Advertisement

ಫೆ. 20ರವರೆಗೆ ಶಾಲಾ-ಕಾಲೇಜು ದಾಖಲಾತಿ ದಿನಾಂಕ ವಿಸ್ತರಣೆಗೆ ಸೂಚನೆ: ಸುರೇಶ್ ಕುಮಾರ್ 

05:16 PM Feb 06, 2021 | Team Udayavani |

ಬೆಂಗಳೂರು: ಕೋವಿಡ್ ಹಿನ್ನೆಲೆಯಲ್ಲಿ ಪ್ರಸ್ತುತ ಶೈಕ್ಷಣಿಕ ವರ್ಷದ ಶಾಲಾ ಕಾಲೇಜುಗಳು ತಡವಾಗಿ ಆರಂಭವಾಗಿದ್ದು, ಹಲವಾರು ವಿದ್ಯಾರ್ಥಿಗಳು ಇನ್ನೂ ಕೂಡಾ ದಾಖಲಾತಿ ಮಾಡಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯ ಹಿನ್ನೆಲೆಯಲ್ಲಿ  ತರಗತಿಗಳ   ದಾಖಲಾತಿ ಕೊನೆಯ ದಿನಾಂಕವನ್ನು  ಫೆಬ್ರವರಿ 20ರವರೆಗೆ ವಿಸ್ತರಿಸುವುದಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

Advertisement

ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಶಾಲಾ-ಕಾಲೇಜುಗಳು  ಫೆ. 1ರಿಂದ ಪೂರ್ಣ ಪ್ರಮಾಣದಲ್ಲಿ ಪ್ರಾರಂಭಗೊಂಡಿವೆ. 9ರಿಂದ 12ನೇ ತರಗತಿವರೆಗೆ ಭೌತಿಕ ತರಗತಿಗಳು ಆರಂಭವಾಗಿದ್ದರೆ, ಉಳಿದ ತರಗತಿಗಳು ಪರ್ಯಾಯ ಬೋಧನೆಯಲ್ಲಿ ನಡೆಯುತ್ತಿವೆ ಎಂದರು.

ರಾಜ್ಯದ ವಿವಿಧ ಭಾಗಗಳ ವಿದ್ಯಾರ್ಥಿಗಳು ತಾವು ಬಯಸಿದ ಕಾಲೇಜುಗಳಲ್ಲಿ ದಾಖಲಾತಿ ಪಡೆಯುವ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಈ ವರ್ಷದ ದಾಖಲಾತಿಗೆ ಫೆಬ್ರವರಿ 6 ಕಡೆಯ ದಿನವಾಗಿತ್ತು. ಆದರೆ ಹಲವಾರು ವಿದ್ಯಾರ್ಥಿಗಳು ಇನ್ನೂ ತರಗತಿಗಳಿಗೆ ದಾಖಲಾಗಲು ಸಾಧ್ಯವಾಗಿಲ್ಲ.

ಇದನ್ನೂ ಓದಿ:ಹಾಲಿನ ಪ್ಯಾಕೆಟ್ ಗಳು ಈತನ ಟಾರ್ಗೆಟ್: ಸಿಸಿಟಿವಿಯಲ್ಲಿ ಸೆರೆಯಾಯ್ತು ಕಳ್ಳನ ಕರಾಮತ್ತು

ಈ ವರ್ಷ ತರಗತಿಗಳು ತಡವಾಗಿ ಪ್ರಾರಂಭವಾಗಿರುವುದರಿಂದ ದಾಖಲಾತಿಗೆ ಸಮಯ ನೀಡಬೇಕೆಂದು ಕೋರಿ ರಾಜ್ಯದ ವಿವಿಧ ಭಾಗಗಳಿಂದ ವಿದ್ಯಾರ್ಥಿಗಳು, ಪೋಷಕರು ಮತ್ತು ಜನಪ್ರತಿನಿಧಿಗಳಿಂದ  ಪ್ರಸ್ತಾವನೆಗಳು ಸ್ವೀಕೃತವಾಗಿದ್ದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಾಖಲಾತಿಯನ್ನು ಫೆ. 20ರವರೆಗೆ ವಿಸ್ತರಿಸಬೇಕೆಂದು ಸಚಿವರು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರಿಗೆ ಟಿಪ್ಪಣಿಯಲ್ಲಿ ಸೂಚನೆ ನೀಡಿದ್ದಾರೆ.

Advertisement

ಎಲ್ಲ ತರಗತಿಗಳ ಸೇರ್ಪಡೆಗೆ ದಾಖಲಾತಿಯನ್ನು ಕಡ್ಡಾಯಗೊಳಿಸಲಾಗಿರುವುದರಿಂದ  ವಿದ್ಯಾರ್ಥಿಗಳ ದಾಖಲಾತಿಗೆ ಅನುಕೂಲ ಕಲ್ಪಿಸಲು   ಪ್ರಸ್ತುತ ವರ್ಷದ  ಶಾಲಾಕಾಲೇಜುಗಳ  ದಾಖಲಾತಿ  ಪ್ರವೇಶ ಅವಧಿಯನ್ನು  ವಿಸ್ತರಿಸಬೇಕೆಂದು ಸುರೇಶ್ ಕುಮಾರ್ ಸೂಚನೆ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next