ಬೆಳಗಾವಿ: ವಿವಿದ ಕಡೆಗಳ ಪ್ರಚಾರ ಸಭೆಗಳಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಗವಾಡ ಶಾಸಕ ರಾಜು ಕಾಗೆ ಅವರಿಗೆ ನೋಟಿಸ್ ಜಾರಿ.
ಶಾಸಕರಾದ ರಾಜು ಕಾಗೆ ಅವರು ಏ.30 ರಂದು ಮದಬಾವಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಬೇರೆ ವ್ಯಕ್ತಿಯ ವೈಯಕ್ತಿಕ ವಿಷಯವನ್ನು ಪ್ರಸ್ತಾಪ ಮಾಡಿದ್ದರು.
ಇದಲ್ಲದೆ ಜುಗುಳ ಮತ್ತು ಮಂಗಾವತಿ ಗ್ರಾಮಗಳಲ್ಲಿ ಕಡಿಮೆ ಲೀಡ್ ಕೊಟ್ಟಲ್ಲಿ ಕರೆಂಟ್ ಕಟ್ ಎಂದು ಮತದಾರರಿಗೆ ಬೆದರಿಕೆ ಹಾಕಿದ್ದರು..
ಈ ಎರಡೂ ಪ್ರಕರಣಗಳಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂದಿಸಿದಂತೆ ಕಾಗವಾಡ ವಿಧಾನ ಸಭಾ ಮತಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಗಳು ನೋಟೀಸ್ ಜಾರಿ ಮಾಡಿದ್ದಾರೆ.
24 ಗಂಟೆಯೊಳಗಾಗಿ ವಿವರಣೆ ನೀಡುವಂತೆ ಶಾಸಕ ರಾಜು ಕಾಗೆ ಅವರಿಗೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಚುನಾವಣಾಧಿಕಾರಿ ಹೇಳಿಕೆ.
ಇದನ್ನೂ ಓದಿ: Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ