Advertisement

ಎರಡು ತಿಂಗಳೊಳಗೆ ಕಾಮಗಾರಿ ಪೂರ್ಣಕ್ಕೆ ಸೂಚನೆ

11:40 AM Aug 03, 2020 | Suhan S |

ಹುಬ್ಬಳ್ಳಿ: ಗೋಕುಲ ಕೈಗಾರಿಕಾ ವಸಾಹತು ಪ್ರದೇಶ ಹಾಗೂ ಹನುಮಂತ ನಗರದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ಪರಿಶೀಲಿಸಿದರು.

Advertisement

ಕೈಗಾರಿಕಾ ವಸಾಹತು ಪ್ರದೇಶದಲ್ಲಿ 41 ಕೋಟಿ ವೆಚ್ಚದಲ್ಲಿ ನಿರ್ಮಿಸುತ್ತಿರುವ ಒಳಚರಂಡಿ, ಸಿಸಿ ರಸ್ತೆ, ಪೈಪ್‌ ಲೈನ್‌ ಸೇರಿದಂತೆ ಇತರೆ ಮೂಲಸೌಕರ್ಯಗಳ ನಿರ್ಮಾಣ ಕಾಮಗಾರಿಗಳನ್ನು ವೀಕ್ಷಣೆ ಮಾಡಿದರು. ರಸ್ತೆ ಸೇರಿದಂತೆ ಇತರೆ ಮೂಲಸೌಕರ್ಯಗಳ ನಿರ್ಮಾಣಕ್ಕೆ ಮೊದಲ ಹಂತದಲ್ಲಿ 2.37 ಕಿಮೀಗೆ 20 ಕೋಟಿ ಹಾಗೂ 2ನೇ ಹಂತದಲ್ಲಿ 2.07 ಕಿಮೀಗೆ 21 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಮೊದಲ ಹಂತದ ಕಾಮಗಾರಿಯಲ್ಲಿ 900 ಮೀ, ಎರಡನೇ ಹಂತದ ಕಾಮಗಾರಿಯಲ್ಲಿ 950 ಮೀ. ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ಉಳಿದ ನಿರ್ಮಾಣ ಕಾರ್ಯವನ್ನು ಎರಡು ತಿಂಗಳ ಒಳಗಾಗಿ ಪೂರ್ಣಗೊಳಿಸಬೇಕು. ನೆಲಮಟ್ಟದಲ್ಲಿ ವಿದ್ಯುತ್‌ ಸಂಪರ್ಕ ಕಾರ್ಯ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಂತರ ಹನುಮಂತನ ನಗರದಲ್ಲಿ ನಿರ್ಮಿಸುತ್ತಿರುವ ರಾಜಕಾಲುವೆಗೆ ಸೇತುವೆ ಕಾಮಗಾರಿ ವೀಕ್ಷಣೆ ಮಾಡಿದರು. ಹುಡಾ ಅಧ್ಯಕ್ಷ ನಾಗೇಶ ಕಲುºರ್ಗಿ, ಪಾಲಿಕೆ ಮಾಜಿ ಸದಸ್ಯ ಮಹೇಶ ಬುರ್ಲಿ, ಮುಖಂಡರಾದ ಮಲ್ಲಿಕಾರ್ಜುನ ಸಾವಕಾರ, ಸಂತೋಷ ಚವ್ಹಾಣ, ಸ್ಮಾರ್ಟ್‌ ಸಿಟಿ ಕಾರ್ಯನಿರ್ವಾಹಕ ಅಭಿಯಂತ ಬಸವರಾಜ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next