Advertisement

ಭಾರತ $35 ಟ್ರಿಲಿಯನ್ ಆರ್ಥಿಕತೆಯಾಗುವುದನ್ನು ತಡೆಯಲು ಯಾವುದೂ ಸಾಧ್ಯವಿಲ್ಲ: ಮುಕೇಶ್ ಅಂಬಾನಿ

03:14 PM Jan 10, 2024 | Team Udayavani |

ಗಾಂಧಿನಗರ: 2047 ರ ವೇಳೆಗೆ ಭಾರತವು 35 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗುವುದನ್ನು ತಡೆಯಲು ಯಾವುದೂ ಸಾಧ್ಯವಿಲ್ಲ. ಅಷ್ಟೇ ಅಲ್ಲದೆ ಗುಜರಾತ್ ಮಾತ್ರವೇ 3 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಲಿದೆ ಎಂದು ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (ಆರ್‌ಐಎಲ್) ಅಧ್ಯಕ್ಷ ಮುಕೇಶ್ ಅಂಬಾನಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Advertisement

66 ವರ್ಷದ ಬಿಲಿಯನೇರ್ ಕೈಗಾರಿಕೋದ್ಯಮಿ ಮುಕೇಶ್ ಅಂಬಾನಿ ಅವರು ‘ವೈಬ್ರೆಂಟ್ ಗುಜರಾತ್ ಶೃಂಗಸಭೆ 2024’ ರಲ್ಲಿ ಮಾತನಾಡುತ್ತಿದ್ದರು.

ಭಾರತವು 2047 ರ ವೇಳೆಗೆ 35 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗುವುದನ್ನು ಈ ಭೂಮಿಯಲ್ಲಿರುವ ಯಾವುದೇ ಶಕ್ತಿಗೂ ತಡೆಯಲು ಸಾಧ್ಯವಿಲ್ಲ. ನಾನು ನೋಡುವಂತೆ ಗುಜರಾತ್ ಮೂರು ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಲಿದೆ ಎಂದು ಅಂಬಾನಿ ಹೇಳಿದರು.

ಅವರು ಗುಜರಾತ್ ಬೆಳವಣಿಗೆಗೆ ರಿಲಯನ್ಸ್ ಕೊಡುಗೆಯನ್ನು ಎತ್ತಿ ತೋರಿಸಿದರು. ಭಾರತದಾದ್ಯಂತ ವಿಶ್ವದರ್ಜೆಯ ಸ್ವತ್ತುಗಳು ಮತ್ತು ಸಾಮರ್ಥ್ಯಗಳನ್ನು ಸೃಷ್ಟಿಸಲು ಸಂಘಟಿತ ಕಂಪನಿಯ 12 ಲಕ್ಷ ಕೋಟಿ ರೂಪಾಯಿ ಹೂಡಿಕೆಯ ಮೂರನೇ ಒಂದು ಭಾಗ ಗುಜರಾತ್‌ ನಲ್ಲಿದೆ ಎಂದು ಅವರು ಹೇಳಿದರು.

ಗುಜರಾತ್‌ ಗೆ ಸಂಬಂಧಿಸಿದ ಹಲವಾರು ಬದ್ಧತೆಗಳನ್ನು ರಿಲಯನ್ಸ್ ಮುಖ್ಯಸ್ಥ ಮುಖೇಶ್ ಅಂಬಾನಿ ವಿವರಿಸಿದರು, “ಮುಂದಿನ ಹತ್ತು ವರ್ಷಗಳಲ್ಲಿ ಗಮನಾರ್ಹ ಹೂಡಿಕೆಗಳೊಂದಿಗೆ ಗುಜರಾತ್‌ ನ ಬೆಳವಣಿಗೆಯ ಭಾಗದಲ್ಲಿ ಸಂಸ್ಥೆಯು ಪ್ರಮುಖ ಪಾತ್ರವನ್ನು ವಹಿಸುತ್ತದೆ” ಎಂದು ಹೇಳಿದರು.

Advertisement

ಇದನ್ನೂ ಓದಿ:Sirsi: ರಾಮ ಮಂದಿರ ವಿಚಾರವನ್ನು ರಾಜಕೀಯಗೊಳಿಸಬಾರದು: ಅನಂತಕುಮಾರ ಹೆಗಡೆ

ಗ್ರೀನ್ ಎನರ್ಜಿ ನೇತೃತ್ವದ ಬೆಳವಣಿಗೆಯಲ್ಲಿ ಗುಜರಾತನ್ನು ಜಾಗತಿಕ ನಾಯಕನನ್ನಾಗಿ ಮಾಡಲು ರಿಲಯನ್ಸ್ ಕೊಡುಗೆ ನೀಡಲಿದೆ ಎಂದು ಅಂಬಾನಿ ಹೇಳಿದರು. “2030 ರ ವೇಳೆಗೆ ನವೀಕರಿಸಬಹುದಾದ ಇಂಧನದ ಮೂಲಕ ಗುಜರಾತ್‌ ನ ಅರ್ಧದಷ್ಟು ಎನರ್ಜಿ ಅಗತ್ಯಗಳನ್ನು ಪೂರೈಸಲು ನಾವು ಸಹಾಯ ಮಾಡುತ್ತೇವೆ” ಎಂದು ಅವರು ಹೇಳಿದರು.

“ಇದಕ್ಕಾಗಿ, ನಾವು ಜಾಮ್‌ನಗರದಲ್ಲಿ 5,000 ಎಕರೆಗಳಲ್ಲಿ ಧೀರೂಭಾಯಿ ಅಂಬಾನಿ ಗ್ರೀನ್ ಎನರ್ಜಿ ಗಿಗಾ ಕಾಂಪ್ಲೆಕ್ಸ್ ಅನ್ನು ನಿರ್ಮಿಸಲು ಪ್ರಾರಂಭಿಸಿದ್ದೇವೆ. ಇದು ಹೆಚ್ಚಿನ ಸಂಖ್ಯೆಯ ಹಸಿರು ಉದ್ಯೋಗಗಳನ್ನು ಸೃಷ್ಟಿಸುತ್ತದೆ ಮತ್ತು ಹಸಿರು ಉತ್ಪನ್ನಗಳು ಮತ್ತು ವಸ್ತುಗಳ ಉತ್ಪಾದನೆಯನ್ನು ಸಕ್ರಿಯಗೊಳಿಸುತ್ತದೆ. ಗುಜರಾತ್ ಅನ್ನು ಹಸಿರು ಉತ್ಪನ್ನಗಳ ಪ್ರಮುಖ ರಫ್ತುದಾರನನ್ನಾಗಿ ಮಾಡುತ್ತದೆ ಎಂದು ಮುಕೇಶ್ ಅಂಬಾನಿ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next