Advertisement
ಮುಂಜಾಗ್ರತೆ ಅಗತ್ಯಮಳೆಗಾಲದಲ್ಲಿ ಹರಡುವ ಇತರ ಸಾಂಕ್ರಾಮಿಕ ರೋಗಗಳು ತಗಲದಂತೆ ಮುನ್ನೆಚ್ಚರಿಕೆ ವಹಿಸಿ ಮುಂಜಾಗ್ರತಾ ಕ್ರಮ ಅನುಸರಿಸುವುದು ಅತ್ಯಗತ್ಯ.
ನಮ್ಮ ಸುತ್ತಮುತ್ತಲ ಪರಿಸರ ಸ್ವಚ್ಛವಾಗಿರಲಿ, ಮುಚ್ಚಳವಿಲ್ಲದ ಒವರ್‌ಹೆಡ್, ಸಿಮೆಂಟ್ ಟ್ಯಾಂಕ್‌ಗಳು, ತೆಂಗಿನ ಚಿಪ್ಪು, ಕುಡಿದು ಬಿಸಾಡಿದ ಎಳನೀರು ಚಿಪ್ಪು, ಮನೆಯ ಸುತ್ತಮುತ್ತ ಎಸೆದ ಪ್ಲಾಸ್ಟಿಕ್, ಟಯರ್ ಸಹಿತ ನೀರುನಿಲ್ಲುವ ಅವಕಾಶವಿರುವ ಎಲ್ಲ ಪರಿಕರ ಗಳು ಸೊಳ್ಳೆಗಳ ಉತ್ಪತ್ತಿ ತಾಣಗಳು. ಮನೆ, ಪರಿಸರದಲ್ಲಿ ಸೊಳ್ಳೆಗಳ ಉತ್ಪತ್ತಿಗೆ ಅವಕಾಶವಾಗದಂತೆ ಎಚ್ಚರ ವಹಿಸುವುದು ಅಗತ್ಯ. ವೈದ್ಯರ ಸಲಹೆ ಪಡೆಯಿರಿ
ಜ್ವರ ಯಾವುದೇ ಇರಲಿ. ರಕ್ಷ ಪರೀಕ್ಷೆ ಮಾಡಿಸಿಕೊಳ್ಳುವ ಮೂಲಕ ಖಾತ್ರಿ ಪಡಿಸಿಕೊಳ್ಳುವುದು ಒಳ್ಳೆಯದು. ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸರಕಾರಿ ಆಸ್ಪತ್ರೆಗಳಲ್ಲಿ ರಕ್ತ ತಪಾಸಣೆಯನ್ನು ಮಾಡಿಸಿಕೊಳ್ಳಬಹುದು.
Related Articles
ಡೆಂಗ್ಯೂ ಹರಡುವ ಈಡಿಸ್ ಸೊಳ್ಳೆಗಳು ಸಾಮಾನ್ಯವಾಗಿ ಹಗಲಿನಲ್ಲಿ ಕಚ್ಚುತ್ತವೆ. ಮಲೇರಿಯಾ ಹರಡುವ ಅನಾಫೆಲಿಸ್ ಸೊಳ್ಳೆ ರಾತ್ರಿ ಸಮಯದಲ್ಲಿ ಕಚ್ಚುತ್ತದೆ. ಹೀಗಾಗಿ ಸೊಳ್ಳೆಗ ಳಿಂದ ನಮ್ಮನ್ನು ರಕ್ಷಿಸಿ ಕೊಳ್ಳಲು ಕೆಲವು ಕ್ರಮ ಪಾಲಿಸು ವುದು ಅಗತ್ಯ. ಸಂಜೆ ಹೊತ್ತು ಕಿಟಿಕಿ ಬಾಗಿಲುಗಳನ್ನು ಭದ್ರವಾಗಿ ಮುಚ್ಚುವುದು ಅಥವಾ ಜಾಲರಿಗಳನ್ನು ಅಳವಡಿಸುವುದು, ಔಷಧ ಲೇಪನ ಮುಂತಾದ ಕ್ರಮಗಳನ್ನು ಅನುಸರಿಸುವ ಮೂಲಕ ಸೊಳ್ಳೆಗಳಿಂದ ರಕ್ಷಣೆ ಪಡೆಯಬಹುದು. ಮನೆಯ ಸುತ್ತ ಫಾಗಿಂಗ್ ಮಾಡಿಸುವುದು, ಸೊಳ್ಳೆ ನಿರೋಧಕ ಔಷಧ ಸಿಂಪಡಣೆ, ಸೊಳ್ಳೆ ಪರದೆಗಳ ಬಳಕೆ ಮಾಡುವುದು ಒಳಿತು.
Advertisement
ಇದನ್ನೆಲ್ಲ ಈಗಲೇ ಮಾಡಿಓವರ್ಹೆಡ್ ಟ್ಯಾಂಕ್, ಸಿಮೆಂಟ್ ಟ್ಯಾಂಕ್‌ಗಳನ್ನು ಭದ್ರವಾಗಿ ಮುಚ್ಚಿಡಿ. ಮನೆ ಸುತ್ತ ಎಸೆದ ಪ್ಲಾಸ್ಟಿಕ್, ಟಯರ್, ತೆಂಗಿನ ಚಿಪ್ಪು ಗಳನ್ನು ತತ್‌ಕ್ಷಣ ವಿಲೇವಾರಿ ಮಾಡಿ, ಪಾತ್ರೆಗಳನ್ನು ಕವುಚಿ ಹಾಕಬೇಕು.ಮನೆ ಒಳಗೆ, ಹೊರಗೆ ಇರುವ ಹೂವಿನ ಕುಂಡ, ಮನಿಪ್ಲಾಂಟ್ ಚಟ್ಟಿಗಳು, ಏರ್‌ಕೂಲರ್‌ಗಳಲ್ಲೂ ಸೊಳ್ಳೆಗಳು ಉತ್ಪತ್ತಿಯಾಗುತ್ತವೆ. ಹೀಗಾಗಿ ಇವುಗಳ ನೀರನ್ನು ಪ್ರತಿ ವಾರ ಖಾಲಿ ಮಾಡುತ್ತಿರಬೇಕು. ಮನೆ ಮನೆಗೆ ತೆರಳಿ ಜಾಗೃತಿ
ಆರೋಗ್ಯ ಇಲಾಖೆಯಿಂದ ಜಿಲ್ಲೆಯಲ್ಲಿ ಮಲೇರಿಯಾ ಸಹಿತ ಸಾಂಕ್ರಾಮಿಕ ರೋಗಗಳ ಬಗ್ಗೆ ಮನೆ-ಮನೆಗೆ ತೆರಳಿ ಜಾಗೃತಿ ಮೂಡಿಸಲಾಗುತ್ತಿದೆ. ರೋಗ ಲಕ್ಷಣಗಳು ಕಂಡುಬಂದಲ್ಲಿ ಪ್ರಾ. ಆರೋಗ್ಯ ಕೇಂದ್ರಗಳಲ್ಲಿ ಉಚಿತ ರಕ್ತ ತಪಾಸಣೆ ಮಾಡಿಸಿಕೊಳ್ಳಬೇಕು.
– ಡಾ| ಪ್ರಶಾಂತ್, ಜಿಲ್ಲಾ ಮಲೇರಿಯಾ ಅಧಿಕಾರಿ