Advertisement

5,159 ಅತಿಥಿ ಶಿಕ್ಷಕರ ನೇಮಕಕ್ಕೆ ಸೂಚನೆ

08:42 PM Jul 24, 2022 | Team Udayavani |

ಬೆಂಗಳೂರು: 2022-23ನೇ ಸಾಲಿನ ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಲಿ ಇರುವ 5,159 ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಶಿಕ್ಷಣ ಇಲಾಖೆ ಸೂಚಿಸಿದೆ. ಪ್ರ

Advertisement

ಸಕ್ತ ಶೈಕ್ಷಣಿಕ ಸಾಲಿನ ಅಂತ್ಯದವರೆಗೂ ಅಥವಾ ಶಿಕ್ಷಕರ ನೇಮಕಾತಿ ನಡೆಸುವವರೆಗೆ ನೇಮಿಸಿಕೊಳ್ಳುವಂತೆ ತಿಳಿಸಿದೆ. 10,500 ರೂ. ಗೌರವಧನ ನಿಗದಿ ಮಾಡಿದೆ. ಈಗಾಗಲೇ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ಸಚಿವ ಬಿ.ಸಿ. ನಾಗೇಶ್‌ ಸೂಚಿಸಿದ್ದಾರೆ. ಈಗ ಪ್ರೌಢ ಶಿಕ್ಷಣ ಇಲಾಖೆಯು ಅಧಿಕೃತ ಆದೇಶ ಹೊರಡಿಸಿದೆ.

ಅವಶ್ಯವಿರುವ ಶಿಕ್ಷಕರನ್ನು ನೇಮಕ ಮಾಡಿಕೊಂಡು ಕ್ರೋಢೀಕೃತ ಮಾಹಿತಿಯನ್ನು ಜು.26ರೊಳಗೆ ಶಿಕ್ಷಣ ಇಲಾಖೆ ಕೇಂದ್ರ ಕಚೇರಿಗೆ ಮಾಹಿತಿ ನೀಡುವಂತೆ ಪ್ರೌಢಶಿಕ್ಷಣ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next