Advertisement

ನೀರಿನ ಸಂಪರ್ಕ ಕಡಿತಗೊಳಿಸದಂತೆ ಸೂಚನೆ

03:38 PM Dec 07, 2017 | Team Udayavani |

ಬಂಟ್ವಾಳ: ಗ್ರಾ.ಪಂ. ಕುಡಿಯುವ ನೀರಿನ ಪಂಪ್‌ಸೆಟ್‌ಗಳ ವಿದ್ಯುತ್‌ ಬಿಲ್ಲನ್ನು 2015ರತನಕ ಸರಕಾರವೇ ಪಾವತಿಸಲಿದ್ದು ಈಗಾಗಲೇ ಗ್ರಾಮ ಪಂಚಾಯತ್‌ ಪಾವತಿಸಿದ ಹಣವನ್ನು 2016ರ ಅನಂತರದ ಬಿಲ್‌ಗೆ ಹೊಂದಾಣಿಕೆ ಮಾಡಲು ಕೆಡಿಪಿ ಸಾಮಾನ್ಯ ಸಭೆಯಲ್ಲಿ ಮೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು. 

Advertisement

ತಾ.ಪಂ. ಅಧ್ಯಕ್ಷ ಚಂದ್ರಹಾಸ ಕರ್ಕೇರ ಅವರ ಅಧ್ಯಕ್ಷತೆಯಲ್ಲಿ ಡಿ.6ರಂದು ನಡೆದ ಕೆಡಿಪಿ ಸಭೆಯಲ್ಲಿ ಗ್ರಾ.ಪಂ. ಕುಡಿಯುವ ನೀರಿನ ವಿದ್ಯುತ್‌ ಬಿಲ್‌ ಪಾವತಿ ವಿಳಂಬದ ಬಗ್ಗೆ ಪ್ರಸ್ತಾವಿಸಿದಾಗ ಕಾರ್ಯ ನಿರ್ವಹಣಾಧಿಕಾರಿಯವರು ಮೇಲಿನಂತೆ ವಿವರ ನೀಡಿದರು.

ಆರ್‌ಟಿಸಿ: ಪ್ರಗತಿ ಆಗಿಲ್ಲ
ಗ್ರಾಮ ಪಂಚಾಯತ್‌ನ ಕುಡಿಯುವ ನೀರಿನ ವಿದ್ಯುತ್‌ ಬಿಲ್‌ ಪಾವತಿ ನೀಡದಿದ್ದರೂ ಸಂಪರ್ಕ ಕಡಿತಗೊಳಿಸದಂತೆ
ಸರಕಾರದ ಸೂಚನೆಯನ್ನು ಇದೇ ಸಂದರ್ಭ ಪ್ರಸ್ತಾವಿಸಿದರು.

ತಾ.ಪಂ. ಆರ್‌.ಟಿ.ಸಿ. ಈ ಹಿಂದೆ ಅಧ್ಯಕ್ಷರ ಹೆಸರಿನಲ್ಲಿತ್ತು. ಅದನ್ನು ಕಾರ್ಯ ನಿರ್ವಹಣಾಧಿಕಾರಿ ಹೆಸರಲ್ಲಿ ಮಾಡಬೇಕು
ಎಂಬ ಅರ್ಜಿ ಕೊಟ್ಟು ಐದಾರು ತಿಂಗಳು ಕಳೆದರೂ ಯಾವುದೇ ಪ್ರಗತಿ ಆಗಿಲ್ಲ ಎಂದು ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಸಿಪ್ರಿಯನ್‌ ಮಿರಾಂದಾ ಸ್ವತಃ ಸಭೆಯಲ್ಲಿ ಪ್ರಸ್ತಾವಿಸುವ ಮೂಲಕ ಕಂದಾಯ ಇಲಾಖೆಯ ಕಾರ್ಯವೈಖರಿಯ ಬಗ್ಗೆ ಬೊಟ್ಟು ಮಾಡಿದರು. ಈ ಬಗ್ಗೆ ಕಂದಾಯ ನಿರೀಕ್ಷಕರು ಪರಿಶೀಲನೆ ನಡೆಸಿ ಮುಂದಿನ ಸಭೆಯಲ್ಲಿ ವಿವರವಾದ ಮಾಹಿತಿ ನೀಡುವುದಾಗಿ ತಿಳಿಸಿದರು.

ಕೊಡ್ಮಣ್‌, ಫರಂಗಿಪೇಟೆ, ಮೇರೆಮಜಲುಗಳಲ್ಲಿ ಪಡಿತರ ವಿತರಣೆಗೆ ಸಂಬಂಧಿಸಿ ಇಂಟರ್‌ನೆಟ್‌ ಸಂಪರ್ಕ ಸಮಸ್ಯೆ ಕುರಿತು ಆಹಾರ ಇಲಾಖೆ ಅಧಿಕಾರಿಗಳು ಸಭೆಯ ಗಮನಕ್ಕೆ ತಂದರು. ಇದರ ಪರಿಹಾರಕ್ಕೆ ಕ್ರಮ ಕೈಗೊಳ್ಳುವಂತೆ
ಮನವಿ ಮಾಡಿದರು.

Advertisement

ತಾ.ಪಂ. ಉಪಾಧ್ಯಕ್ಷ ಬಿ.ಎಂ. ಅಬ್ಟಾಸ್‌ ಅಲಿ, ಸ್ಥಾಯೀ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಸಿ. ಬಂಗೇರ ಸಹಿತ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು. ಕಾರ್ಯನಿರ್ವಹಣಾಧಿಕಾರಿ ಸ್ವಾಗತಿಸಿ, ವಂದಿಸಿದರು.

ಗುತ್ತಿಗೆ ನೀತಿ ಕಡ್ಡಾಯ ಪಾಲಿಸಲು ಸೂಚನೆ
ಯಾವುದೇ ಇಲಾಖೆಯ ಕಾಮಗಾರಿಯಲ್ಲಿ ಶೇ.25 ಪರಿಶಿಷ್ಟ ಜಾತಿ, ಪಂಗಡದ ಗುತ್ತಿಗೆದಾರರಿಗೆ ಮೀಸಲು ನೀತಿಯನ್ನು ಕಡ್ಡಾಯವಾಗಿ ಪಾಲಿಸುವಂತೆ ಸಭೆಯಲ್ಲಿ ಸೂಚಿಸಲಾಯಿತು. 94ಸಿಸಿ ಬಾಕಿ ಇರುವ ಅರ್ಜಿಗಳನ್ನು ಶೀಘ್ರ ಕಾನೂನು ಪ್ರಕಾರ ಪರಿಶೀಲಿಸಿ ವಿಲೇವಾರಿ ಮಾಡಲು ಸಭೆಯಲ್ಲಿ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಸಿಪ್ರಿಯನ್‌
ಮಿರಾಂದಾ ತಿಳಿಸಿದರು. 

Advertisement

Udayavani is now on Telegram. Click here to join our channel and stay updated with the latest news.

Next