Advertisement

ಮಾದಕ ದ್ರವ್ಯ ಮಾರಾಟ ಜಾಲ ನಿಯಂತ್ರಣಕ್ಕೆ ಶಾಸಕಿ ಸೂಚನೆ

11:44 AM Apr 12, 2017 | Harsha Rao |

ಪುತ್ತೂರು: ನಗರದಲ್ಲಿ ವಿದ್ಯಾರ್ಥಿಗಳನ್ನು ಗುರಿಯಾಗಿಸಿ ಗಾಂಜಾ ಮತ್ತಿತರ ಅಮಲು ಪದಾರ್ಥಗಳನ್ನು ಮಾರಾಟ ಮಾಡಲಾಗುತ್ತಿರುವ ಆತಂಕಕಾರಿ ಸಂಗತಿ ಬೆಳಕಿಗೆ ಬರುತ್ತಿದೆ. ಈ ಬಗ್ಗೆ ಪೊಲೀಸ್‌ ಇಲಾಖೆ ಕಠಿನ ಕ್ರಮಕ್ಕೆ ಮುಂದಾಗುವಂತೆ ಶಾಸಕಿ ಶಕುಂತಳಾ ಟಿ. ಶೆಟ್ಟಿ ಅವರು ಮಂಗಳವಾರ ನಡೆದ ತಾ.ಪಂ. ಕೆಡಿಪಿ ಸಭೆಯಲ್ಲಿ ಸೂಚನೆ ನೀಡಿದ್ದಾರೆ.

Advertisement

ಮಾದಕ ಪದಾರ್ಥ ಮಾರಾಟ ಪ್ರಕರಣ ಪತ್ತೆ ಆಗಿರುವ ಬಗ್ಗೆ ಸಭೆಧಿಯಲ್ಲಿ ಪ್ರಸ್ತಾವಿಸಿದ ಶಾಸಕಿ, ಪೊಲೀಸ್‌ ಅಧಿಕಾರಿಯಲ್ಲಿ ಈ ಬಗ್ಗೆ ಮಾಹಿತಿ ನೀಡುವಂತೆ ಸೂಚಿಸಿದರು. ಉತ್ತರಿಸಿದ ನಗರ ಠಾಣಾ ಎಸ್‌ಐ ಓಮನಾ, ನಗರದಲ್ಲಿ ಕಾಲೇಜು ವಿದ್ಯಾರ್ಥಿಗಳು ಗಾಂಜಾ, ಅಮಲು ಪದಾರ್ಥ ಸೇವಿಸಿ ಸಿಕ್ಕಿಬಿದ್ದಿರುವ ಪ್ರಕರಣ ದಾಖಲಾಗಿದೆ. ಕೆಲ ಸಂಶಯಿತರನ್ನು ಮಂಗಳೂರಿನಲ್ಲಿ ತಪಾಸಣೆ ಮಾಡಿದಾಗ ಗಾಂಜಾ ಸೇವಿಸಿರುವುದು ಪತ್ತೆ ಆಗಿದೆ. ಅಮಲು ಪದಾರ್ಥ ಸೇವನೆ ಮಾಡಿದವರಲ್ಲಿ ಹದಿಹರೆಯದವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಈ ಅಮಲು ಪದಾರ್ಥಗಳ ಪೂರೈಕೆ ಕುರಿತು ವಿದ್ಯಾರ್ಥಿಗಳನ್ನು ಪ್ರಶ್ನಿಸಿದಾಗ, ಅವರಿಂದ ಸಮರ್ಪಕ ಉತ್ತರ ಸಿಕ್ಕಿಲ್ಲ. ಪೊಲೀಸ್‌ ಇಲಾಖೆ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಿದೆ ಎಂದು ಉತ್ತರಿಸಿದರು.

ಶಾಸಕಿ ಶಕುಂತಳಾ ಟಿ. ಶೆಟ್ಟಿ ಅವರು, ಅಮಲು ಪದಾರ್ಥ ಸೇವನೆ ಮಾಡುವುದು ಎಷ್ಟು ಅಪರಾಧವೊ ಮಾರಾಟ ಮಾಡುವುದು ಅದಕ್ಕಿಂತ ಘೋರ ಅಪರಾಧ. ಹದಿಹರೆಯದ ಮಕ್ಕಳನ್ನು ಮಾದಕ ವ್ಯಸನಿಗಳನ್ನಾಗಿಸಿ ಅವರ ಜೀವನ ಹಾಳು ಮಾಡುವ ಜಾಲದ ವಿರುದ್ಧ ಕ್ರಮ ಕೈಗೊಳ್ಳಬೇಕು. ಅಮಲು ಪದಾರ್ಥ ಸೇವಿಸಿದ ವ್ಯಕ್ತಿ ಯಾವ ಕೃತ್ಯಕ್ಕೂ ಮುಂದಾಗುವ ಅಪಾಯ ಇದೆ. ಡ್ರಗ್ಸ್‌ನ ಅಪಾಯದ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿ, ಚಟಕ್ಕೆ ಬೀಳದಂತೆ ಎಚ್ಚರ ವಹಿಸುವುದು ಉತ್ತಮ ಎಂದರು.

ಸಭೆಯಲ್ಲಿ ಜಿ.ಪಂ. ಸದಸ್ಯರಾದ ಅನಿತಾ ಹೇಮನಾಥ ಶೆಟ್ಟಿ, ಪಿ.ಪಿ. ವರ್ಗೀಸ್‌, ಸರ್ವೋತ್ತಮ ಗೌಡ, ಶಯನಾ ಜಯಾನಂದ, ಪ್ರಮೀಳಾ ಜನಾರ್ದನ, ತಾ.ಪಂ. ಅಧ್ಯಕ್ಷೆ ಭವಾನಿ ಚಿದಾನಂದ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next