Advertisement

ಎಸ್‌ಸಿಪಿ-ಟಿಎಸ್‌ಪಿ ಗುರಿ ಸಾಧನೆಗೆ ಸೂಚನೆ

08:05 PM Sep 24, 2020 | Suhan S |

ಚಿತ್ರದುರ್ಗ: ಪರಿಶಿಷ್ಟ ಜಾತಿಯ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಪಂಗಡದವರಿಗೆ ಮೀಸಲಿರುವ ಅನುದಾನವನ್ನು ನಿಗದಿತ ಉದ್ದೇಶಕ್ಕೆ ಅವಯೊಳಗೆ ವೆಚ್ಚ ಮಾಡಿ ಗುರಿ ಸಾಧನೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್‌. ಮನ್ನಿಕೇರಿ ಸೂಚಿಸಿದರು.

Advertisement

ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಎಸ್‌ಸಿಪಿ, ಟಿಎಸ್‌ಪಿ ಯೋಜನೆಯ ಕಾಮಗಾರಿಗಳಿಗೆ ಸಂಬಂಸಿದಂತೆ ಪ್ರಗತಿಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಎಲ್ಲಾ ಇಲಾಖೆಯವರು ಕಟ್ಟುನಿಟ್ಟಾಗಿ ವಿಶೇಷ ಘಟಕ ಹಾಗೂ ಗಿರಿಜನ ಉಪ ಯೋಜನೆಯ ಕಾಮಗಾರಿಗಳನ್ನು ಕಡ್ಡಾಯವಾಗಿ ಅನುಷ್ಠಾನ ಮಾಡಬೇಕು. ಆದರೆ ಅಧಿಕಾರಿಗಳ ನಿರ್ಲಕ್ಷéದಿಂದ ಅನುದಾನ ಲ್ಯಾಪ್ಸ್‌ ಆಗಬಾರದು. ವರ್ಷದ ಕೊನೆಯವರೆಗೆ ಅನುದಾನ ವೆಚ್ಚ ಮಾಡಲು ಕಾಯದೆ ಅನುದಾನ ಬಂದ ನಂತರ ಅಥವಾ ಆಡಳಿತಾತ್ಮಕ ಮಂಜೂರಾತಿ ಸಿಕ್ಕ ತಕ್ಷಣ ಅನುಷ್ಠಾನಕ್ಕಾಗಿ ಕ್ರಮ ಕೈಗೊಂಡು ಸರ್ಕಾರದ ಆಶಯದಂತೆ ಅಭಿವೃದ್ಧಿಗೆ ಶ್ರಮಿಸಬೇಕೆಂದು ತಿಳಿಸಿದರು.

ಎಸ್‌ಸಿಪಿ ಹಾಗೂ ಟಿಎಸ್‌ಪಿಯ ಯೋಜನೆಯಡಿ ನೀಡಲಾದ ಕ್ರಿಯಾ ಯೋಜನೆಯಂತೆ ಆಯಾ ಇಲಾಖೆಯವರು ಅನುಷ್ಟಾನಕ್ಕೆ ಕ್ರಮ ಕೈಗೊಂಡು ಪ್ರಗತಿ ವರದಿಯನ್ನು ಪ್ರತಿ ತಿಂಗಳು ಸಮಾಜಕಲ್ಯಾಣ ಇಲಾಖೆಗೆ ಕಳುಹಿಸಬೇಕೆಂದು ಸೂಚನೆ ನೀಡಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಿ. ಸಂಗಪ್ಪ, ಜಿಲ್ಲಾ ಮಟ್ಟದ ಅನುಷ್ಠಾನಾಧಿ  ಕಾರಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

 

Advertisement

Udayavani is now on Telegram. Click here to join our channel and stay updated with the latest news.

Next