Advertisement

ತ್ಯಾಜ್ಯ ಸಂಗ್ರಹಣೆಗೆ ಶುಲ್ಕ ವಿಧಿಸಲು ಸೂಚನೆ

03:32 PM Mar 02, 2021 | Team Udayavani |

ದೇವನಹಳ್ಳಿ: ಜಿಲ್ಲೆಯಲ್ಲಿರುವ ಎಲ್ಲ ನಗರಸಭೆ ಹಾಗೂ ಪುರಸಭೆ ವ್ಯಾಪ್ತಿಯಲ್ಲಿನ ಮನೆ-ಮನೆಗೆ ತೆರಳಿ, ವಿಂಗಡಣೆ ಮಾಡಿರುವ ಕಸ ಸಂಗ್ರಹಣೆ ಮಾಡಬೇಕು ಹಾಗೂ ತ್ಯಾಜ್ಯ ಸಂಗ್ರಹಣೆಗೆ ನಿರ್ದಿಷ್ಟಶುಲ್ಕ ವಿಧಿಸಬೇಕು ಎಂದು ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್‌ ತಿಳಿಸಿದರು.

Advertisement

ತಾಲೂಕಿನ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗೊಬ್ಬರ ವನ್ನು ರಿಯಾಯಿತಿ ದರದಲ್ಲಿ ಮಾರಾಟ ಮಾಡಲುಸ್ಥಳೀಯ ಕೃಷಿ ಇಲಾಖೆ ಅಧಿಕಾರಿಗಳೊಂದಿಗೆನಡೆದ ಸಭೆಯಲ್ಲಿ ಮಾತನಾಡಿದ ಅವರು, ನಗರಸಭೆಹಾಗೂ ಪುರಸಭೆಗಳು ರಾಷ್ಟ್ರೀಯ ಹಸಿರುನ್ಯಾಯಾಧೀಕರಣದ ಪೀಠ ನೀಡಿರುವ ಎಲ್ಲ ಆದೇಶಗಳನ್ನು ತಪ್ಪದೇ ಪಾಲಿಸುವ ಕುರಿತು ಮಾಧ್ಯಮಗಳ ಮೂಲಕ ಜಾಹೀರಾತು ನೀಡುವುದು.ಕರಪತ್ರ ಹಂಚುವ ಮೂಲಕ ಕಸ ವಿಂಗಡಣೆ ಹಾಗೂ ಶುಲ್ಕ ವಿಧಿಸುವ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು. ತ್ಯಾಜ್ಯ ವಿಲೇವಾರಿ ಘಟಕಗಳಿಗೆ ಈಗಾಗಲೇ ಜಮೀನು ಮಂಜೂರು ಮಾಡಲಾಗಿದ್ದು, ಸರ್ವೆ ಮಾಡಿಸಿ ತಮ್ಮ ವಶಕ್ಕೆ ಪಡೆದುಕೊಳ್ಳಬೇಕು ಎಂದರು.

5 ಸಾವಿರ ರೂ. ನಿಗದಿ: ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಸುಮಾ ಮಾತನಾಡಿ, ದೇವನಹಳ್ಳಿ ಪುರಸಭೆಯಲ್ಲಿ ಪ್ರತಿದಿನ 2ಟನ್‌ ಹಸಿ ಕಸ ಸಂಗ್ರಹವಾಗುತ್ತಿದ್ದು, ದಿನವೊಂದಕ್ಕೆ0.5 ಟನ್‌ ಗೊಬ್ಬರ ತಯಾರಾಗುತ್ತಿದೆ. ಪ್ರತಿ ಟನ್‌ಗೆ ಐದು ಸಾವಿರ ರೂಪಾಯಿ ನಿಗದಿ ಪಡಿಸಲಾಗಿದೆ. ಪ್ರತಿತಿಂಗಳು ಒಂದು ಟನ್‌ ಗೊಬ್ಬರ ಮಾರಾಟಮಾಡಲಾಗುತ್ತಿದೆ. ವಿಜಯಪುರ ಪುರಸಭೆಯಲ್ಲಿ ಪ್ರತಿದಿನ ಒಂದು ಟನ್‌ ಹಸಿ ಕಸ ಸಂಗ್ರಹವಾಗುತ್ತಿದೆ ಎಂದು ಮಾಹಿತಿ ನೀಡಿದರು.

15 ಟನ್‌ ಗೊಬ್ಬರ ಮಾರಾಟ: ದೊಡ್ಡಬಳ್ಳಾಪುರ ನಗರಸಭೆಯಲ್ಲಿ ಪ್ರತಿದಿನ 8 ಟನ್‌ ಹಸಿಕಸ ಸಂಗ್ರಹಣೆಯಾಗುತ್ತಿದ್ದು, ಪ್ರತಿದಿನ 4ಟನ್‌ ಗೊಬ್ಬರತಯಾರಾಗುತ್ತಿದೆ. ಪ್ರತಿ ಟನ್‌ಗೆ 1 ಸಾವಿರ ರೂಪಾಯಿನಿಗದಿ ಪಡಿಸಲಾಗಿದ್ದು, ಪ್ರತಿ ತಿಂಗಳು 15 ಟನ್‌ ಗೊಬ್ಬರ ಮಾರಾಟ ಮಾಡಲಾಗುತ್ತಿದೆ. ದಾಸ್ತಾನಿನಲ್ಲಿ144 ಟನ್‌ ಗೊಬ್ಬರ ಶೇಖರಿಸಲಾಗಿದ್ದು, ರೈತರಿಗೆ ಈದರದಲ್ಲೇ ಮಾರಾಟ ಮಾಡಲಾಗುತ್ತಿದೆ ಎಂದರು.

ಹೊಸಕೋಟೆ ನಗರಸಭಾ ವ್ಯಾಪ್ತಿಯಲ್ಲಿ ಪ್ರತಿದಿನ 7ಟನ್‌ ಹಸಿ ಕಸ ಸಂಗ್ರಹವಾಗುತ್ತಿದ್ದು, ಗೊಬ್ಬರವನ್ನು ನೇರವಾಗಿ ರೈತರಿಗೆ ಉಚಿತವಾಗಿ ನೀಡಲಾಗುತ್ತಿದೆ. ನೆಲಮಂಗಲ ನಗರಸಭೆಯಲ್ಲಿ ಪ್ರತಿದಿನ 3 ಟನ್‌ ಹಸಿ ಕಸ ಸಂಗ್ರಹವಾಗುತ್ತಿದ್ದು, ಪ್ರತಿದಿನ ಒಂದು ಟನ್‌ಗೊಬ್ಬರ ತಯಾರಾಗುತ್ತಿದೆ.ರೈತರಿಗೆ ಉಚಿತವಾಗಿ ನೀಡಲಾಗುತ್ತಿದೆ ಎಂದರು.

Advertisement

ಕೃಷಿ ಇಲಾಖೆ ಜಂಟಿ ನಿರ್ದೇಶಕ ಜಿ.ಎಸ್‌. ಜಯಸ್ವಾಮಿ, ನಗರಸಭೆ ಆಯುಕ್ತರು, ಪುರಸಭೆಮುಖ್ಯಾಧಿಕಾರಿ ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.

ಜಿಪಿಎಸ್‌ ತಂತ್ರಜ್ಞಾನ ಅಳವಡಿಸಿ :

ಕೆಲವು ಕಡೆ ರೈತರು ಜಮೀನು ನೀಡಲು ನಿರಾಕರಿಸಿದ ಘಟನೆಗಳು ನಡೆದಿದ್ದು, ಅಂತಹ ಸಂದರ್ಭದಲ್ಲಿ ರೈತರನ್ನು ಮನವೊಲಿಸುವ ಪ್ರಯತ್ನ ಮಾಡಬೇಕು. ಕಸ ಸಂಗ್ರಹಣೆ ಮಾಡುವ ಎಲ್ಲ ವಾಹನಗಳಿಗೆ ಜಿಪಿಎಸ್‌ ತಂತ್ರಜ್ಞಾನ ಅಳವಡಿಸಬೇಕು. ವಿಲೇವಾರಿ ಸಂದರ್ಭದಲ್ಲಿ

ಪ್ಲಾಸ್ಟಿಕ್‌ನಂತಹ ವಸ್ತುಗಳನ್ನು ಹರಾಜು ಪ್ರಕ್ರಿಯೆ ನಡೆಸಿ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳುವುದರೊಂದಿಗೆ ನಗರ ವ್ಯಾಪ್ತಿಯಲ್ಲಿ ಹೊಸ ಮನೆ ನಿರ್ಮಿಸುವ ಸಂದರ್ಭದಲ್ಲಿ ಹಳೆಯ ಮನೆ ನೆಲಸಮ ಮಾಡುವ ವೇಳೆ ಕಟ್ಟಡಸಾಮಗ್ರಿಗಳನ್ನು ಸೂಕ್ತ ರೀತಿಯಲ್ಲಿ ವಿಲೇವಾರಿಮಾಡಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್‌ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next