Advertisement

ಮಠಾಧೀಶರಿಂದ ಬೆದರಿಕೆ ಸರಿಯಲ್ಲ: ಹೊರಟ್ಟಿ

06:50 AM Dec 18, 2017 | Team Udayavani |

ಹುಬ್ಬಳ್ಳಿ: ಲಿಂಗಾಯತ ಸ್ವತಂತ್ರ ಧರ್ಮ ಕುರಿತಾಗಿ ಕೇಂದ್ರ ಅಲ್ಪಸಂಖ್ಯಾತ ಆಯೋಗಕ್ಕೆ ಶಿಫಾರಸು ವಿಷಯವಾಗಿ ಕೆಲ ಮಠಾಧೀಶರು ರಾಜ್ಯ ಸರಕಾರ ಹಾಗೂ ಮುಖ್ಯಮಂತ್ರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಹೇಳಿಕೆ ನೀಡುತ್ತಿರುವುದು ಸರಿಯಾದ ಕ್ರಮವಲ್ಲ. 

Advertisement

ಲಿಂಗಾಯತ ಸಮಾಜ ಇದನ್ನು ಗಂಭೀರವಾಗಿ ಪರಿಗಣಿಸಲಿದೆ ಎಂದು ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ತಿಳಿಸಿದರು. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಿಂಗಾಯತ ಸ್ವತಂತ್ರ ಧರ್ಮ ಕುರಿತಾಗಿ ಕೇಂದ್ರದ ಅಲ್ಪಸಂಖ್ಯಾತರ ಆಯೋಗಕ್ಕೆ ಶಿಪಾರಸು ಕಳುಹಿಸುವುದಾಗಿ ಸಿದ್ದರಾಮಯ್ಯ ನೀಡಿರುವ ಹೇಳಿಕೆ ಸ್ವಾಗತಾರ್ಹ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next