್ಲಿ ವಿಶ್ವಾತ್ಮಕ ಮನೋಭಾವ ಅಡಕವಾಗಿರಬೇಕು. ರಾಷ್ಟ್ರೀಯತೆ ಒಂದು ಭಾಷೆ ಒಂದು ಧರ್ಮಕ್ಕೆ ಸೀಮಿತವಾಗಬಾರದು ಎಂದು ಹೇಳಿದರು.
ದೇಶಕ್ಕೆ ಸಂಪರ್ಕವಿತ್ತು. ವ್ಯಾಪಾರಿಗಳು ಮತ್ತು ಹಲವಾರು ಮಂದಿ ವಿದೇಶಿ ದಾಳಿಕೋರರು ಇಲ್ಲಿಗೆ ಆಗಮಿಸಿದ್ದರು. ಶತಮಾನಗಳ ಹಿಂದೆ ಆಗಮಿಸಿದ್ದ ವಿದೇಶಿ ಪ್ರವಾಸಿಗರು, ವಿವಿಧ ರೀತಿಯ ಆಡಳಿತ ವ್ಯವಸ್ಥೆ ಮತ್ತು ಉತ್ತಮ ಶಿಕ್ಷಣ ವ್ಯವಸ್ಥೆ ಹೊಂದಿದ್ದ ಬಗ್ಗೆ ದಾಖಲೆಗಳನ್ನು ನೀಡಿದ್ದಾರೆ ಎಂದು ಮಾಜಿ ರಾಷ್ಟ್ರಪತಿ ಹೇಳಿದರು. ಸದ್ಯದ ಪರಿಸ್ಥಿತಿಯಲ್ಲಿ ಹಿಂಸೆಗೆ ವಿದಾಯ ಹೇಳಿ ಎಲ್ಲರನ್ನೂ ಒಳಗೊಳ್ಳುವಂಥ ವ್ಯವಸ್ಥೆಯತ್ತ ಹೊರಳಿಕೊಳ್ಳಬೇಕಾಗಿದೆ. ಎಲ್ಲ ರೀತಿಯ ಹಿಂಸೆ ಮತ್ತು ಭೀತಿಯ ವಾತಾವರಣದಿಂದ ನಮ್ಮ ಸಾರ್ವಜನಿಕ ವ್ಯವಸ್ಥೆಯನ್ನು ದೂರ ಇರಿಸಿಕೊಳ್ಳಬೇಕಾಗಿದೆ ಎಂದು ಅವರು ಸಲಹೆ ಮಾಡಿದರು. ದ್ವೇಷದ ಮನೋಭಾವನೆ ರಾಷ್ಟ್ರೀಯತೆಯ ನಾಶಕ್ಕೆ ಕಾರಣವಾಗುತ್ತದೆ. ಅಸಹಿಷ್ಣುತೆ ನಮ್ಮ ರಾಷ್ಟ್ರೀಯ ಏಕತೆಗೆ ಧಕ್ಕೆ ತರುತ್ತದೆ. ಹಲವು ರಾಜವಂಶಗಳು, ಪ್ರಭಾವಶಾಲಿಯಾಗಿದ್ದ ರಾಜಕುಟುಂಬಗಳು ಭಾರತದ ಉತ್ತರ ಮತ್ತು ದಕ್ಷಿಣ ಭಾಗವನ್ನು ಆಳಿದ್ದವು. ನಮ್ಮ ದೇಶದ ರಾಷ್ಟ್ರೀಯ ಏಕತೆ ವಿಚಾರ ಹಲವು ರೀತಿಯ ಸಮೀಕರಣ ಮತ್ತು ಸಮ್ಮಿಲನದ ಬಳಿಕ ರೂಪುಗೊಂಡಿದೆ. ಹಲವು ರೀತಿಯ ಸಂಸ್ಕೃತಿಗಳು ಮತ್ತು ನಂಬಿಕೆ ನಮ್ಮ ವ್ಯವಸ್ಥೆಯ ವಿಶೇಷವೇ ಆಗಿದೆ. ರಾಷ್ಟ್ರೀಯತೆಯ ಬಗ್ಗೆ ದೇಶದ ಮೊತ್ತ ಮೊದಲ ಪ್ರಧಾನಿ ಜವಾಹರ್‌ಲಾಲ್ ನೆಹರೂ ಬರೆದ “ಡಿಸ್ಕವರಿ ಆಫ್ ಇಂಡಿಯಾ’ ಪುಸ್ತಕದಲ್ಲಿ ಉಲ್ಲೇಖವಾಗಿರುವ ಅಂಶವನ್ನು ಮಾಜಿ ರಾಷ್ಟ್ರಪತಿ ಉಲ್ಲೇಖೀಸಿದರು. ‘ಹಿಂದೂ, ಮುಸ್ಲಿಂ, ಸಿಕ್ಖ್ ಮತ್ತು ಭಾರತದ ಇತರ ಯಾವುದೇ ಗುಂಪಿಗೆ ಸೇರ್ಪಡೆಗೊಂಡವನು ತಾನು ಎಂಬ ಭಾವನೆಯಿಂದ ಹೊರಗೆ ಬಂದಾಗ ಮಾತ್ರ ರಾಷ್ಟ್ರೀಯತೆ ಎಂಬ ವಿಚಾರ ನಮ್ಮೆಲ್ಲರಲ್ಲಿ ಮೈಗೂಡುತ್ತದೆ’ ಎಂದು ಬರೆದಿದ್ದರು ಎಂದು ಪ್ರಸ್ತಾವಿಸಿದರು.
Related Articles
Advertisement
600 ವರ್ಷ ಮುಸ್ಲಿಂ ಆಡಳಿತ: ದೇಶದ ಇತಿಹಾಸದತ್ತ ಗಮನ ಹರಿಸಿದ ಮುಖರ್ಜಿ, ಕ್ರಿಸ್ತಪೂರ್ವ ಆರನೇ ಶತಮಾನದಿಂದ 600 ವರ್ಷಗಳ ಕಾಲ ಮುಸ್ಲಿಂ ಅರಸರ ಆಳ್ವಿಕೆ ದೇಶದಲ್ಲಿತ್ತು. ಬಳಿಕ ಈಸ್ಟ್ ಇಂಡಿಯಾ ಕಂಪೆನಿ ಆಡಳಿತದ ನೇತೃತ್ವ ವಹಿಸಿಕೊಂಡಿತು. ಮೊದಲ ಸ್ವಾತಂತ್ರ್ಯ ಸಂಗ್ರಾಮದ ಬಳಿಕ ದೇಶದ ಆಡಳಿತ ರಾಣಿಯ ನೇತೃತ್ವಕ್ಕೆ ಸಿಕ್ಕಿತು. ಗಮನದಲ್ಲಿರಿಸಿಕೊಳ್ಳಬೇಕಾದ ಅಂಶವೇನೆಂದರೆ ಹಲವಾರು ಮಂದಿ ಆಡಳಿತಗಾರರು ಆಡಳಿತ ನಡೆಸಿದರೂ 5 ಸಾವಿರ ವರ್ಷಕ್ಕಿಂತಲೂ ಹೆಚ್ಚಿನ ಇತಿಹಾಸ ಇರುವ ನಮ್ಮ ನಾಗರಿಕತೆ ಯಥಾಸ್ಥಿತಿಯನ್ನು ಕಾಯ್ದುಕೊಂಡಿತ್ತು ಎಂದರು.
ಹಲವು ಧರ್ಮಗಳು: ತ್ರಿಪುರಾದಿಂದ ದ್ವಾರಕೆಯವರೆಗೆ, ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ನಮ್ಮ ದೇಶದಲ್ಲಿ ಹಲವಾರು ಧರ್ಮಗಳಿವೆ ಎಂದು ಹೇಳುವುದೇ ರೋಮಾಂಚನ. ಲೆಕ್ಕವಿಲ್ಲದಷ್ಟು ಧರ್ಮಗಳು, ಜಾತಿಗಳು ಒಂದೇ ಸಂವಿಧಾನದ ಅಡಿಯಲ್ಲಿವೆ ಎಂದು ಹೇಳಿಕೊಳ್ಳುವುದೇ ಹೆಗ್ಗಳಿಕೆ. 122 ಭಾಷೆಗಳು, 1,600 ನುಡಿಕಟ್ಟು, 7 ಪ್ರಮುಖ ಧರ್ಮಗಳು, ಮೂರು ಪ್ರಮುಖ ಜನಾಂಗಗಳು ಒಂದೇ ವ್ಯವಸ್ಥೆಯ ಅಡಿಯಲ್ಲಿ ಕೆಲಸ ಮಾಡುತ್ತಿವೆ. ಹೀಗಾಗಿಯೇ ಭಾರತೀಯ ಎಂದು ಕರೆಯಿಸಿಕೊಳ್ಳಲಾಗುತ್ತಿದೆ. ಈ ವ್ಯವಸ್ಥೆಯಲ್ಲಿ ವಿವಿಧ ಅಭಿಪ್ರಾಯಗಳು ಇರುತ್ತವೆ. ಅದನ್ನು ನಿರಾಕರಿಸಲಾಗದು ಎಂದಿದ್ದಾರೆ.
ಅರ್ಥ ವ್ಯವಸ್ಥೆ ಬೆಳೆಯುತ್ತಿದೆ: ದೇಶದ ಅರ್ಥ ವ್ಯವಸ್ಥೆ ವಿಶ್ವದಲ್ಲಿಯೇ ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಅರ್ಥ ವ್ಯವಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾದರೂ ಜಗತ್ತಿನ ಸಂತೋಷದ ರ್‍ಯಾಂಕಿಂಗ್ ವ್ಯವಸ್ಥೆಯಲ್ಲಿ ಹೆಚ್ಚಿನ ಸ್ಥಾನ ಗಳಿಸಿಲ್ಲ ಎಂದರು. ಅದನ್ನು ಪುಷ್ಟೀಕರಿಸಲು ಜನರ ಸಂತೋಷವು ರಾಜನ ಸಂತೋಷದಲ್ಲಿ ಒಳಗೊಂಡಿದೆ’ ಎಂಬ ಕೌಟಿಲ್ಯನ ಅರ್ಥಶಾಸ್ತ್ರದಲ್ಲಿ ಉಲ್ಲೇಖಗೊಂಡ ಶ್ಲೋಕವನ್ನು ಪ್ರಸ್ತಾವಿಸಿದರು. ಒಂದು ದೇಶದಲ್ಲಿ ಜನರೇ ಎಲ್ಲಾ ಚಟುವಟಿಕೆಗಳ ಕೇಂದ್ರವಾಗಿರುತ್ತಾರೆ. ಅವರನ್ನು ವಿಭಜಿಸಲು ಯಾವುದೇ ಕ್ರಮ ಕೈಗೊಳ್ಳಬಾರದು. ದೇಶದ ಮುಖ್ಯ ಗುರಿ ಜನರನ್ನು ಒಟ್ಟು ಸೇರಿಸಿಕೊಳ್ಳುವುದು ಮತ್ತು ಬಡತನ, ತಾರತಮ್ಯ, ಕಾಯಿಲೆಗಳ ವಿರುದ್ಧ ಹೋರಾಟ ನಡೆಸುವುದಾಗಿರಬೇಕು ಎಂದು ಪ್ರಣವ್ ಮುರ್ಖಜಿ ಹೇಳಿದರು. ಜೈಹಿಂದ್, ವಂದೇ ಮಾತರಂ ಎನ್ನುವ ಮೂಲಕ ಭಾಷಣ ಕೊನೆಗೊಳಿಸಿದರು.
ಭಾರತ ಮಾತೆಯ ಶ್ರೇಷ್ಠ ಪುತ್ರ: ಐದು ದಶಕಗಳ ರಾಜಕೀಯ ಜೀವನದಲ್ಲಿ ಆರೆಸ್ಸೆಸ್ ನಿಲುವಿಗೆ ವ್ಯತಿರಿಕ್ತವಾದ ಧೋರಣೆ ಹೊಂದಿರುವ ರಾಷ್ಟ್ರಪತಿ ಪ್ರಣವ್ ಮುಖರ್ಜಿ, ಆರ್‌ಎಸ್‌ಎಸ್‌ನ ಸಂಸ್ಥಾಪಕ ಮತ್ತು ಮೊದಲ ಸರಸಂಘ ಚಾಲಕ ಡಾ| ಕೇಶವ ಬಲಿರಾಮ್ ಹೆಡಗೇವಾರ್ ಅವರನ್ನು ‘ಭಾರತ ಮಾತೆಯ ಶ್ರೇಷ್ಠ ಪುತ್ರ’ ಎಂದು ವ್ಯಾಖ್ಯಾನಿಸಿದರು.
ಹೆಡಗೇವಾರ್ ಜನಿಸಿದ ನಿವಾಸಕ್ಕೆ ಭೇಟಿ ನೀಡಿದ ಮುಖರ್ಜಿ, ‘ಭಾರತ ಮಾತೆಯ ಶ್ರೇಷ್ಠ ಸುಪುತ್ರನಿಗೆ ಗೌರವ ಮತ್ತು ಅಂತಿಮ ನಮನ ಸಲ್ಲಿಸಲು ನಾನು ಇಲ್ಲಿಗೆ ಇವತ್ತು ಆಗಮಿಸಿದ್ದೇನೆ’ ಎಂದು ಸಂದರ್ಶಕರ ಪುಸ್ತಕದಲ್ಲಿ ಬರೆದರು. ಆರೆಸೆಸ್‌ನ ಹಾಲಿ ಸರಸಂಘ ಸಂಚಾಲಕ ಮೋಹನ್ ಭಾಗವತ್ ಆತ್ಮೀಯವಾಗಿ ಬರಮಾಡಿಕೊಂಡು ಸ್ವಾಗತಿಸಿದರು. ಪ್ರಣವ್‌ರ ಪೂರ್ವ ನಿಗದಿತ ಕಾರ್ಯಕ್ರಮ ಪಟ್ಟಿಯಲ್ಲಿ ಈ ಭೇಟಿ ಸೇರ್ಪಡೆಯಾಗಿರಲಿಲ್ಲ. ಕೊನೆಯ ಕ್ಷಣದಲ್ಲಿ ನಿರ್ಧಾರ ಕೈಗೊಳ್ಳಲಾಯಿತು. ಮುಖರ್ಜಿ ಜತೆಗೆ ನೇತಾಜಿ ಕುಟುಂಬ ಸದಸ್ಯರೂ ಇದ್ದರು. ಅಗಲ ಕಿರಿದಾದ ದಾರಿಯಲ್ಲಿ ಪ್ರಣವ್ ಮುಖರ್ಜಿ ನಡೆದುಕೊಂಡು ಹೋದರು. ಪಾದರಕ್ಷೆಗಳನ್ನು ಕಳಚಿ ಹೆಡಗೇವಾರ್ ಅವರ ನಿವಾಸವನ್ನು ಮುಖರ್ಜಿ ಪ್ರವೇಶಿಸಿದರು.
ಪ್ರಣವ್ ಉತ್ತಮ ಭಾಷಣವನ್ನೇ ಮಾಡಿದ್ದಾರೆ. ದೇಶ ಮೊದಲು ಎಂಬ ಸಂದೇಶ ನೀಡಿದ್ದಾರೆ. ಜನರ ಅಭ್ಯುದಯವೇ ಪ್ರಜಾಪ್ರಭುತ್ವದ ಆದ್ಯತೆ. ಅದು ಭಾರತದ ರಾಷ್ಟ್ರೀಯತೆ ಎನ್ನುವುದನ್ನು ಅವರು ವಿವರಿಸಿದ್ದಾರೆ.– ರಾಮ್ ಮಾಧವ್, ಬಿಜೆಪಿ ಪ್ರಧಾನ ಕಾರ್ಯದರ್ಶಿ ಕಾಂಗ್ರೆಸ್‌ನಿಂದ ಮೂರು ಬಾರಿ ಸಂಘಟನೆ ನಿಷೇಧಕ್ಕೆ ಒಳಗಾಗಿತ್ತು ಎಂಬ ಅಂಶವನ್ನು ಪ್ರಣವ್ ನೆನಪಿಸಿಕೊಡಬಹುದಿತ್ತು. ಗಾಂಧಿಯನ್ನು ಹತ್ಯೆ ಮಾಡಿದ್ದಕ್ಕೆ ಸರ್ದಾರ್ ಪಟೇಲರ ಅವಧಿಯಲ್ಲಿ ಮೊದಲ ಬಾರಿಗೆ ಅದು ನಿಷೇಧಕ್ಕೆ ಒಳಗಾಗಿತ್ತು. ಗಾಂಧೀಜಿ ಹತ್ಯೆಗೆ ಆರ್‌ಎಸ್‌ಎಸ್ ಸಿಹಿ ಹಂಚಿತ್ತು.
– ಸೀತಾರಾಮ್ ಯೆಚೂರಿ, ಸಿಪಿಎಂ ನಾಯಕ