Advertisement

Notice: ಅಕ್ರಮ ಮದ್ಯ ಮಾರಾಟ… ರಾಜ್ಯ ಸರಕಾರಕ್ಕೆ ನೋಟಿಸ್‌

10:32 PM Dec 04, 2024 | Team Udayavani |

ಬೆಂಗಳೂರು: ರಾಜ್ಯದಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ನ್ಯಾಯಾಲಯದ ಆದೇಶ ಪಾಲಿಸಲಾಗಿಲ್ಲ ಎಂದು ಆರೋಪಿಸಿ ಸಲ್ಲಿಸಲಾಗಿರುವ ನ್ಯಾಯಾಂಗ ನಿಂದನೆ ಅರ್ಜಿಗೆ ಸಂಬಂಧಿಸಿ, ರಾಜ್ಯ ಸರಕಾರಕ್ಕೆ ಹೈಕೋರ್ಟ್‌ ನೋಟಿಸ್‌ ಜಾರಿಗೊಳಿಸಿದೆ.

Advertisement

ಈ ವಿಚಾರವಾಗಿ ವಕೀಲೆ ಹಾಗೂ ಮದ್ಯ ನಿಷೇಧ ಆಂದೋಲನದ ಸದಸ್ಯೆ ಸುಧಾಕಾಟ್ವಾ ಸಲ್ಲಿ ಸಿರುವ ನ್ಯಾಯಾಂಗ ನಿಂದನೆ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಎನ್‌.ವಿ.ಅಂಜಾರಿಯಾ ಹಾಗೂ ನ್ಯಾ| ಕೆ.ವಿ.ಅರವಿಂದ್‌ ಅವರಿದ್ದ ವಿಭಾ ಗೀಯ ನ್ಯಾಯಪೀಠದ ಮುಂದೆ ಬುಧವಾರ ವಿಚಾರಣೆಗೆ ಬಂದಿತ್ತು. ನ್ಯಾಯಾಂಗ ನಿಂದನೆ ಅರ್ಜಿಯಲ್ಲಿ ಆರೋಪಿತ ರನ್ನಾಗಿಸಿರುವ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ, ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್‌ ಕಟಾರಿಯಾ, ಮದ್ಯಪಾನ ಸಂಯಮ ಮಂಡಳಿ ಕಾರ್ಯದರ್ಶಿ ಎ. ಹನುಮನರಸಯ್ಯ, ಅಬಕಾರಿ ಆಯುಕ್ತ ಡಾ| ಜೆ. ರವಿಶಂಕರ್‌ ಅವರಿಗೆ ನೋಟಿಸ್‌ ಜಾರಿಗೊಳಿಸಿ ವಿಚಾರಣೆಯನ್ನು ಜ. 9ಕ್ಕೆ ಮುಂದೂಡಿತು.

Advertisement

Udayavani is now on Telegram. Click here to join our channel and stay updated with the latest news.

Next