Advertisement

ಹೊರ ರಾಜ್ಯದಿಂದ ಬಂದವರ ಮೇಲೆ ತೀವ್ರ ನಿಗಾಕ್ಕೆ ಸೂಚನೆ

05:43 AM May 30, 2020 | Team Udayavani |

ಹುಬ್ಬಳ್ಳಿ: ಕೋವಿಡ್ ನಿಯಂತ್ರಣದಲ್ಲಿ ಪೊಲೀಸರ ಪಾತ್ರ ಮುಖ್ಯವಾಗಿದ್ದು, ಹೊರ ರಾಜ್ಯಗಳಿಂದ ಆಗಮಿಸುವವರ ಮೇಲೆ ತೀವ್ರ ನಿಗಾ ವಹಿಸುವಂತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಪೊಲೀಸರಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.

Advertisement

ಮಹಾನಗರ ಪೊಲೀಸ್‌ ಆಯುಕ್ತರ ಕಚೇರಿಯಲ್ಲಿ ಶುಕ್ರವಾರ ನಡೆದ ಪೊಲೀಸ್‌ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಸಾಕಷ್ಟು ಶ್ರಮ ವಹಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಪೊಲೀಸರ ಪಾತ್ರವೂ ಬಹುಮುಖ್ಯವಾಗಿದೆ. ಹೊರ ರಾಜ್ಯದಿಂದ ನುಸುಳುತ್ತಿರುವ ಬಗ್ಗೆ ಮಾಹಿತಿಯಿದ್ದು, ಇಂತಹವರ ಮೇಲೆ ನಿಗಾ ವಹಿಸಬೇಕು. ಬೇರೆ ರಾಜ್ಯದಿಂದ ಬಂದವರನ್ನು ಕೋವಿಡ್‌-19 ಪರೀಕ್ಷೆಗೆ ಒಳಪಡಿಸಲು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.

ಸಮಾಜದ ಸ್ವಾಸ್ಥ್ಯ ಕಾಡಾಡುವುದ ಜೊತೆಗೆ ಪೊಲೀಸರು ತಮ್ಮ ಆರೋಗ್ಯದ ಬಗ್ಗೆಯೂ ಹೆಚ್ಚು ಗಮನ ಹರಿಸಬೇಕು. ಕೋವಿಡ್‌-19 ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ಸುರಕ್ಷತಾ ಪರಿಕರಗಳನ್ನು ಬಳಸಬೇಕು ಎಂದು ಸಲಹೆ ನೀಡಿದ ಅವರು, ಕ್ವಾರಂಟೈನ್‌ ಕೇಂದ್ರಗಳನ್ನು ಬಿಗಿಗೊಳಿಸುವಂತೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

ಪೊಲೀಸ್‌ ಆಯುಕ್ತ ಆರ್‌.ದಿಲೀಪ, ಎಸ್ಪಿ ವರ್ತಿಕಾ ಕಟಿಯಾರ್‌, ಡಿಸಿಪಿ ಕೃಷ್ಣಕಾಂತ ಸೇರಿದಂತೆ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next