Advertisement
ವಿಧಾನಸೌದಲ್ಲಿಂದು ಕೆ.ಆರ್.ಡಿ.ಎಲ್ ಮಂಡಳಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ನಿಗಮವು ಸಾರ್ವಜನಿಕ ಆಸ್ತಿಯಾಗಿ ರೂಪುಗೊಳ್ಳುವ ಉತ್ತಮ ಕಾಮಗಾರಿಗಳನ್ನು ಆಯ್ಕೆ ಮಾಡಿಕೊಂಡು, ಕಾಮಗಾರಿಗಳ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕು. ರಸ್ತೆಗಳನ್ನು ಉತ್ತಮವಾಗಿ ನಿರ್ವಹಣೆ ಮಾಡಬೇಕು. ಪೈಪ್ ಲೈನ್, ಕೇಬಲ್ ಹಾಗು ರಸ್ತೆ ತಡೆಗಳನ್ನು ಅಳವಡಿಸಲು ರಸ್ತೆಗಳನ್ನು ಹಾಳಾಗುತ್ತಿವೆ. ಇದರಿಂದ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ. ಉತ್ತಮ ತಂತ್ರಜ್ಞಾನ ಅಳವಡಿಕೆ ಮೂಲಕ ರಸ್ತೆಗಳನ್ನು ನಿರ್ವಹಣೆ ಮಾಡಿ, ರಸ್ತೆ ತಡೆಗಳನ್ನು ವೈಜ್ಞಾನಿಕ ಮಾದರಿಯಲ್ಲಿ ಅಳವಡಿಸಲು ಕ್ರಮಕೈಗೊಳ್ಳಬೇಕು. ಕಾಮಗಾರಿಗಳನ್ನು ತ್ವರಿತವಾಗಿ ಕೈಗೊಳ್ಳಬೇಕು. ವಿಳಂಭ ನೀತಿಯಿಂದ ಸಾರ್ವಜನಿಕರಿಗೆ ತೊಂದರೆಯಾಗುವುದರ ಜೊತೆಗೆ ಕಾಮಗಾರಿಯ ವೆಚ್ಚವೂ ಅಧಿಕವಾಗುತ್ತದೆ. ನಿಗಮವು ಸದೃಡವಾಗಲು ಪೂರಕ ಕ್ರಮಗಳನ್ನು ಕೈಗೊಳ್ಳಬೇಕು. ನೆರೆಪೀಡಿತ ಪ್ರದೇಶಗಳಲ್ಲಿರುವ ಪರಿಶಿಷ್ಟ ಜಾತಿ ಪಂಗಡದ ಸಮುದಾಯದವರಿಗೆ ಮೂಲಭೂತಸೌಕರ್ಯ ಒದಗಿಸಲು ಎಲಿವೇಟೆಡ್ ಕಾರಿಡಾರ್ ಅನುದಾನವನ್ನು ಎಸ್‍ಸಿಪಿ ಹಾಗು ಟಿಎಸ್‍ಪಿ ಯೋಜನೆಗೆ ನೀಡಲು ಸೂಚಿಸಿದರು.
Advertisement
ವಿವಿಧ ಕಾಮಗಾರಿಗಳಿಗೆ ಉಪಮುಖ್ಯ ಮಂತ್ರಿ ಗೋವಿಂದ ಎಂ. ಕಾರಜೋಳ ಸೂಚನೆ
04:23 PM Sep 07, 2019 | Suhan S |
Advertisement
Udayavani is now on Telegram. Click here to join our channel and stay updated with the latest news.