Advertisement

Opposition meet ಶಿಮ್ಲಾದಲ್ಲಿ ಅಲ್ಲ ಬೆಂಗಳೂರಿನಲ್ಲಿ ನಡೆಯಲಿದೆ: ಶರದ್ ಪವಾರ್

08:07 PM Jun 29, 2023 | Vishnudas Patil |

ಮುಂಬಯಿ: ಮುಂದಿನ ಪ್ರತಿಪಕ್ಷಗಳ ಸಭೆ ಜುಲೈ 13 ಮತ್ತು 14 ರಂದು ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಎನ್ ಸಿಪಿ ಅಧ್ಯಕ್ಷ ಶರದ್ ಪವಾರ್ ಗುರುವಾರ ಘೋಷಿಸಿದ್ದಾರೆ.

Advertisement

ಜೂನ್ 23 ರಂದು ಬಿಹಾರದ ರಾಜಧಾನಿ ಪಾಟ್ನಾದಲ್ಲಿ 17 ಕ್ಕೂ ಹೆಚ್ಚು ವಿರೋಧ ಪಕ್ಷಗಳ ನಾಯಕರು ಭಾಗವಹಿಸಿದ್ದ ಸಭೆಯ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಕ್ಷುಬ್ಧರಾಗಿದ್ದಾರೆ ಎಂದು ಪವಾರ್ ಹೇಳಿದ್ದಾರೆ.

ಜಂಟಿ ಕಾರ್ಯತಂತ್ರವನ್ನು ರೂಪಿಸಲು ಶಿಮ್ಲಾದಲ್ಲಿ ಎರಡನೇ ಸಭೆ ನಡೆಸಲು ನಿರ್ಧರಿಸಿದ್ದರು. ಆದರೆ, ಜುಲೈ 13 ಮತ್ತು 14ರಂದು ಬೆಂಗಳೂರಿನಲ್ಲಿ ಸಭೆ ನಡೆಸಲು ನಿರ್ಧರಿಸಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಎರಡನೇ ಸಭೆಯ ಕ್ರಿಯಾ ಯೋಜನೆ ರೂಪಿಸುವ ನಿರೀಕ್ಷೆಯಿದೆ.

 

 

Advertisement
Advertisement

Udayavani is now on Telegram. Click here to join our channel and stay updated with the latest news.

Next