ಬೆಂಗಳೂರು: ಲಾಕ್‌ಡೌನ್ 3.0 ಮುಗಿಯುತ್ತಿದ್ದಂತೆ ವಾಣಿಜ್ಯ ಸಂಚಾರ ಸೇವೆ ಪುನಾರಂಭಿಸಲು ತುದಿಗಾಲಲ್ಲಿ ನಿಂತಿದ್ದ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್) ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಉತ್ಸಾಹಕ್ಕೆ ಭಾನುವಾರ ಕೇಂದ್ರ ಹೊರಡಿಸಿದ ಲಾಕ್‌ಡೌನ್ 4.0 ಮಾರ್ಗಸೂಚಿ ಸದ್ಯಕ್ಕೆ ತಣ್ಣೀರೆರಚಿದೆ.
“ನಮ್ಮ ಮೆಟ್ರೋ’ ರೈಲು ಮತ್ತು ಬಸ್‌ಗಳ ಸ್ವತ್ಛತೆ, ಗುರುತು ಹಾಕುವಿಕೆ, ಎಲ್ಲಾ ಸಿಬ್ಬಂದಿಗೆ ಕಡ್ಡಾಯವಾಗಿ ಹಾಜರಾಗುವಂತೆ ಸೂಚನೆ, ಥರ್ಮಲ್ ಸ್ಕ್ಯಾನರ್, ಸ್ಯಾನಿಟೈಸರ್ ಮತ್ತಿತರ ಉಪಕರಣಗಳ ಪೂರೈಕೆ ಒಳಗೊಂಡಂತೆ ಪೂರ್ವಸಿದಟಛಿತೆ ಮಾಡಿಕೊಳ್ಳುತ್ತಿತ್ತು.
ಬಿಎಂಟಿಸಿ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ, ಷರತ್ತುಬದಟಛಿ ಅನುಮತಿ ನೀಡುವಂತೆ ಯೂ ಕೇಂದ್ರಕ್ಕೆ ಮನವಿ ಮಾಡಿತ್ತು. ಆದರೆ, ಲಾಕ್‌ಡೌನ್ ಮುಂದುವರಿದ ಹಿನ್ನೆಲೆಯಲ್ಲಿ ಸಮೂಹ ಸಾರಿಗೆ ಸೇವೆಗಳಿಗೆ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ಬಿಎಂಟಿಸಿ ಬಸ್ ಸೇವೆ ಬಗ್ಗೆ ರಾಜ್ಯ ಸರ್ಕಾರ ಸೋಮವಾರ ನಿರ್ಧಾರ ಕೈಗೊಳ್ಳಲಿದೆ.
ಈ ಮಧ್ಯೆ ಕೇಂದ್ರ ಸರ್ಕಾರ ಲಾಕ್‌ಡೌನ್ ಅವಧಿಯನ್ನು ಮೇ 31ರವರೆಗೆ ವಿಸ್ತರಿಸಿರುವ ಹಿನ್ನೆಲೆಯಲ್ಲಿ, ಅಲ್ಲಿಯವರೆಗೂ ಮೆಟ್ರೋ ರೈಲು ಸಂಚಾರ ಸ್ಥಗಿತ ಮುಂದುವರಿಯಲಿದೆ. ಮೆಟ್ರೋ ನಿಲ್ದಾಣಗಳ ಬಳಿಯ ವಾಹನ ನಿಲುಗಡೆ ಸ್ಥಳ ಮತ್ತು ನಿಲ್ದಾಣದೊಳಗಿನ ವಾಣಿಜ್ಯ ಮಳಿಗೆಗಳಿಗೂ ಇದು ಅನ್ವಯ ಆಗಲಿದೆ. ರೈಲುಗಳನ್ನು ಸುಸ್ಥಿತಿಯಲ್ಲಿ ಮತ್ತು ಪವರ್ ಮೋಡ್‌ನಲ್ಲಿ ಇರಿಸುವ ಉದ್ದೇಶದಿಂದ ಒಂದು ಪರೀಕ್ಷಾರ್ಥ ರೈಲು ನೇರಳೆ ಹಾಗೂ ಹಸಿರು ಮಾರ್ಗಗಳಲ್ಲಿ ಬೆಳಗ್ಗೆ ಮತ್ತು ಸಂಜೆ ಸಂಚರಿಸಲಿ ದೆ ಎಂದು ಬಿಎಂಆರ್‌ಸಿಎಲ್ ಸ್ಪಷ್ಟಪಡಿಸಿದೆ.
ಆದೇಶಕ್ಕಾಗಿ ಕಾಯುತ್ತಿದ್ದೇವೆ: ಕೇಂದ್ರ ಸರ್ಕಾರ ಈಗ ಹೊರಡಿಸಿರುವ ಲಾಕ್‌ಡೌನ್ ಮಾರ್ಗಸೂಚಿಗಳಲ್ಲಿ ಬಸ್‌ಗಳು ನಿರ್ಬಂಧಿತ ಪಟ್ಟಿಯಲ್ಲಿ ಇಲ್ಲ. ರಾಜ್ಯ ಸರ್ಕಾರವೇ ಈ ಕುರಿತು ತೀರ್ಮಾನ ಕೈಗೊಳ್ಳಬೇಕು. ಈಗಾಗಲೇ, ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಮೇ 19ರವರೆಗೆ ಬಸ್ ಸಂಚಾರ ಬೇಡ ಎಂದಿದ್ದಾರೆ. ಆದರೆ, ಸೋಮವಾರ (ಮೇ 18) ಈ ಕುರಿತು ಸಭೆ ನಡೆಯಲಿದ್ದು, ಅಂತಿಮ ತೀರ್ಮಾನ ಹೊರಬೀಳಲಿದೆ. ಯಾವುದಕ್ಕೂ ಮುಂದಿನ ಆದೇಶಕ್ಕಾಗಿ ಕಾಯುತ್ತಿದ್ದೇವೆ ಎಂದು ಬಿಎಂಟಿಸಿ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ರಾಜ್ಯದಲ್ಲಿ ಸರ್ಕಾರಿ ಸಾರಿಗೆ ಬಸ್‌ಗಳ ಸಂಚಾರ ಪುನಾರಂಭದ ಬಗ್ಗೆ (ಮೇ 18)ಸೋಮವಾರ ಬೆಳಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು.
-ಲಕ್ಷ್ಮಣ ಸವದಿ, ಸಾರಿಗೆ ಸಚಿವ