Advertisement
ಹುಬ್ಬಳ್ಳಿಯ ಶಕುಂತಲಾ ಮೆಮೋರಿಯಲ್ ಹಾಸ್ಪಿಟಲ್ ಮತ್ತು ರಿಸರ್ಚ್ ಸೆಂಟರ್, ಹುಬ್ಬಳ್ಳಿ ಸೂಪರ್ ಸ್ಪೆಷಾಲಿಟಿ ಹಾಸ್ಪಿಟಲ್ ಹಾಗೂ ತತ್ವದರ್ಶ ಹಾಸ್ಪಿಟಲ್ ಎ ಯುನಿಟ್ ಆಫ್ ತತ್ವದರ್ಶ ಹೆಲ್ತ್ ಕೇರ್ ಸಲ್ಯೂಷನ್ಸ್ ಆಸ್ಪತ್ರೆಗಳಿಗೆ ಸಾಂಕ್ರಾಮಿಕ ರೋಗ ಕಾಯ್ದೆ-1987 ಹಾಗೂ ವಿಪತ್ತು ನಿರ್ವಹಣಾ ಕಾಯ್ದೆ-2005 ರನ್ವಯ 24 ಗಂಟೆಯಲ್ಲಿ ಉತ್ತರ ನೀಡುವಂತೆ ತಿಳಿಸಿ, ಆರೋಗ್ಯ ಇಲಾಖೆಯಿಂದ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗಿದೆ.
Related Articles
Advertisement
ಹುಬ್ಬಳ್ಳಿ ಸೂಪರ್ ಸ್ಪೆಷಾಲಿಟಿ ಹಾಸ್ಪಿಟಲ್ ನಲ್ಲಿ ಕೋವಿಡ್-19 ಸೋಂಕಿತರ ಚಿಕಿತ್ಸೆಗಾಗಿ 26 ಹಾಸಿಗೆಗಳನ್ನು ಮೀಸಲಿಡಲಾಗಿದ್ದು, 26 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಿಂದ ಮಾಹಿತಿ ನೀಡಲಾಗಿತ್ತು. ಏ.27ರಂದು ಆಸ್ಪತ್ರೆಗೆ ಜಿಲ್ಲಾ ಆರೋಗ್ಯಾ ಧಿಕಾರಿ ಭೇಟಿ ನೀಡಿದ ಸಂದರ್ಭದಲ್ಲಿ ಕೇವಲ ಕೋವಿಡ್-19 ದೃಢಪಟ್ಟ 6 ಜನರಿಗೆ ಚಿಕಿತ್ಸೆ ನೀಡುತ್ತಿರುವುದು ಕಂಡು ಬಂದಿದೆ. ಮತ್ತು ಒಟ್ಟು 26 ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು (ಸ್ಪ್ರೆಡ್‌ಶೀಟ್‌ನಲ್ಲಿ) ತಪ್ಪು ಮಾಹಿತಿ ನೀಡಿದೆ. ಇದೇ ರೀತಿ ತತ್ವದರ್ಶ ಆಸ್ಪತ್ರೆಯು 150 ಹಾಸಿಗೆಗಳಿಗೆ ಅನುಮತಿ ಪಡೆದಿದ್ದು, ಇದರಲ್ಲಿ ಶೇ.50 ಅಂದರೆ 75 ಹಾಸಿಗೆಗಳನ್ನು ಕೋವಿಡ್-19 ಸೋಂಕಿತರಿಗೆ ಮೀಸಲಿಡಬೇಕು. ಆದರೆ ತತ್ವದರ್ಶ ಆಸ್ಪತ್ರೆಯವರು ಕೋವಿಡ್-19 ದೃಢಪಟ್ಟ ಪ್ರಕರಣಗಳ ಲ್ಯಾಬೋರೇಟರಿ ಫಲಿತಾಂಶ ಇಲ್ಲದೇ ಕೋವಿಡ್-19 ಪ್ರಕರಣಗಳೆಂದು ಒಳರೋಗಿಯಾಗಿ ದಾಖಲಿಸಿರುವುದು ಏ.26ರಂದು ಜಿಲ್ಲಾ ಆರೋಗ್ಯಾ ಧಿಕಾರಿ ಭೇಟಿ ಸಂದರ್ಭದಲ್ಲಿ ಕಂಡು ಬಂದಿದೆ ಎಂದು ತಿಳಿಸಿದ್ದಾರೆ. ಮುಂದಿನ 24 ಗಂಟೆಯಲ್ಲಿ ಈ ಎಲ್ಲ ಆಸ್ಪತ್ರೆಯಲ್ಲಿ ಇಲ್ಲಿಯವರೆಗೆ ಕೋವಿಡ್-19 ಪ್ರಕರಣಗಳಿಗೆ ಚಿಕಿತ್ಸೆ ನೀಡಲಾದ ವಿವರವಾದ ಮಾಹಿತಿ, ರೋಗಿಗಳಿಗೆ ವಿಧಿಸಿರುವ ಬಿಲ್‌ನ ಸಂಪೂರ್ಣ ಮಾಹಿತಿ, ಕೋವಿಡ್-19 ಸೋಂಕು ದೃಢಪಟ್ಟ ಎಸ್.ಆರ್.ಎಫ್. ಐಡಿಯೊಂದಿಗೆ ಪ್ರಯೋಗಾಲಯದ ಫಲಿತಾಂಶದ ಪ್ರತಿ (ಪ್ರತಿ ಪ್ರಕರಣಕ್ಕೆ ಅನ್ವಯವಾಗುವಂತೆ) ಸಲ್ಲಿಸಬೇಕು. ಹಾಗೂ ಸ್ಪ್ರೆಡ್‌ಶೀಟ್‌ನಲ್ಲಿ ತೋರಿಸಿರುವ ಪ್ರಕಾರ ಕೋವಿಡ್-19 ಪ್ರಕರಣಗಳ ಸಂಪೂರ್ಣ ಮಾಹಿತಿ ಎಸ್.ಆರ್.ಎಫ್. ಐಡಿಯೊಂದಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅ ಧಿಕಾರಿಗೆ ಸಲ್ಲಿಸಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.