Advertisement

ಉಕ್ಕಿನ ಸೇತುವೆ ವಿನ್ಯಾಸ ಬದಲಾವಣೆಗೆ ಸೂಚನೆ

11:23 AM Aug 02, 2017 | |

ಬೆಂಗಳೂರು: ಬಿಬಿಎಂಪಿ ವತಿಯಿಂದ ನಗರದ ಶಿವಾನಂದ ವೃತ್ತದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಉಕ್ಕಿನ ಸೇತುವೆಯ ವಿನ್ಯಾಸ ಬದಲಾವಣೆಗೆ ಅವಕಾಶವಿದೆಯೆ ಎಂಬುದನ್ನು ಪರಿಶೀಲಿಸುವಂತೆ ಪಾಲಿಕೆಯ ಆಯುಕ್ತರಿಗೆ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್‌ ಸೂಚಿಸಿದ್ದಾರೆ. 

Advertisement

ಶಿವಾನಂದ ವೃತ್ತದ ಬಳಿ ಉಕ್ಕಿನ ಸೇತುವೆಯಿಂದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಕಟ್ಟಡ ಮರೆಯಾಗಲಿದೆ ಎಂಬ ಕಾರಣಕ್ಕಾಗಿ ಮಂಡಳಿ ಯೋಜನೆಗೆ ವಿರೋಧ ವ್ಯಕ್ತಪಡಿಸಿತ್ತು. ಆ ಹಿನ್ನೆಲೆಯಲ್ಲಿ ಮಂಗಳವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಶಿವಾನಂದ ವೃತ್ತದ ಉಕ್ಕಿನ ಸೇತುವೆ ಹಾಗೂ ಮಿನರ್ವ ವೃತ್ತದಿಂದ ಹಡ್ಸನ್‌ ವೃತ್ತದವರೆಗೆ ನಿರ್ಮಾಣ ಮಾಡಲು ಉದ್ದೇಶಿಸಿರುವ ಸ್ಟೀಲ್‌ ಬ್ರಿಡ್ಜ್ ಬಗ್ಗೆ ಬಿಬಿಎಂಪಿ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. 

ಶಿವಾನಂದ ವೃತ್ತದಲ್ಲಿ ಚಲನಚಿತ್ರ ವಾಣಿಜ್ಯ ಮಂಡಳಿಗೆ ತೊಂದರೆಯಾಗದಂತೆ ನಕ್ಷೆ ವಿನ್ಯಾಸದಲ್ಲಿ ತಿದ್ದುಪಡಿ ಮಾಡಲು ಸಾಧ್ಯವಿದೆಯೇ ಎಂದು ಪರಿಶೀಲಿಸುವಂತೆ ಹಾಗೂ ಶೇಷಾದ್ರಿಪುರ ರೈಲ್ವೆ ಕೆಳಸೇತುವೆ ಅಗಲೀಕರಣ ಮಾಡುವಂತೆ ಸೂಚಿಸಿದ್ದಾರೆ.

ಇದೇ ಸಂದರ್ಭದಲ್ಲಿ ಮಿನರ್ವ ವೃತ್ತದಿಂದ ಹಡ್ಸನ್‌ ವೃತ್ತದವರೆಗೆ ಜೆ.ಸಿ.ರಸ್ತೆಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ಉಕ್ಕಿನ ಸೇತುವೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಈ ವೇಳೆ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌ ಅವರು, ಒಟ್ಟು 3 ಕಿ.ಮೀ. ಉದ್ದದವರೆಗೆ ಉಕ್ಕಿನ ಮೇಲ್ಸೇತುವೆ ನಿರ್ಮಿಸಲಾಗುವುದು ಹಾಗೂ ಪಾಲಿಕೆಯ ಕೇಂದ್ರ ಕಚೇರಿಯ ಎದುರಿನಲ್ಲಿರುವ ಸ್ಕೈವಾಕ್‌ ಯೋಜನೆಗೆ ಅಡ್ಡಿಯಾದರೆ ಅದನ್ನು ತೆರವುಗೊಳಿಸುವುದಾಗಿ ಮಾಹಿತಿ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next