Advertisement
ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳ ಆಶ್ರಯದಲ್ಲಿ ತೀವ್ರಗೊಂಡ ಮಿಷನ್ ಇಂದ್ರಧನುಷ್ಕಾರ್ಯಕ್ರಮದ ಪೂರ್ವ ಸಿದ್ಧತೆಗಾಗಿ ಜಿಲ್ಲಾ ಸಂಚಲನಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, 0 ದಿಂದ 2 ವರ್ಷದೊಳಗಿನ ಮಕ್ಕಳು ಮತ್ತು ಗರ್ಭಿಣಿಯರು ಲಸಿಕೆಯಿಂದ ತಪ್ಪಿಸಿಕೊಂಡಿದ್ದರೆ ಅಥವಾ ಬಿಟ್ಟು ಹೋಗಿದ್ದರೆ ಅಂತವರನ್ನು ಗುರುತಿಸಿ ಲಸಿಕೆ ಹಾಕಿಸಲು ಕ್ರಮ ವಹಿಸಬೇಕು.
Related Articles
Advertisement
ಕಂಟ್ರೋಲ್ ರೂಮ್ ಬಳಸಿಕೊಳ್ಳಿ:ಪ್ರತಿಯೊಬ್ಬರು ಕೋವಿಶಿಲ್ಡ್ ಲಸಿಕೆ ಪಡೆದುಕೊಳ್ಳಲು ಅನುಕೂಲವಾಗುವಂತೆ ಸಂದೇಶ ತಲುಪಿಸಿ ಮಾಹಿತಿ ರವಾನೆಗೆ ಜಿಲ್ಲಾಧಿಕಾರಿಗಳ ಕಚೇರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯ ಕಂಟ್ರೋಲ್ ರೂಮ್‌ಗಳನ್ನು ಬಳಸಿಕೊಳ್ಳಲು ಜಿಲ್ಲಾಧಿಕಾರಿಗಳು ಸೂಚಿಸಿದರು. ಸಭೆಯಲ್ಲಿ ಜಿಪಂ ಸಿಇಒ ಜಹೀರಾ ನಸೀಮ್, ಸಹಾಯಕ ಆಯುಕ್ತೆ ಗರೀಮಾ ಪನ್ವಾರ, ಡಿಎಚ್‌ಒ ಡಾ| ವಿ.ಜಿ.ರೆಡ್ಡಿ, ವೈದ್ಯಾಧಿ ಕಾರಿ ಡಾ| ಅನಿಲ್ ತಾಳಿಕೋಟಿ, ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳಾದ ಡಾ| ಮಹೇಶ ಬಿರಾದಾರ, ಡಾ| ಶಿವಶಂಕರ, ಡಾ| ಕೃಷ್ಣಾ ರೆಡ್ಡಿ, ಡಾ| ದೀಪಾ ಕೊಂಡಾ, ಡಾ| ಸಂಜೀವಕುಮಾರ ಪಾಟೀಲ, ಸಂಗಪ್ಪ ಕಾಂಬಳೆ ಇದ್ದರು.