Advertisement

ಸಗಟು ಮಾರುಕಟ್ಟೆಗೆ ಸೂಚನೆ

05:50 AM Jun 28, 2020 | Team Udayavani |

ಬೆಂಗಳೂರು: ಬೆಂಗಳೂರಿನಲ್ಲಿರುವ ಬೃಹತ್‌ ಸಗಟು ತರಕಾರಿ ಮಾರುಕಟ್ಟೆಗಳಲ್ಲಿ ಜನದಟ್ಟಣೆ ತಪ್ಪಿಸಲು ಹೆಚ್ಚಿನ ಸಗಟು ತರಕಾರಿ ಮಾರುಕಟ್ಟೆ ತೆರೆಯಲು ಬಿಬಿಎಂಪಿ ಆಯುಕ್ತರಿಗೆ ಮುಖ್ಯಮಂತ್ರಿಯವರು ಸಭೆಯಲ್ಲಿ ಸೂಚನೆ ನೀಡಿದರು. ಶನಿವಾರ ನಡೆದ ತುರ್ತು ಸಭೆಯಲ್ಲಿ ಈ ಕುರಿತು ಅಧಿಕಾರಿಗಳಿಗೆ ನಿರ್ದೇಶನ ನೀಡಿರುವ ಅವರು,

Advertisement

ಕೋವಿಡ್‌ ಸೋಂಕಿತ ರೋಗಿಗಳನ್ನು ಶೀಘ್ರವಾಗಿ ಕೋವಿಡ್‌ ಆಸ್ಪತ್ರೆಗಳಿಗೆ ಸೇರಿಸಲು (ಸೆಂಟ್ರಲೈಜ್‌ ಬೆಡ್‌ ಅಲೋಕೇಷನ್‌ ಸಿಸ್ಟಮ್‌) ತಂತ್ರಾಂಶದ ಮೂಲಕ ಜಾರಿಗೊಳಿಸಲಾಗುವುದು ಎಂದರು. ಬೆಂಗಳೂರಿನಲ್ಲಿ ಸೋಂಕಿತ ವ್ಯಕ್ತಿಗಳನ್ನು ಸಾಗಿಸಲು ಆ್ಯಂಬುಲೆನ್ಸ್‌ ಸಂಖ್ಯೆ 250 ಕ್ಕೆ ಹೆಚ್ಚಿಸಲು ಹಾಗೂ ಕೋವಿಡ್‌ 19ನಿಂದ ಮೃತಪಟ್ಟವರ ಪಾರ್ಥಿವ ಶರೀರ ಸಾಗಿಸಲು ಪ್ರತ್ಯೇಕ ಆ್ಯಂಬುಲೆನ್ಸ್‌ ವ್ಯವಸ್ಥೆ ಮಾಡಲು ನಿರ್ದೇಶನ ನೀಡಲಾಗಿದೆ.

ಆ್ಯಂಬುಲೆನ್ಸ್‌ ಸ್ಥಳ, ಚಲನವಲನ ಗುರುತಿಸಲು ಪೊಲೀಸ್‌ ಕಂಟ್ರೋಲ್‌ ರೂಂ ವೈರ್‌ಲೆಸ್‌ ಸೇವೆ ಬಳಸಿಕೊಳ್ಳಲು ಸಭೆಯಲ್ಲಿ ಸೂಚಿಸಲಾಯಿತು. ಕೋವಿಡ್‌ 19  ನಿಯಂತ್ರಣದಲ್ಲಿ ಕೆಲಸ ಮಾಡುವ ಎಲ್ಲ ನೋಡಲ್‌ ಅಧಿಕಾರಿಗಳ ವಿವರಗಳನ್ನು ಪತ್ರಿಕಗಳ ಜಾಹೀರಾತು ಮೂಲಕ ಸಾರ್ವಜನಿಕರಿಗೆ  ಪ್ರಚುರಪಡಿಸಬೇಕು. ಬಿಬಿಎಂಪಿ ಕೇಂದ್ರ ಕಚೇರಿ ಹಾಗೂ ಆಯುಕ್ತರ ಮೇಲಿನ ಕೆಲಸದ ಹೊರೆ  ತಗ್ಗಿಸಲು ಬಿಬಿಎಂಪಿಯಲ್ಲಿನ 8 ವಲಯಗಳ ಜಂಟಿ ಆಯುಕ್ತರಿಗೆ ಹೆಚ್ಚಿನ ಜವಾಬ್ದಾರಿ ನೀಡಲು ತೀರ್ಮಾನಿಸಲಾಯಿತು

Advertisement

Udayavani is now on Telegram. Click here to join our channel and stay updated with the latest news.

Next