Advertisement
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮಕ್ಕಳ ಸಹಾಯ ವಾಣಿ-1098 ಸಲಹಾ ಮಂಡಳಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈ ಬಗ್ಗೆ ಸಮಸ್ಯೆ ಇದ್ದಲ್ಲಿ ತಿಳಿಸಿದರೆ, ಸದ್ಯದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರ ಸಭೆ ಕರೆಯಲಿದ್ದು, ಅಲ್ಲಿ ಅವರಿಗೆ ಸೂಚನೆ ನೀಡಲಾಗುವುದೆಂದು ಅವರು ತಿಳಿಸಿದರು.
Related Articles
Advertisement
ಮಕ್ಕಳ ಸಹಾಯವಾಣಿ ಮೂಲಕ ಪತ್ತೆಹಚ್ಚಿ ವಶಕ್ಕೆ ತೆಗೆದುಕೊಂಡ ಮಕ್ಕಳನ್ನು ತಪಾಸಣೆಗೆ ಆಸ್ಪತ್ರೆಗಳಿಗೆ ಕರೆ ತರುತ್ತಿಲ್ಲ ಎಂದು ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ| ಎಂ.ಎಸ್. ಪಾಟೀಲ್ ಸಭೆ ಗಮನಕ್ಕೆ ತಂದರು. ತಮ್ಮ ಸುಪರ್ದಿಗೆ ತೆಗೆದುಕೊಂಡು ಮಕ್ಕಳನ್ನು ಸನಿಹದ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಹಾಜರುಪಡಿಸಿ ಆರೋಗ್ಯ ತಪಾಸಣೆ ಮಾಡಿಸಲಾಗುವುದೆಂದು ಮಕ್ಕಳ ಸಹಾಯವಾಣಿ ಅಧಿಕಾರಿಗಳು ಸ್ಪಷ್ಟನೆ ನೀಡಿದರು. ಜಿಲ್ಲೆಯಲ್ಲಿ ಒಟ್ಟು 45 ಬಾಲಕಾರ್ಮಿಕರನ್ನು ದಾಳಿ ನಡೆಸಿ ಪತ್ತೆ ಹಚ್ಚಿದ್ದು, ಆಯಾ ಅಂಗಡಿ ಮತ್ತು ಹೋಟೆಲ್ ಮಾಲೀಕರಿಗೆ ಸದ್ಯದಲ್ಲಿ ನೋಟಿಸ್ ನೀಡಲಾಗುವುದು ಎಂದು ಬಾಲಕಾರ್ಮಿಕ ಇಲಾಖೆ ಜನಾ ನಿರ್ದೇಶಕ ರಘುವೀರ ಸಿಂಗ್ ಠಾಕೂರ ಸಭೆಗೆ ಮಾಹಿತಿ ನೀಡಿದರು. ಮಕ್ಕಳ ರಕ್ಷಣೆ ನಿಟ್ಟಿನಲ್ಲಿ ಜಿಪಂ, ಶಿಕ್ಷಣ ಇಲಾಖೆ, ಶಿಕ್ಷಣ ಮಕ್ಕಳ ರಕ್ಷಣಾ ಘಟಕ, ಕಾರ್ಮಿಕ ಇಲಾಖೆ, ಪೊಲೀಸ್ ಇಲಾಖೆ, ರೈಲ್ವೆ ಇಲಾಖೆ, ಸಾರಿಗೆ ಇಲಾಖೆ ಮುಂತಾದವುಗಳು ಸಹಕಾರ ನೀಡಬೇಕೆಂದು ಜಿಲ್ಲಾಧಿಕಾರಿಗಳು ಸೂಚಿಸಿದರು.
ಇದೇ ಸಂದರ್ಭದಲ್ಲಿ ಪಿಪಿಟಿ ಪ್ರದರ್ಶನದ ಮೂಲಕ ಮಕ್ಕಳ ಸಹಾಯವಾಣಿ ಸಂಯೋಜಕರಾದ ಶರ್ವಯ್ಯ ಅವರು ಸಭೆಗೆ ಮಾಹಿತಿ ನೀಡಿದರು. ಕರ್ನಾಟಕ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಚಂದ್ರಶೇಖರ ಅಲ್ಲಿಪುರ, ಮಕ್ಕಳ ಕಲ್ಯಾಣ ಸಮಿತಿಯ ವಿಶ್ವನಾಥ ರೆಡ್ಡಿ ಪಾಟೀಲ್, ಕೊಲ್ಯಾಬ್ ಕೇಂದ್ರ ಡಾನ್ ಬೋಸ್ಕೋ ಸಮಾಜ ಸೇವಾ ಕೇಂದ್ರದ ಫಾದರ್ ಜಿ, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.