Advertisement

ವಿದ್ಯೆಗಿಂತ ದೊಡ್ಡದು ಯಾವುದೂ ಇಲ್ಲ, ನ್ಯಾಯಾಲಯದ ಆದೇಶವನ್ನು ಎಲ್ಲರೂ ಪಾಲಿಸಬೇಕು: ಬೊಮ್ಮಾಯಿ

12:10 PM Mar 15, 2022 | Team Udayavani |

ಬೆಂಗಳೂರು: ಸಮವಸ್ತ್ರದ ಕುರಿತು ನ್ಯಾಯಾಲಯದಿಂದ ಒಳ್ಳೆಯ ತೀರ್ಪು ನೀಡಿದೆ. ಇದು ಮಕ್ಕಳ ಭವಿಷ್ಯ ಶಿಕ್ಷಣದ ಪ್ರಶ್ನೆ. ಮಕ್ಕಳಿಗೆ ವಿದ್ಯೆಗಿಂತ ದೊಡ್ಡದು ಮತ್ತೊಂದಿಲ್ಲ. ನ್ಯಾಯಾಲಯದ ಆದೇಶವನ್ನು ಎಲ್ಲರೂ ಪಾಲಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

Advertisement

ಹಿಜಾಬ್ ಕುರಿತಾಗಿ ಹೈಕೋರ್ಟ್ ತೀರ್ಪಿನ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲರೂ ಸಹಕಾರ ಕೊಟ್ಟು ಶಾಂತಿ ಸೌಹಾರ್ದತೆ ಕಾಪಾಡಬೇಕು. ಶಿಕ್ಷಕರು,ವಿದ್ಯಾರ್ಥಿಗಳು, ಪೋಷಕರು ಈ ತೀರ್ಪನ್ನು ಒಪ್ಪಿಕೊಳ್ಳಬೇಕು. ತೀರ್ಪಿನ ಅನ್ವಯ ಶಿಕ್ಷಣ ಕೂಡಲು ಎಲ್ಲರೂ ಸಹಕಾರ ಕೊಡಬೇಕು. ಎಲ್ಲ ವಿದ್ಯಾರ್ಥಿಗಳು ಹೈಕೋರ್ಟ್ ಆದೇಶ ಪಾಲನೆ ಮಾಡಬೇಕು. ತರಗತಿ ಬಹಿಷ್ಕಾರ ಮಾಡದೆ ಪರೀಕ್ಷೆಯಲ್ಲಿ ಭಾಗವಹಿಸಬೇಕು ಎಂದರು.

ಇದನ್ನೂ ಓದಿ:ಹಿಜಾಬ್ ಧರಿಸಿವುದು ಇಸ್ಲಾಂನ ಅತ್ಯಗತ್ಯ ಭಾಗವಲ್ಲ; ಹೈಕೋರ್ಟ್ ನಿಂದ ಮಹತ್ತರ ತೀರ್ಪು

ಈಗಾಗಲೇ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಟ್ಟುನಿಟ್ಟಾಗಿ ಮಾಡಿದ್ದೇವೆ. ಯಾರಾದರೂ ಕಾನೂನು ಕೈಗೆತ್ತಿಕೊಂಡರೆ ಗೃಹ ಇಲಾಖೆಯಿಂದ ತಕ್ಕ ಪಾಠವಾಗಲಿದೆ ಎಂದು ಸಿಎಂ ಬೊಮ್ಮಾಯಿ ಎಚ್ಚರಿಕೆ ನೀಡಿದರು.

ಸಮುದಾಯದ ನಾಯಕರಿಗೂ ನಾನು ಮನವಿ ಮಾಡುತ್ತೇನೆ. ಮಕ್ಕಳ ಹಿತದೃಷ್ಟಿಯಿಂದ ಎಲ್ಲರು ಕೂಡ ನ್ಯಾಯಾಲಯದ ಆದೇಶ ಪಾಲಿಸಬೇಕು. ಕೋರ್ಟ್ ಆದೇಶವನ್ನು ಎಲ್ಲರೂ ಕೂಡ ಒಪ್ಪಿಕೊಳ್ಳಬೇಕು ಎಂದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next