ವಿಮಾನ ನಿಲ್ದಾಣದಲ್ಲಿ ಆ. 26ರಂದು ಟ್ರೈಯಲ್ ಲ್ಯಾಂಡಿಂಗ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿರುವುದರಿಂದ ವಿಮಾನ ನಿಲ್ದಾಣಕ್ಕೆ ಸೂಕ್ತ ಬಂದೋಬಸ್ತ್ ಕಲ್ಪಿಸುವಂತೆ ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ತಿಳಿಸಿದರು.
Advertisement
ಕಲಬುರಗಿ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲಿಸಿ, ವಿಮಾನ ನಿಲ್ದಾಣದ ರನ್‌ವೇ ಮೇಲೆ ವಿಮಾನ ಇಳಿಯುವಾಗ ಅಥವಾ ಹಾರುವಾಗ ಯಾವುದೇ ತರಹದ ಅಡಚಣೆಯಾಗದಂತೆ ನೋಡಿಕೊಳ್ಳಲು ಪೊಲೀಸರನ್ನು ನಿಯೋಜಿಸಬೇಕು ಎಂದರು.
ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ತಯಾರಿ ನಡೆಸಬೇಕು ಎಂದು ವಿವರಿಸಿದರು. ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಸೇರಿದಂತೆ ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ವಿಮಾನ ನಿಲ್ದಾಣಕ್ಕೆ ಆಗಮಿಸುವ ಗಣ್ಯರ ವಾಹನಗಳು ನಿಲ್ಲಲು ಅನುಕೂಲವಾಗುವ ಹಾಗೆ ವಾಹನ ನಿಲುಗಡೆಗೆ ಸ್ಥಳಾವಕಾಶ ಕಲ್ಪಿಸಬೇಕು. ಇದಕ್ಕಾಗಿ ತಾತ್ಕಾಲಿಕ ಶೌಚಾಲಯಗಳ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಆ. 26ರಂದು ಬೆಳಗ್ಗೆ 10:30 ಕ್ಕೆ ವಿಮಾನದ ಟ್ರೆ„ಯಲ್ ರನ್ ಕಾರ್ಯಕ್ರಮ ನಡೆಯಲಿದೆ. ನಗರದ ಎಲ್ಲ ಸಾರ್ವಜನಿಕರಿಗೂ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅವಕಾಶವಿದೆ. ಸಾರ್ವಜನಿಕರು ಬೆಳಗಿನ 10:30 ರೊಳಗಾಗಿ ಶ್ರೀನಿವಾಸ ಸರಡಗಿ ರಸ್ತೆ ಮೂಲಕ ವಿಮಾನ ನಿಲ್ದಾಣದ ಮುಖ್ಯ ಪ್ರವೇಶ ದ್ವಾರವನ್ನು ಪ್ರವೇಶಿಸಬೇಕು.
Related Articles
ಅಮಿತ್‌ಸಿಂಗ್, ಮೊಹ್ಮದ ಫೈಸಲ್, ಕ್ಯಾಪ್ಟನ್ ಶಾಮ್, ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಇಂಜಿನಿಯರ್ ಮುಖಾ¤ರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ| ಎಂ.ಕೆ. ಪಾಟೀಲ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಈ ಸಂದರ್ಭದಲ್ಲಿದ್ದರು.
Advertisement
ನಾಳೆ ವಿಮಾನ ಹಾರಿಸುತ್ತೇವೆ ಕಲಬುರಗಿ: ಬಹಳ ದಿನಗಳಿಂದ ಮುಂದೂಡುತ್ತಲೇ ಬರಲಾಗುತ್ತಿರುವ ಇಲ್ಲಿನ ವಿಮಾನ ನಿಲ್ದಾಣದಲ್ಲಿ ಆ. 26ರಂದು ಪ್ರಾಯೋಗಿಕ (ಪರೀಕ್ಷಾರ್ಥ)ವಾಗಿ ವಿಮಾನ ಹಾರಾಟ ನಡೆಸಲಾಗುತ್ತದೆ ಎಂದು ಕಾಂಗ್ರೆಸ್ ಸಂಸದೀಯ ನಾಯಕ ಡಾ| ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಸ್ಥಳೀಯ ಸಂಸ್ಥೆಗಳ ಚುನಾವಣೆ ಪ್ರಚಾರ ನಿಮಿತ್ತ ನಗರಾಕ್ಕಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಪರೀಕ್ಷಾರ್ಥ ವಿಮಾನ ಹಾರಾಟ ಮಾಡುವುದು ದೊಡ್ಡದಲ್ಲ. ಉಡಾನ್ ಯೋಜನೆ ಅಡಿ ಸೇರಿಸುವಂತೆ ಕೇಂದ್ರಕ್ಕೆ ಪತ್ರ ಬರೆಯಲಾಗಿದೆ. ಉಡಾನ್ ಯೋಜನೆ ಅಡಿ ಸೇರಿದರೆ ಅನುಕೂಲವಾಗುತ್ತದೆ ಎಂದರು. ಕಲಬುರಗಿ ವಿಮಾನ ನಿಲ್ದಾಣದ ಬಹುತೇಕ ಕಾಮಗಾರಿ ತಮ್ಮ ಸರ್ಕಾರದ ಅವಧಿಯಲ್ಲಿಯೇ ಮುಗಿದಿದೆ. ಬಿಜೆಪಿ ಸರ್ಕಾರದಲ್ಲಿ ಕೊಟ್ಟ ನಿಲ್ದಾಣ ನಿರ್ಮಾಣ ಕಾರ್ಯದ ಏಜೆನ್ಸಿ ಏನು ಕೆಲಸ ಮಾಡಿದೆ ಎಂಬುದು ಎಲ್ಲರಿಗೂ ಗೊತ್ತು. ಕಲಬುರಗಿ-ಶಿವಮೊಗ್ಗ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಏಕಕಾಲದಲ್ಲಿಯೇ ಚಾಲನೆ ನೀಡಲಾಗಿದೆ. ಶಿವಮೊಗ್ಗ ವಿಮಾನ ನಿಲ್ದಾಣ ಏಲ್ಲಿದೆ? ನಾವು ಬಿಜೆಪಿಯವರ ಹಾಗೆ
ಬರೀ ಮಾತನಾಡುವುದಿಲ್ಲ. ಕೆಲಸ ಮಾಡಿದ ಮೇಲೆ ಹೇಳುತ್ತೇವೆ ಎಂದರು. ಮಾಜಿ ಸಚಿವ ಡಾ| ಶರಣಪ್ರಕಾಶ ಪಾಟೀಲ, ಮಾಜಿ ಶಾಸಕ ಬಿ.ಆರ್. ಪಾಟೀಲ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಗದೇವ ಗುತ್ತೇದಾರ ಹಾಜರಿದ್ದರು.