Advertisement

ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡಲು ಸೂಚನೆ

12:47 PM Feb 21, 2017 | Team Udayavani |

ಮಂಗಳೂರು: ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಅನುಷ್ಠಾನಗೊಳ್ಳುತ್ತಿರುವ ಕಾಮಗಾರಿಗಳಿಗೆ ವೇಗ ನೀಡಿ ಪೂರ್ಣಗೊಳಿಸುವಂತೆ ಪ್ರಾಧಿಕಾರದ ಅಧ್ಯಕ್ಷೆ, ಶಾಸಕಿ ಶಾರದಾ ಮೋಹನ ಶೆಟ್ಟಿ ಸೂಚಿಸಿದರು. 

Advertisement

ಕರಾವಳಿಯ ಮೂರು ಜಿಲ್ಲೆಗಳಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಡೆಯುತ್ತಿರುವ ವಿವಿಧ ಕಾಮಗಾರಿಗಳ ಬಗ್ಗೆ ಮಂಗಳೂರಿನಲ್ಲಿ ಪ್ರಾಧಿಕಾರದ ಕಚೇರಿಯಲ್ಲಿ ಆಯೋಜಿಸಿದ್ದ ಪ್ರಗತಿ ಪರಿಶೀಲನ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಯೋಜನೆಗಳ ಅನುಷ್ಠಾನದಲ್ಲಿ ವಿಳಂಬಗತಿ ಸಲ್ಲದು ಎಂದರು. 

ಪ್ರಾಧಿಕಾರದ ಕಾರ್ಯದರ್ಶಿ ಪ್ರದೀಪ್‌ ಡಿ’ಸೋಜಾ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಮನೋಹರ ಎ. ಕಳಸ, ವ್ಯವಸ್ಥಾಪಕ ಮಂಜುನಾಥ ಶೆಟ್ಟಿ, ಪಂಚಾಯತ್‌ರಾಜ್‌ ಎಂಜಿನಿಯರಿಂಗ್‌ ವಿಭಾಗ ಹಾಗೂ ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next