Advertisement

ಬೀದಿ ನಾಯಿ ನಿಯಂತ್ರಣಕ್ಕೆ ಸೂಚನೆ

04:29 PM Jul 09, 2018 | Team Udayavani |

ಹುಬ್ಬಳ್ಳಿ: ಬೀದಿ ನಾಯಿಗಳ ಹಾವಳಿಗೆ ಕಡಿವಾಣ ಹಾಕುವುದು ತುರ್ತು ಅಗತ್ಯವಿದ್ದು, ಪ್ರತಿ ತಿಂಗಳು ಸಂತಾನ ಶಕ್ತಿ ಹರಣ ಶಸ್ತ್ರಚಿಕಿತ್ಸೆಯ ಸಮಗ್ರ ವರದಿ ನೀಡುವಂತೆ ಶಾಸಕ ಪ್ರಸಾದ ಅಬ್ಬಯ್ಯ ಅಧಿಕಾರಿಗಳಿಗೆ ಸೂಚಿಸಿದರು. ಬೀದಿ ನಾಯಿಗಳ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರವಿವಾರ ಅಧಿಕಾರಿಗಳ ತುರ್ತು ಸಭೆ ನಡೆಸಿದ ಅವರು, ಬೀದಿ ನಾಯಿಗಳ ಹಾವಳಿ ಹೆಚ್ಚುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಇದಕ್ಕೆ ಕಡಿವಾಣ ಹಾಕುವುದು ಅತ್ಯವಶ್ಯವಾಗಿದ್ದು, ನಿರ್ಲಕ್ಷ್ಯ ವಹಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

Advertisement

ಬೀದಿ ನಾಯಿಗಳ ಹಾವಳಿ ಕಡಿವಾಣಕ್ಕೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಶಾಸಕ ಅಬ್ಬಯ್ಯ ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಪಾಲಿಕೆ ಅಧಿಕಾರಿ ಡಾ| ಸಾಲಿಗೌಡ್ರ, ಸಂತಾನ ಹರಣ ಶಸ್ತ್ರಚಿಕಿತ್ಸೆ ಬಗ್ಗೆ ಲೈವ್‌ ಸ್ಟ್ರೀಮಿಂಗ್‌ ಮಾಡಿದ್ದೇವೆ. ಪ್ರತಿದಿನ 25ರಿಂದ 30 ನಾಯಿಗಳನ್ನು ಹಿಡಿದು ಶಸ್ತ್ರಚಿಕಿತ್ಸೆ ಮಾಡಲಾಗುತ್ತಿದೆ. ಹಿಡಿದ ನಾಯಿಗಳನ್ನು ಡಂಪಿಂಗ್‌ ಯಾರ್ಡ್‌ಗೆ ಬಿಡಲಾಗುತ್ತದೆ ಎಂದು ಮಾಹಿತಿ ನೀಡಿದರು.

ನಾಯಿಗಳ ಸಂತಾನ ಶಕ್ತಿಹರಣ ಶಸ್ತ್ರಚಿಕಿತ್ಸಾ ಕೇಂದ್ರವನ್ನು ಹುಬ್ಬಳ್ಳಿ ಹಾಗೂ ಧಾರವಾಡ ನಗರಕ್ಕೆ ಪ್ರತ್ಯೇಕವಾಗಿ ಮಾಡಬೇಕು. ಪ್ರತಿದಿನ ಹಿಡಿಯುವ ಶ್ವಾನಗಳ ಸಂಖ್ಯೆ ದ್ವಿಗುಣಗೊಳಿಸಬೇಕು. ಆಗ ಮಾತ್ರ ನಾಯಿಗಳ ಹಾವಳಿ ನಿಯಂತ್ರಣ ಸಾಧ್ಯ. ಕೋಟ್ಯಂತರ ರೂ. ಅನುದಾನದಲ್ಲಿ ಉತ್ತಮ ರಸ್ತೆಗಳನ್ನು ನಿರ್ಮಿಸಲಾಗಿದೆ. ಆದರೆ, ಸಾರ್ವಜನಿಕರು ರಸ್ತೆ ಮೇಲೆಯೇ ಕಸ ಸುರಿಯುತ್ತಿರುವುದರಿಂದ ರಸ್ತೆಯ ಸೌಂದರ್ಯ ಹಾಳಾಗುತ್ತಿದೆ. ಕೆಲವೆಡೆ ರಸ್ತೆ ನಿರ್ಮಿಸಿ ನಿರುಪಯುಕ್ತ ವಾಹನಗಳ ಪಾರ್ಕಿಂಗ್‌,
ಚಕ್ಕಡಿ, ತಳ್ಳುಗಾಡಿಗಳನ್ನು ನಿಲ್ಲಿಸುತ್ತಿರುವುದು ಸರಿಯಲ್ಲ. ಈ ಕುರಿತು ಪಾಲಿಕೆ ವಲಯಾಧಿಕಾರಿಗಳು ಗಮನ ಹರಿಸಬೇಕು ಎಂದು ಪ್ರಸಾದ್‌ ಹೇಳಿದರು. ಪಾಲಿಕೆ ಅಪರ ಆಯುಕ್ತ ಅಜೀಜ್‌ ದೇಸಾಯಿ, ವಲಯ ಅಧಿಕಾರಿಗಳಾದ ಆನಂದ ಕಾಂಬ್ಳೆ, ಹಿರೇಮಠ ಇನ್ನಿತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next