ನವದೆಹಲಿ: ಕೋವಿಡ್ 19 ಬಿಕ್ಕಟ್ಟಿನ ವಿರುದ್ಧ ಹೋರಾಡುತ್ತಿರುವ ಸಂದರ್ಭದಲ್ಲಿ ರಾಜ್ಯದ ಮುಖ್ಯ ಕಾರ್ಯದರ್ಶಿ ಅಲಪನ್ ಬಂಡೋಪಾಧ್ಯಾಯ ಅವರನ್ನು ಕೇಂದ್ರದ ಸೇವೆಗೆ ಕಳುಹಿಸಿಕೊಡಲಾಗದು. ಅಲ್ಲದೇ ಈ ಏಕಪಕ್ಷೀಯ ಆದೇಶ ಆಘಾತ ಮತ್ತು ಆಘಾತವನ್ನು ತಂದೊಡ್ಡಿದೆ ಎಂದು ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ:ಪೂರ್ವ ದ್ವೇಷದ ಹಿನ್ನೆಲೆ: ರಾಯಚೂರಿನಲ್ಲಿ ಯುವಕನನ್ನು ಬರ್ಬರವಾಗಿ ಕೊಚ್ಚಿ ಕೊಲೆ
ಇಂತಹ ಸಂದಿಗ್ಢ ಪರಿಸ್ಥಿತಿಯಲ್ಲಿ ಬಂಗಾಳ ಸರ್ಕಾರ ಮುಖ್ಯ ಕಾರ್ಯದರ್ಶಿಯನ್ನು ಕೇಂದ್ರದ ಸೇವೆಗೆ ಕಳುಹಿಸುವುದಿಲ್ಲ. ಈ ಹಿಂದೆ ಹೊರಡಿಸಲಾದ ಕಾನೂನಿಗೆ ಆಧಾರದ ಮೇಲೆ ಆದೇಶವನ್ನು ಮುಂದುವರಿಸಲಾಗುವುದು. ಕೋವಿಡ್ ಪರಿಸ್ಥಿತಿಯನ್ನು ನಿಭಾಯಿಸುವ ಸಂದರ್ಭದಲ್ಲಿ ಮುಖ್ಯಕಾರ್ಯದರ್ಶಿಯನ್ನು ಸೇವೆಯಿಂದ ಬಿಡುಗಡೆಗೊಳಿಸಲು ಸಾಧ್ಯವಿಲ್ಲ ಎಂದು ಬ್ಯಾನರ್ಜಿ ಪತ್ರದಲ್ಲಿ ಉಲ್ಲೇಖಿಸಿರುವುದಾಗಿ ವರದಿ ವಿವರಿಸಿದೆ.
ಅನುಭವಿ ಅಧಿಕಾರಿಯ ಸೇವೆಯನ್ನು ಕಿತ್ತುಕೊಳ್ಳುವ ಮೂಲಕ ಜನರು ತೊಂದರೆ ಅನುಭವಿಸದಂತೆ ಸಹಕಾರ ನೀಡುವಿರೆಂದು ನಾನು ಭಾವಿಸುತ್ತೇನೆ. ಯಾವುದೇ ಮುನ್ಸೂಚನೆ, ಸಮಾಲೋಚನೆ ಇಲ್ಲದೇ ಇಂತಹ ಕಷ್ಟದ ಸಂದರ್ಭದಲ್ಲಿ ಕೇಂದ್ರದ ಆದೇಶವನ್ನು ಒಪ್ಪಲು ಸಾಧ್ಯವಿಲ್ಲ ಎಂದು ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.
ಶುಕ್ರವಾರ ಮಮತಾ ಬ್ಯಾನರ್ಜಿ ಮತ್ತು ಬಂಡೋಪಾಧ್ಯಾಯ ಬಂಗಾಳಕ್ಕೆ ಭೇಟಿ ನೀಡಿದ್ದ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿ ಯಸ್ ಚಂಡಮಾರುತದಿಂದ ಸಂಭವಿಸಿದ ಹಾನಿ ಕುರಿತ ವರದಿಯನ್ನು ನೀಡಿದ್ದರು. ನಂತರ ನಡೆದ ಪುನರ್ ಪರಿಶೀಲನಾ ಸಭೆಗೆ ಇಬ್ಬರು ಗೈರು ಹಾಜರಾಗಿದ್ದರು. ಈ ಘಟನೆ ನಂತರ ಬಂಗಾಳದ ಮುಖ್ಯ ಕಾರ್ಯದರ್ಶಿಯನ್ನು ವಾಪಸ್ ಕರೆಯಿಸಿಕೊಳ್ಳುವುದಾಗಿ ತಿಳಿಸಿ, ಸಿಬ್ಬಂದಿ ಮತ್ತು ತರಬೇತಿ ಇಲಾಖೆಗೆ ಮೇ 31 ಎಂದು ವರದಿ ಮಾಡಿಕೊಳ್ಳಬೇಕು ಎಂದು ಬಂಡೋಪಾಧ್ಯಾಯ ಅವರಿಗೆ ಕೇಂದ್ರ ಸರ್ಕಾರ ಸೂಚಿಸಿತ್ತು.