Advertisement

ಸಂಚಾರ ನಿಯಮ ಕಡ್ಡಾಯ ಪಾಲನೆಗೆ ಸೂಚನೆ

10:05 AM Jun 10, 2020 | Suhan S |

ಹುಬ್ಬಳ್ಳಿ: ರಾಜ್ಯ ಸರಕಾರ ಲಾಕ್‌ಡೌನ್‌ ಸಡಿಲಿಕೆಗೊಳಿಸಿ ಮುಕ್ತ ಸಂಚಾರಕ್ಕೆ ಅವಕಾಶ ನೀಡಿದ್ದರಿಂದ ಹು-ಧಾ ಅವಳಿ ನಗರದ ಸಂಚಾರ ಸುವ್ಯವಸ್ಥೆಯ ಹಿತದೃಷ್ಟಿಯಿಂದ ಸಾರ್ವಜನಿಕರು/ ವಾಹನ ಸವಾರರು ಸಂಚಾರ ನಿಯಮಗಳಲ್ಲಿ ಕಡ್ಡಾಯವಾಗಿ ಪಾಲಿಸಬೇಕೆಂದು ಹು-ಧಾ ಪೊಲೀಸ್‌ ಆಯುಕ್ತರು ತಿಳಿಸಿದ್ದಾರೆ.

Advertisement

ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್‌ ಧರಿಸಿ ವಾಹನ ಚಾಲನೆ ಮಾಡಬೇಕು. ಲಘು ವಾಹನಗಳ ಸವಾರರು ಕಡ್ಡಾಯವಾಗಿ ಶೀಟ್‌ ಬೆಲ್ಟ್ ಹಾಕಿ ವಾಹನ ಚಾಲನೆ ಮಾಡಬೇಕು. ನೋ ಪಾರ್ಕಿಂಗ್‌ ಸ್ಥಳಗಳಲ್ಲಿ ವಾಹನ ನಿಲ್ಲಿಸಬಾರದು. ವಾಹನಗಳಿಗೆ ಸಂಬಂಧಪಟ್ಟ ಎಲ್ಲಾ ಮೂಲ ಅವಶ್ಯಕ ದಾಖಲಾತಿಗಳನ್ನು ವಾಹನ ಚಾಲನೆ ಸಂದರ್ಭದಲ್ಲಿ ಇಟ್ಟುಕೊಂಡಿರಬೇಕು. ಅಲ್ಲದೇ ಇನ್ನಿತರೆ ಸಂಚಾರ ನಿಯಮಗಳನ್ನು ಸಹ ವಾಹನ ಸವಾರರು ಕಡ್ಡಾಯವಾಗಿ ಪಾಲಿಸಬೇಕು. ಅವಳಿ ನಗರದ ಸಂಚಾರ ಸುವ್ಯವಸ್ಥೆಯ ಹಿತದೃಷ್ಟಿಯಿಂದ ಎಲ್ಲಾ ಸಂಚಾರ ನಿಯಮಗಳನ್ನು ಪಾಲಿಸಿವಾಹನ ಚಾಲನೆ ಮಾಡಬೇಕು. ಸಂಚಾರ ನಿಯಮ ಉಲ್ಲಂಘಿಸುವವರಿಗೆ ದಂಡ ವಿಧಿಸಲಾಗುವುದು. ಸಾರ್ವಜನಿಕರು/ ವಾಹನ ಸವಾರರು ಪೊಲೀಸ್‌ ಇಲಾಖೆಯೊಂದಿಗೆ ಸಹಕರಿಸಬೇಕೆಂದು ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next