Advertisement

ನಿಗದಿತ ಅವಧಿಯಲ್ಲಿ ಕಡತ ವಿಲೇವಾರಿಗೆ ಸೂಚನೆ

09:29 AM Apr 26, 2022 | Team Udayavani |

ಹುಬ್ಬಳ್ಳಿ: ಜನಸಾಮಾನ್ಯರಿಗೆ ಮೂಲಸೌಕರ್ಯ ಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಸರಕಾರಿ ಅಧಿಕಾರಿಗಳು, ನೌಕರರು ನಿಷ್ಪಕ್ಷಪಾತವಾಗಿ ಹಾಗೂ ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಬೇಕು. ಯಾವುದೇ ಒತ್ತಡಕ್ಕೆ ಮಣಿಯದೆ ಸೇವೆ ಮಾಡಬೇಕು.

Advertisement

ಕರ್ತವ್ಯನಿಷ್ಠೆ ಪಾಲಿಸಬೇಕು ಎಂದು ಉಪ ಲೋಕಾಯುಕ್ತ ಬಿ.ಎಸ್‌. ಪಾಟೀಲ ಹೇಳಿದರು. ಸರ್ಕ್ನೂಟ್‌ ಹೌಸ್‌ನಲ್ಲಿ ಸೋಮವಾರ ವಿವಿಧ ಇಲಾಖೆಗಳಲ್ಲಿ ಬಾಕಿ ಇರುವ ಲೋಕಾಯುಕ್ತ ಪ್ರಕರಣಗಳು, ಸಾರ್ವಜನಿಕರ ದೂರುಗಳ ಮೇಲೆ ಕೈಗೊಂಡ ಕ್ರಮಗಳ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲಾದ್ಯಂತ ಪ್ರತಿ ತಾಲೂಕು ಹಾಗೂ ಗ್ರಾಪಂ ವ್ಯಾಪ್ತಿಯಲ್ಲಿ ಮೂಲಸೌಕರ್ಯಗಳನ್ನು ಪ್ರತಿ ಹಂತದಲ್ಲೂ ನ್ಯಾಯಬದ್ಧವಾಗಿ ಒದಗಿಸಬೇಕು. ಪಂಚಾಯತ್‌ರಾಜ್‌ ಅಧಿನಿಯಮದಡಿ ಸಿಗಬಹುದಾದ ಸೌಲಭ್ಯಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡಬೇಕು. ಸಕಾಲ ಯೋಜನೆಯಡಿ ನಿಗದಿತ ಕಾಲದಲ್ಲಿ ಕಡತಗಳ ವಿಲೇವಾರಿ ಮಾಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ನಿತೇಶ ಪಾಟೀಲ ಮಾತನಾಡಿ, ಸರಕಾರದ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸಲಾಗುತ್ತಿದೆ. ಜಿಲ್ಲಾಡಳಿತ ಹಾಗೂ ಜಿಲ್ಲೆಯ ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳು ಪ್ರಗತಿಪಥದಲ್ಲಿ ಕಾರ್ಯ ನಿರ್ವಹಿಸುತ್ತಿವೆ. ಸರಕಾರಿ ಶಾಲೆಗಳಿಗೆ ಮೂಲಸೌಕರ್ಯಗಳನ್ನು ಒದಗಿಸಲಾಗುತ್ತಿದೆ. ಕೋವಿಡ್‌ ಸಂದರ್ಭದಲ್ಲಿ ಮೃತರಾದ ಕುಟುಂಬಕ್ಕೆ ಪರಿಹಾರ ವಿತರಿಸಲಾಗಿದೆ. ತಂದೆ-ತಾಯಿ ಕಳೆದುಕೊಂಡ ಮಕ್ಕಳ ಕುಟುಂಬಗಳಿಗೆ ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಪೋಷಕತ್ವ ನಿರ್ವಹಣೆಗೆ ನೆರವು ನೀಡಲಾಗುತ್ತಿದೆ ಎಂದರು.

ಹು-ಧಾ ಮಹಾನಗರ ಪಾಲಿಕೆ ಆಯುಕ್ತ ಡಾ| ಗೋಪಾಲಕೃಷ್ಣ ಮಾತನಾಡಿ, ನಗರ ಪ್ರದೇಶಗಳಲ್ಲಿ ಸ್ವತ್ಛತೆ ಸಲಕರಣೆಗಳನ್ನು ಪೌರಕಾರ್ಮಿಕರಿಗೆ ಒದಗಿಸಲಾಗಿದೆ. ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು. ಹು-ಧಾ ಪೋಲಿಸ್‌ ಆಯುಕ್ತ ಲಾಭೂ ರಾಮ ಮಾತನಾಡಿ, ಅವಳಿನಗರದಲ್ಲಿ ಕಾನೂನು ಉಲ್ಲಂಘನೆಯಾಗದಂತೆ ಸೂಕ್ತ ಕ್ರಮ ವಹಿಸಲಾಗಿದೆ. ಕಾನೂನು-ಸುವ್ಯವಸ್ಥೆ ಉಲ್ಲಂಘಿಸಿದವರ ಮೇಲೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.

ಎಸ್ಪಿ ಪಿ. ಕೃಷ್ಣಕಾಂತ, ಜಿಪಂ ಸಿಇಒ ಡಾ. ಸುರೇಶ ಇಟ್ನಾಳ, ಡಿಸಿಪಿ ಸಾಹಿಲ್‌ ಬಾಗ್ಲಾ, ಲೋಕಾಯುಕ್ತ ಎಸ್‌ಪಿ ವಿಜಯಕುಮಾರ ಬಿಸನಳ್ಳಿ, ಡಿಎಸ್‌ಪಿ ಹುಸೇನಖಾನ ಪಠಾಣ, ಲೋಕೋಪಯೋಗಿ ಕಾರ್ಯನಿರ್ವಾಹಕ ಅಭಿಯಂತ ಎಸ್‌.ಬಿ. ಚೌಡಣ್ಣವರ, ತಹಶೀಲ್ದಾರರಾದ ಶಶಿಧರ ಮಾಡ್ಯಾಳ, ಪ್ರಕಾಶ ನಾಶಿ, ತಾಪಂ ಇಒ ಗಂಗಾಧರ ಕಂದಕೂರ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next