ವಿಜಯಪುರ: ಜಿಲ್ಲೆಯ ಅಧಿಕಾರಿಗಳು ತಮ್ಮ ತಮ್ಮ ಇಲಾಖೆಗಳಲ್ಲಿ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಅಡಿಯಲ್ಲಿ ದೊರೆಯುವ ಸೌಲಭ್ಯಗಳನ್ನು ಸರಿಯಾದ ರೀತಿಯಲ್ಲಿ ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕಾರ್ಯ ಮಾಡಬೇಕು ಎಂದು ವಿಜಯಪುರ ಸಂಸದ ರಮೇಶ ಜಿಗಜಿಣಗಿ ಅ ಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ಜರುಗಿದ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ದಿಶಾ ಸಭೆಯಲ್ಲಿ ಈ ಸೂಚನೆ ನೀಡಿದ ಅವರು, ಪ್ರಧಾನಮಂತ್ರಿ ಆವಾಸ್ ಯೋಜನೆಯಲ್ಲಿನ ಮನೆಗಳನ್ನು ಅರ್ಹ ಫಲಾನುಭವಿಗಳಿಗೆ ಸಿಗುವಂತೆ ನೋಡಿಕೊಳ್ಳಬೇಕು. ಜೊತೆಗೆ ಶೀಘ್ರವೇ ಕಾಮಗಾರಿ ಪೂರ್ಣಗೊಳಿಸಬೇಕು. ರೈತರ ಅನುಕೂಲಕ್ಕಾಗಿ ಟಿ.ಸಿ. ಸಮಸ್ಯೆ ಹಾಗೂ ವಿದ್ಯುತ್ ಸಮಸ್ಯೆ ಪರಿಹಾರಕ್ಕೆ ತ್ವರಿತ ಕ್ರಮ ಕೈಗೊಳ್ಳಬೇಕು. ಯೋಜನಾ ಸಮನ್ವಯಾಧಿಕಾರಿಗಳು ಸರ್ವಶಿಕ್ಷಣ ಅಭಿಯಾನದ ಅಧಿಕಾರಿಗಳು ಸರ್ಕಾರಿ ಶಾಲೆಗಳ ಕಟ್ಟಡ ಹಾಗೂ ಕೊಠಡಿಗಳ ದುರಸ್ತಿ ಬಗ್ಗೆ ಗಮನ ಹರಿಸುವಂತೆ ಸೂಚಿಸಿದರು. ಪಿಂಚಣಿ ಸೌಲಭ್ಯಗಳು ಸರಿಯಾದ ಫಲಾನುಭವಿಗಳಿಗೆ ಸಿಗಬೇಕು.
ಪಿಂಚಣಿಗೆ ಸಂಬಂಧಪಟ್ಟ ಸಮಸ್ಯೆಗಳನ್ನು ಬಗೆಹರಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿ, ಜಿಲ್ಲಾ ಕೈಗಾರಿಕಾ ಕೇಂದ್ರದಿಂದ ಯುವಕರಿಗೆ ತರಬೇತಿಯನ್ನು ಹಾಗೂ ಕೈಗಾರಿಕಾ ಕೇಂದ್ರದಿಂದ ಸಿಗುವ ಸಾಲ ಸೌಲಭ್ಯ ಅರ್ಹರಿಗೆ ದೊರಕುವಂತೆ ನೋಡಿಕೊಳ್ಳಬೇಕು. ಅಲಿಯಾಬಾದ್ ಚತುಸ್ಪಥ ಹಾಗೂ ಮುಳವಾಡದ ಅಂಡರ್ ಪಾಸ್ ಕಾಮಗಾರಿ ಪೂರ್ಣಗೊಳಿಸಲು ರೈಲ್ವೆ ಇಲಾಖೆ ಅ ಕಾಧಿಕಾರಿಗಳು ತ್ವರಿತವಾಗಿ ಕ್ರಮ ಕೈಗೊಳ್ಳಬೇಕು. ನಗರದ ವಿಮಾನ ನಿಲ್ದಾಣ ಕಾಮಗಾರಿ ಉತ್ತಮ ಹಂತದಲ್ಲಿ ಕಾಮಗಾರಿ ಪ್ರಗತಿಕಾಣುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಸಭೆಗೆ ವಿವರಿಸಿದ ಜಿಲ್ಲಾ ಧಿಕಾರಿ ಪಿ. ಸುನೀಲಕುಮಾರ, ಸ್ವತ್ಛ ಭಾರತ್ ಮಿಷನ್ ಯೋಜನೆ ಅಡಿಯಲ್ಲಿ ನಗರದಲ್ಲಿ ಕಸ ವಿಂಗಡಣೆ ಮಾಡಿ ಕಸ ವಿಲೇವಾರಿ ಉತ್ತಮ ರೀತಿಯಲ್ಲಿ ನಡೆಯುತ್ತಿದೆ. ನಗರದ ಹೊರ ವಲಯದಲ್ಲಿ 20 ಎಕರೆ ಭೂಮಿಯಲ್ಲಿ ಕಸ ವಿಲೇವಾರಿ ಮಾಡಲಾಗುತ್ತಿದೆ. ವಿಮಾನ ನಿಲ್ದಾಣದ ಕಾಮಗಾರಿಗಳು ಪ್ರಗತಿ ಹಂತದಲ್ಲಿವೆ ಎಂದು ವಿವರಿಸಿದರು. ಜಿ.ಪಂ. ಸಿಇಒ ಗೋವಿಂದರೆಡ್ಡಿ ಮಾತನಾಡಿ, ಪ್ರತಿ ಹಳ್ಳಿಗಳಿಗೆ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಜಿಲ್ಲೆಯ ಬಹುತೇಕ ಗ್ರಾಮಗಳಲ್ಲಿ ಈ ಬಾರಿ ಬೇಸಿಗೆಯಲ್ಲಿ ಟ್ಯಾಂಕರ್ ನೀರಿಗೆ ಬೇಡಿಕೆ ಬರದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ವಿವರಿಸಿದರು. ಇದೇ ಸಂದರ್ಭದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ಮಾಸ್ಕ್ ವಿತರಿಸಲಾಯಿತು. ಜಿ.ಪಂ ಮುಖ್ಯ ಯೋಜನಾಧಿ ಕಾರಿ ನಿಂಗಪ್ಪ ಗೋಠೆ ಸೇರಿದಂತೆ ವಿವಿಧ ಇಲಾಖೆಗಳ ವಿವಿಧ ಅಧಿಕಾರಿಗಳು ಇದ್ದರು.