Advertisement
ಈ ಬಗ್ಗೆ ಪತ್ರಿಕಾ ಪ್ರಕಟನೆ ನೀಡಿರುವ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ, ಈ ಸಂಬಂಧದ ವೇಳಾಪಟ್ಟಿಯನ್ನು ಪ್ರಾಧಿಕಾರದ ಜಾಲತಾಣ //kea.kar.nic.in ನಲ್ಲಿ ಪ್ರಕಟಿಸಿರುವ ಪಿಜಿಸಿಇಟಿ-2023 ವಾರ್ತಾಪತ್ರದಲ್ಲಿ ಗಮನಿಸಬೇಕು ಎಂದು ತಿಳಿಸಿದ್ದಾರೆ.
ಮೆಡಿಕಲ್ ಕೌನ್ಸೆಲಿಂಗ್ ಕಮಿಟಿ (ಎಂಸಿಸಿ) ಸ್ನಾತಕೋತ್ತರ ವೈದ್ಯಕೀಯ ಕೋರ್ಸುಗಳ ಅರ್ಹತಾ ಮಾನದಂಡವನ್ನು ಪರಿಷ್ಕರಿಸಿರುವ ಹಿನ್ನೆಲೆಯಲ್ಲಿ 2ನೇ ಸುತ್ತಿನ ಸೀಟು ಹಂಚಿಕೆ ವೇಳಾಪಟ್ಟಿಯನ್ನು ಕೂಡ ಪರಿಷ್ಕರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಈಗಾಗಲೇ ಪ್ರಾಧಿಕಾರಕ್ಕೆ ಮೂಲದಾಖಲೆಗಳನ್ನು ಸಲ್ಲಿಸಿರುವ ಮತ್ತು ಹೊಸದಾಗಿ ನೋಂದಣಿ ಮಾಡಿಕೊಂಡಿರುವ ಅಭ್ಯರ್ಥಿಗಳು ಸೆ.25ರ ಸಂಜೆ 5 ಗಂಟೆಯಿಂದ ಸೆ.27ರ ಮಧ್ಯಾಹ್ನ 2 ಗಂಟೆಯವರೆಗೆ ತಮ್ಮ ಆಪ್ಶನ್ಸ್ ಬದಲಾಯಿಸಲು ಮತ್ತು ರದ್ದುಪಡಿಸಲು ಅವಕಾಶವಿದೆ. ಸೆ.28ರ ರಾತ್ರಿ 9 ಗಂಟೆಯ ನಂತರ 2ನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶವನ್ನು ಪ್ರಕಟಿಸಲಾಗುವುದು ಎಂದು ರಮ್ಯಾ ತಿಳಿಸಿದ್ದಾರೆ. ಪಿಜಿ ದಂತ ವೈದ್ಯಕೀಯ
ಎಂಸಿಸಿ ಅರ್ಹತಾ ಮಾನ ದಂಡವನ್ನು ಪರಿಷ್ಕರಿಸಿರುವ ಹಿನ್ನೆಲೆಯಲ್ಲಿ ಅರ್ಹ ಸ್ನಾತ ಕೋತ್ತರ ದಂತ ವೈದ್ಯಕೀಯ ಅಭ್ಯರ್ಥಿಗಳು ಸೆ.24ರ ಮಧ್ಯಾಹ್ನ 2 ಗಂಟೆಯಿಂದ ಆರಂಭವಾಗಿ ಸೆ.25ರ ಮಧ್ಯರಾತ್ರಿಯವರೆಗೆ ಆನ್‌ಲೈನ್ ಮೂಲಕ ನೋಂದಣಿ, ಅರ್ಜಿ ಸಲ್ಲಿಕೆ ಮತ್ತು ಶುಲ್ಕ ಪಾವತಿಸಬಹುದು ಎಂದು ಪ್ರಕಟನೆ ತಿಳಿಸಿದೆ.
Related Articles
Advertisement