Advertisement

ವ್ಯಕ್ತಿ ಅಲ್ಲ, ಸಿದ್ಧಾಂತ ಮುಖ್ಯ; ಚುನಾವಣಾ ಪ್ರಚಾರಕ್ಕೆ SM ಕೃಷ್ಣ

09:16 AM Mar 11, 2019 | Sharanya Alva |

ಬೆಂಗಳೂರು: ಲೋಕಸಭಾ ಚುನಾವಣಾ ಪ್ರಚಾರಕ್ಕೆ ಆಗಮಿಸಬೇಕೆಂದು ಬಿಜೆಪಿ ಮುಖಂಡ ಆರ್.ಅಶೋಕ್ ಅವರು ಮಾಜಿ ಕೇಂದ್ರ ಸಚಿವ, ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರಲ್ಲಿ ವಿನಂತಿಸಿಕೊಂಡಿದ್ದು, ಈ ಹಿನ್ನೆಲೆಯಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸುವುದಾಗಿ ತಿಳಿಸಿದ್ದಾರೆ.

Advertisement

ಸೋಮವಾರ ಆರ್.ಅಶೋಕ್ ಅವರು ಎಸ್.ಎಂ.ಕೃಷ್ಣ ಅವರ ನಿವಾಸಕ್ಕೆ ತೆರಳಿದ್ದು, ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ ಹಾಗೂ ಮಂಡ್ಯ, ತುಮಕೂರು, ಮೈಸೂರು ಲೋಕಸಭಾ ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರದಲ್ಲಿ ಪಕ್ಷದ ಪರವಾಗಿ ಆಗಮಿಸಬೇಕೆಂದು ಮನವಿ ಮಾಡಿಕೊಂಡಿದ್ದರು.

ಮಾತುಕತೆ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಎಸ್.ಎಂ.ಕೃಷ್ಣ, ಈ ಚುನಾವಣೆಯಲ್ಲಿ ವ್ಯಕ್ತಿ ಮುಖ್ಯ ಅಲ್ಲ, ಸಿದ್ಧಾಂತ ಮುಖ್ಯ. ಲೋಕಸಭಾ ಚುನಾವಣೆಯಲ್ಲಿ ಸಿದ್ಧಾಂತದ ಆಧಾರದ ಮೇಲೆ ಮತಯಾಚಿಸುವುದಾಗಿ ತಿಳಿಸಿದ ಅವರು, ನಾನು ಸಿಎಂ ಆಗಿದ್ದಾಗ ಮಾಡಿದ್ದ ಬೆಂಗಳೂರು ಅಭಿವೃದ್ಧಿಯನ್ನು ಜನ ಮರೆಯುವುದಿಲ್ಲ ಎಂದು ಹೇಳಿದರು.

ಒಕ್ಕಲಿಗರ ಪ್ರಾಬಲ್ಯವಿರುವ ಮಂಡ್ಯ, ಮೈಸೂರು, ತುಮಕೂರು ಲೋಕಸಭಾ ಕ್ಷೇತ್ರಗಳಲ್ಲಿ ಎಸ್.ಎಂ.ಕೃಷ್ಣ ಅವರನ್ನು ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಳ್ಳುವಂತೆ ಬಿಜೆಪಿ ತಂತ್ರ ರೂಪಿಸಿದ್ದು, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ದೇವೇಗೌಡರು ಸ್ಪರ್ಧಿಸುತ್ತಾರೆ ಎಂಬ ಊಹಾಪೋಹದ ಹಿನ್ನೆಲೆಯಲ್ಲಿ ಬಿಜೆಪಿ ಸೆಡ್ಡು ಹೊಡೆಯಲು ಮುಂದಾಗಿದೆ ಎಂದು ವರದಿ ವಿವರಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next