Advertisement

ಲಕ್ಷಣವಿರುವವರ ಸ್ಥಳಾಂತರಕ್ಕೆ ಸೂಚನೆ

06:55 AM Jul 25, 2020 | Suhan S |

ಬೆಂಗಳೂರು: ಕೋವಿಡ್ ಲಕ್ಷಣವಿರುವವರನ್ನು ಬಿಐಇಸಿ ಆರೈಕೆ ಕೇಂದ್ರಕ್ಕೆ ವರ್ಗಾಯಿಸುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಸೂಚಿಸಿದ್ದಾರೆ.

Advertisement

ಶುಕ್ರವಾರ ದಕ್ಷಿಣ ವಲಯದ ಅಧಿಕಾರಿಗಳು ಹಾಗೂ ದಕ್ಷಿಣ ವಲಯ ಉಸ್ತುವಾರಿ ವಹಿಸಿಕೊಂಡಿರುವ ಕಂದಾಯ ಸಚಿವ ಆರ್‌. ಅಶೋಕ್‌ ಅವರೊಂದಿಗೆ ಸಭೆ ನಡೆಸಿ ಸೂಚನೆ ನೀಡಿದ್ದಾರೆ. ಬಿಐಇಸಿಯಲ್ಲಿ ಹೊಸದಾಗಿ ಸ್ಥಾಪನೆಯಾಗಿರುವ ಕೋವಿಡ್‌ ಕೇರ್‌ ಕೇಂದ್ರಕ್ಕೆ ಲಕ್ಷಣವಿರುವವರನ್ನು ಸ್ಥಳಾಂತರ ಮಾಡುವುದರಿಂದ ನಗರದಲ್ಲಿರುವ ಆಸ್ಪತ್ರೆಗಳ ಮೇಲೆ ಒತ್ತಡ ಕಡಿಮೆಯಾಗುತ್ತದೆ. ಅಲ್ಲದೆ, ನಾನ್‌ ಕೋವಿಡ್‌ ಬೆಡ್‌ಗಳನ್ನು ಕೆಲವು ಆಸ್ಪತ್ರೆಗಳಲ್ಲಿ ಮೀಸಲಿಡಲು ಸೂಚನೆ ನೀಡಿದ್ದಾರೆ.

ಸಭೆಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಸಚಿವ ಆರ್‌. ಅಶೋಕ್‌, ದಕ್ಷಿಣ ವಲಯದಲ್ಲಿ ಸೋಂಕಿನಿಂದ ಅತಿ ಹೆಚ್ಚು ಸಾವು ಸಂಭವಿಸುತ್ತಿರುವ ಬಗ್ಗೆ ಮುಖ್ಯಮಂತ್ರಿ ಗಮನಕ್ಕೆ ತರಲಾಗಿದೆ. ಕಲಾಸಿ  ಪಾಳ್ಯ ಹಾಗೂ ಕೆ.ಆರ್‌.ಮಾರುಕಟ್ಟೆಯಲ್ಲಿ ಹೆಚ್ಚು ಸಾವು ಸಂಭವಿಸಿವೆ. ಹೀಗಾಗಿ ಎರಡೂ ಮಾರುಕಟ್ಟೆ ಪ್ರದೇಶಗಳನ್ನು ತೆರೆಯಲು ಅವಕಾಶ ನೀಡದಿರಲು ಮನವಿ ಮಾಡಲಾಗಿದೆ ಎಂದು ತಿಳಿಸಿದರು.

ಬೆಂಗಳೂರು ದಕ್ಷಿಣ ವಲಯದಲ್ಲಿ ಹೆಚ್ಚಿನ ತಪಾಸಣೆ ನಡೆಸುವುದು ಹಾಗೂ ಹೆಚ್ಚಿನ ಹಾಸಿಗಳ ವ್ಯವಸ್ಥೆ ಕಲ್ಪಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ. ಅಲ್ಲದೇ ಪಾಸಿಟಿವ್‌ ಪ್ರಕರಣಗಳು ಇರುವ ಪ್ರದೇಶದಲ್ಲಿ ಊಟ, ದಿನಸಿ ಸಾಮಾನುಗಳು ದೊರೆ ಯುವಂತೆ ಸೂಕ್ತ ವ್ಯವಸ್ಥೆ ಮಾಡುವಂತೆ ಸೂಚಿಸಿದ್ದಾರೆ. ಕಂಟೈನ್ಮೆಂಟ್‌ ವಲಯದಲ್ಲಿ ಹೋಂ ಕ್ವಾರಂಟೈನ್‌ನಲ್ಲಿರುವ ಪ್ರತಿ ಮನೆಗೂ ಕೋವಿಡ್ ಕಿಟ್‌ ವಿತರಿಸಲು ಬಿಬಿಎಂಪಿಗೆ ಸೂಚಿಸಲಾಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next