Advertisement

ಮಳೆ ಅನಾಹುತ ತಡೆಯಲು ಸೂಕ್ತ ಸಿದ್ಧತೆಗೆ ಸೂಚನೆ

09:14 PM Jun 03, 2021 | Team Udayavani |

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಬೃಹತ್ ಬೆಂಗಳೂರು ವ್ಯಾಪ್ತಿಯಲ್ಲಿ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತಂತೆ ಚರ್ಚೆ ನಡೆಸಿದರು.

Advertisement

ಆ ನಂತರದಲ್ಲಿ ಮಾಧ್ಯಮಗಳಿಗೆ ಈ ಕುರಿತಂತೆ ಮಾಹಿತಿ ನೀಡಿದ ಕಂದಾಯ ಸಚಿವ ಆರ್ ಅಶೋಕ,”ಈಗಾಗಲೇ ಮುನ್ನೆಚ್ಚರಿಕಾ ಕ್ರಮವಾಗಿ ಸಾಕಷ್ಟು ಮುನ್ನೆಚ್ಚರಿಕೆಗಳನ್ನ ತೆಗೆದುಕೊಳ್ಳಲಾಗಿದೆ. ಈ ತಿಂಗಳ ಒಳಗಾಗಿ ಎಲ್ಲಾ ಸಿದ್ಧತೆಗಳು ಪೂರ್ಣಗೊಳ್ಳಲಿವೆ. ನಗರದಲ್ಲಿ ಸುಮಾರು 300 ಪ್ರದೇಶಗಳು ಭಾರೀ ಮಳೆಗೆ ತುಂಬಿಕೊಳ್ಳುತ್ತವೆ. ಅದರಲ್ಲಿ 60 ಸ್ಥಳಗಳಲ್ಲಿ ಅತೀ ಹೆಚ್ಚು ನೀರು ತುಂಬಿಕೊಳ್ಳುತ್ತದೆ. ಈ ನಿಟ್ಟಿನಲ್ಲಿ ನೀರು ಸರಾಗವಾಗಿ ಹರಿದು ಹೋಗಲು ಚರಂಡಿ ಗುಂಡಿಗಳ ಹೂಳು ತೆಗೆಯಲಾಗುವುದು. ರೈಲ್ವೆ ಸೇತುವೆ ಕೆಳಗಡೆಯೂ ನೀರು ತುಂಬಿ ಕೊಳ್ಳುವ ಹಿನ್ನೆಲೆಯಲ್ಲಿ ಅಲ್ಲಿಯೂ ಸ್ವಚ್ಛತೆ ಮಾಡಲು ಕ್ರಮ ತೆಗೆದುಕೊಳ್ಳಲಾಗುವುದು. ಹಾಗೆಯೇ ಮಳೆ ಬಂದು ಅನಾಹುತಗಳು ಸಂಭವಿಸಿದ ಸಮಯದಲ್ಲಿ ನೆರವಿಗಾಗಿ 24/7 ಕಂಟ್ರೋಲ್ ರೂಮ್ ತೆರೆಯಲಾಗುತ್ತದೆ. ಪ್ರತಿ ವಿಧಾನಸಭಾ ಕ್ಷೇತ್ರಗಳಲ್ಲೂ ಟಾಸ್ಕಫೋರ್ಸ ರಚನೆ ಮಾಡಲಾಗುವುದು. ಆ ತಂಡಕ್ಕೆ ಬೇಕಾದ ಸಿಬ್ಬಂದಿ, ವಾಹನ ಮತ್ತು ಸಲಕರಣೆಗಳ ಸಿದ್ಧತೆ ಮಾಡಲು ಸೂಚನೆ ನೀಡಲಾಗಿದೆ. ಹಾಗೆಯೇ ಅದಕ್ಕೆ ಬೇಕಾದ ಹಣಕಾಸು ನೆರವನ್ನು ಬಿಡುಗಡೆ ಮಾಡಲಾಗಿದೆ”, ಎಂದು ತಿಳಿಸಿದರು.

ಇದನ್ನೂ ಓದಿ: ಶಿಲ್ಪನಾಗ್ ರಾಜೀನಾಮೆಯ ಹಿಂದಿನ ಕಾರಣವನ್ನು ತಿಳಿಯುವ ಪ್ರಯತ್ನ ಮಾಡುತ್ತೇನೆ:ಎಸ್.ಟಿ.ಸೋಮಶೇಖರ್

“ನಿಂತ ನೀರನ್ನ ಹೊರ ಚೆಲ್ಲಲು ಹೈ ಪ್ರೆಷರ್ ಪಂಪ್ ಗಳನ್ ಬಳಸಲು ಸೂಚಿಸಲಾಗಿದೆ. ಮಳೆ ನೀರು ಚರಂಡಿಗಳಲ್ಲಿನ ಹೂಳು ತೆಗೆದು ಸರಾಗವಾಗಿ ನೀರು ಹರಿದು ಹೋಗುವಂತೆ ಮಾಡಲು ತಿಳಿಸಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಎಲ್ಲಾ ಅಗತ್ಯ ಕ್ರಮಗಳನ್ನ ತೆಗೆದುಕೊಂಡು ಕಾಮಗಾರಿಯನ್ನ ಈ ತಿಂಗಳೊಳಗೆ ಪೂರ್ಣಗೊಳಿಸಿ, ಯಾವುದೇ ಅನಾಹುತವಾಗದಂತೆ ಎಚ್ಚರಿಕೆ ವಹಿಸಬೇಕು. ಹಾಗೆಯೇ ರಕ್ಷಣಾ ತಂಡವು ಪ್ರತಿ ವಿಧಾನಸಭಾ ಕ್ಷೇತ್ರದಲ್ಲೂ ಸದಾ ಸನ್ನದ್ಧವಾಗಿರುವಂತೆ ನೋಡಿಕೊಳ್ಳಲು ಸೂಚನೆ ನೀಡಲಾಗಿದೆ,” ಎಂದು ಆರ್ ಅಶೋಕ ಮಾಹಿತಿ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next