Advertisement
ಶಾಲಾ ದಾಖಲಾತಿ ಹಾಗೂ ವ್ಯವಸ್ಥಿತ ನಿರ್ವಹಣೆ ಕುರಿತು ಸೋಮವಾರ ಏರ್ಪಡಿಸಲಾಗಿದ್ದ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
Related Articles
Advertisement
ಶಾಲಾ ಮಕ್ಕಳನ್ನು ಕರೆದೊಯ್ಯಲು ಇರುವ ವಾಹನಗಳ ಸ್ಥಿತಿ-ಗತಿ, ವಾಹನ ಚಾಲಕನ ಅನುಭವ, ಮಾರ್ಗ, ವಾಹನ ಸಂಖ್ಯೆ, ವಾಹನ ವಿಮೆ ಮುಂತಾದವುಗಳನ್ನು ಶಾಲಾ ಆಡಳಿತ ಮಂಡಳಿಯವರು ಆಯಾ ತಾಲೂಕಿನ ಕ್ಷೇತ್ರ ಶಿಕ್ಷಣಾಕಾರಿಗಳಿಗೆ ಸಲ್ಲಿಸಿ ಅನುಮತಿ ಪಡೆಯಬೇಕು. ಬಿಇಒ ಪರವಾನಗಿ ಪಡೆಯದೇ ನಡೆಸುತ್ತಿರುವ ಶಾಲೆಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲಿಸಬೇಕು. ತಮ್ಮ ಸೂಚನೆಯ ನಂತರವೂ ಸುಧಾರಣೆ ಕಾಣದ ಶಾಲೆಗಳ ಮಾನ್ಯತೆ ರದ್ದುಪಡಿಸಿ ಆದೇಶ ಹೊರಡಿಸಬೇಕು. ತಪ್ಪಿದಲ್ಲಿ ಆಯಾ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ತಿಳಿಸಿದರು.
ಕಳೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಬಂದಿರುವ ಫಲಿತಾಂಶದ ಕುರಿತು ಅಸಮಾಧಾನ ವ್ಯಕ್ತಪಡಿಸಿದ ಜಿಲ್ಲಾಧಿಕಾರಿಗಳು ಶಿಕ್ಷಣ ಇಲಾಖೆಯ ಎಲ್ಲ ಹಂತದ ಅಧಿಕಾರಿಗಳು ವಿಷಯ ಪರೀವೀಕ್ಷಕರು ಹಾಗೂ ವಿಷಯವಾರು ಶಿಕ್ಷಕರು ಫಲಿತಾಂಶದ ಹಿನ್ನೆಡೆಗೆ ಆತ್ಮಾವಲೋಕನ ಮಾಡಿಕೊಂಡು ಫಲಿತಾಂಶ ಸುಧಾರಣೆಗೆ ಕ್ರಮವಹಿಸಬೇಕು. ತಪ್ಪಿದಲ್ಲಿ ಅವರನ್ನು ಹೊಣೆಗಾರರನ್ನಾಗಿ ಮಾಡುವುದು ಅನಿವಾರ್ಯವಾಗಲಿದೆ ಎಂದರು.
ಶಿಕಾರಿಪುರ ತಾಲೂಕಿನ ನೆಲವಾಗಿಲು ಗ್ರಾಮದ ಪ್ರೌಢಶಾಲೆಯ ಈ ಬಾರಿಯ ಫಲಿತಾಂಶ ಅತ್ಯಂತ ಕಳಪೆಯಾಗಿದ್ದು, ಆ ಶಾಲೆಯನ್ನು ಸಂಪೂರ್ಣ ಸ್ಥಗಿತಗೊಳಿಸಿ, ಅಲ್ಲಿ ಈಗಾಗಲೇ ದಾಖಲಾಗಿರುವ ಮಕ್ಕಳನ್ನು ಸಮೀಪದ ಸರ್ಕಾರಿ ಶಾಲೆಗೆ ದಾಖಲಿಸುವಂತೆಯೂ ಅವರು ಶಿಕಾರಿಪುರದ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚಿಸಿದರು.
ಮುಂದಿನ ದಿನಗಳಲ್ಲಿ ಗುಣಮಟ್ಟದ ಶಿಕ್ಷಣ, ಫಲಿತಾಂಶ ಸುಧಾರಣೆಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ತಮ್ಮ ಜವಾಬ್ದಾರಿಯರಿತು ಕಾರ್ಯನಿರ್ವಹಿಸಬೇಕು. ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವರ್ತನೆ ಕ್ಷಮಿಸಲಾಗುವುದಿಲ್ಲ. ಖಾಸಗಿ ಶಾಲೆಗಳಲ್ಲಿ ನೋಟ್ ಪುಸ್ತಕ, ಸಮವಸ್ತ್ರಗಳನ್ನು ಕಡ್ಡಾಯವಾಗಿ ಕೊಳ್ಳುವಂತೆ ಒತ್ತಾಯ ಮಾಡುತ್ತಿರುವುದರ ಬಗ್ಗೆಯೂ ಸಾರ್ವಜನಿಕರಿಂದ ದೂರುಗಳು ಬರುತ್ತಿವೆ. ಶಾಲಾ ಆವರಣದ ವ್ಯಾಪ್ತಿಯಲ್ಲಿ ಮಾರಾಟ ಮಾಡದಂತೆ ಸರ್ಕಾರ ಆದೇಶ ಹೊರಡಿಸಿದರೂ ಆದೇಶವನ್ನು ನಿರ್ಲಕ್ಷ ್ಯ ಮಾಡಿ, ಮಾರಾಟ ಮಾಡುವವರ ವಿರುದ್ಧವೂ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು. ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕಿ ಸುಮಂಗಳಾ ಪಿ. ಕುಚಿನಾಡ, ಪದವಿ ಪೂರ್ವ ಕಾಲೇಜು ಶಿಕ್ಷಣ ಇಲಾಖೆ ಉಪನಿರ್ದೇಶಕ ಇಮ್ತಿಯಾಜ್ ಅಹ್ಮದ್, ಎಲ್ಲ ತಾಲೂಕುಗಳ ಬಿಇಒ, ಶಿಕ್ಷಣ ಇಲಾಖೆ ಅಧಿಕಾರಿ-ಸಿಬ್ಬಂದಿ ಇದ್ದರು.