Advertisement

UCC ವಿರೋಧವಿಲ್ಲ,ಆದರೆ ಬೆಂಬಲಿಸುವುದಿಲ್ಲ…: ಬಿಎಸ್ಪಿ ನಾಯಕಿ ಮಾಯಾವತಿ

12:42 PM Jul 02, 2023 | Team Udayavani |

ನವದೆಹಲಿ: ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಮ್ಮ ಪಕ್ಷ ವಿರೋಧವಿಲ್ಲ ಎಂದು ಬಹುಜನ ಸಮಾಜ ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಮಾಯಾವತಿ ಭಾನುವಾರ ಹೇಳಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು “ನಮ್ಮ ಪಕ್ಷ (ಬಿಎಸ್‌ಪಿ) ಯುಸಿಸಿ ಅನುಷ್ಠಾನಕ್ಕೆ ವಿರುದ್ಧವಾಗಿಲ್ಲ ಆದರೆ ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತರಲು ಬಿಜೆಪಿ ಪ್ರಯತ್ನಿಸುತ್ತಿರುವ ವಿಧಾನವನ್ನು ನಾವು ಬೆಂಬಲಿಸುವುದಿಲ್ಲ, ಈ ವಿಷಯವನ್ನು ರಾಜಕೀಯಗೊಳಿಸುವುದು ಮತ್ತು ದೇಶದಲ್ಲಿ ಯುಸಿಸಿಯನ್ನು ಬಲವಂತವಾಗಿ ಜಾರಿಗೊಳಿಸುವುದು ಸರಿಯಲ್ಲ ಎಂದರು.

ಯುಸಿಸಿಗೆ ಸಂಬಂಧಿಸಿದ ಎಲ್ಲಾ ಆಯಾಮಗಳನ್ನು ಬಿಜೆಪಿ ಪರಿಗಣಿಸಬೇಕಿತ್ತು. ಪ್ರತಿಯೊಂದು ಸಂದರ್ಭದಲ್ಲೂ ಒಂದೇ ಕಾನೂನು ಎಲ್ಲಾ ಧರ್ಮದ ಜನರಿಗೆ ಅನ್ವಯಿಸಿದರೆ, ಅದು ದೇಶವನ್ನು ಬಲಪಡಿಸುತ್ತದೆ ಎಂದು ಹೇಳಿದರು.


ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೊಳಿಸುವ ಮಸೂದೆಯನ್ನು ಸರ್ಕಾರ ಮಂಡಿಸಬಹುದು ಎಂದು ಉನ್ನತ ಮೂಲಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next