Advertisement

ಅತಿಥಿ ಶಿಕ್ಷಕರ ನೇಮಕಕ್ಕೆ ಸೂಚನೆ

11:31 PM Aug 05, 2019 | Lakshmi GovindaRaj |

ಬೆಂಗಳೂರು: ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆಗೆ ತಕ್ಕಂತೆ ಅತಿಥಿ ಶಿಕ್ಷಕರನ್ನು ಕ್ರಮಬದ್ಧವಾಗಿ ನೇಮಿಸಿಕೊಳ್ಳಲು ಸಾರ್ವಜನಿಕ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಬೆಂಗಳೂರು ವಿಭಾಗಕ್ಕೆ 589, ಮೈಸೂರು ವಿಭಾಗಕ್ಕೆ 775, ಬೆಳಗಾವಿ ವಿಭಾಗಕ್ಕೆ 1017 ಹಾಗೂ ಕಲಬುರಗಿ ವಿಭಾಗಕ್ಕೆ 1072 ಸೇರಿ 3,453 ಅತಿಥಿ ಶಿಕ್ಷಕರ ನೇಮಕಕ್ಕೆ ಸೂಚನೆ ನೀಡಲಾಗಿದೆ.

Advertisement

ಸೂಚಿಸಿರುವ ಸಂಖ್ಯೆಯಷ್ಟೇ ಅತಿಥಿ ಶಿಕ್ಷಕರನ್ನು ಶಾಲಾ ಮುಖ್ಯೋಪಾಧ್ಯಾಯರ ಮೂಲಕ ನೇಮಿಸಿಕೊಳ್ಳಬೇಕು. ಜಿಲ್ಲಾ ಮಟ್ಟದಲ್ಲಿ ಕೊರತೆ ಕಂಡುಬಂದರೆ ಅವರಲ್ಲಿಯೇ ಹೊಂದಾಣಿಕೆ ಮಾಡಿಕೊಳ್ಳಬೇಕು. ಯಾವುದೇ ರೀತಿಯ ಲೋಪ ಆಗದಂತೆ ಎಚ್ಚರ ವಹಿಸಬೇಕು ಎಂದು ಜಿಲ್ಲಾ ಉಪನಿರ್ದೇಶಕರಿಗೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಇಲಾಖೆ ನಿರ್ದೆಶನ ನೀಡಿದೆ.

Advertisement

Udayavani is now on Telegram. Click here to join our channel and stay updated with the latest news.

Next